ನವದೆಹಲಿ: ಶ್ರೀಲಂಕಾದಲ್ಲಿ ಭಾರೀ ಪ್ರವಾಹ ಮತ್ತು ಭೂಕುಸಿತದ ಅವಘಡ ಸಂಭವಿಸಿದ್ದು, ಲಕ್ಷಾಂತರ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಹಿನ್ನಲೆಯಲ್ಲಿ ಭಾರತೀಯ ನೌಕಾಪಡೆ ರಕ್ಷಣೆಗೆ ಧಾವಿಸಿದೆ.
ಕಳೆದೆರಡು ದಿನಗಳಿಂದಲೂ ಶ್ರೀಲಂಕಾದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಇದರಿಂದಾಗಿ ಪ್ರವಾಹ ಎದುರಾಗಿದೆ. ಅಲ್ಲದೆ, ಭೂಕುಸಿತ ಸಂಭವಿಸುತ್ತಿದ್ದುಸ ಲಕ್ಷಾಂತರ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಹಿನ್ನಲೆಯಲ್ಲಿ ಭಾರತ ಸರ್ಕಾರ ರಕ್ಷಣೆಗಾಗಿ ಸೇನಾ ನೌಕೆ ಹಾಗೂ ಪರಿಹಾರ ಸಾಮಾಗ್ರಿಗಳನ್ನು ರವಾನಿಸಿದೆ ಎಂದು ವರದಿಗಳು ತಿಳಿಸಿವೆ.
ಈಗಾಗಲೇ ನೌಕಾ ಪಡೆ ಶ್ರೀಲಂಕಾದತ್ತ ಹೋಗಿದ್ದು, ಯಾವಾಗ ಬೇಕಾದರೂ ಕೊಲಂಬೋ ತಲುಪಬಹುದು ಎಂದು ಮೂಲಗಳಿಂದ ತಿಳಿದುಬಂದಿದೆ.
ನೌಕಾ ಪಡೆಯೊಂದಿಗೆ ವೈದ್ಯಕೀಯ ಸಾಮಾಗ್ರಿಗಳು, ರಕ್ಷಣಾ ಕಾರ್ಯಾಚರಣೆಗಾಗಿ ಹೆಲಿಕಾಪ್ಟರ್ ಗಳು ಹಾಗೂ ಇನ್ನಿತರೆ ಸಾಮಾಗ್ರಿಗಳನ್ನು ಕಳುಹಿಸಿಕೊಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನಿನ್ನೆ ಸಂಭವಿಸಿದ ಭೂಕುಸಿತದಲ್ಲಿ 91ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದರು. ಪ್ರವಾಹದಿಂದಾಗಿ 13 ಜಿಲ್ಲೆಯ 50,000ಕ್ಕೂ ಹೆಚ್ಚು ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆಂದು ತಿಳಿದುಬಂದಿದೆ. ಈಗಾಗಾಗಲೇ ರಕ್ಷಣಾ ಕಾರ್ಯಾಚರಣೆಗಳು ಭರದಿಂದ ಸಾಗಿದ್ದು, ಈವರೆಗೂ 8,000 ಜನರನ್ನು ಸ್ಥಳಾಂತರ ಮಾಡಲಾಗಿದೆ ಎಂದು ವರದಿಗಳು ತಿಳಿಸಿವೆ.
ದ್ವೀಪ ರಾಷ್ಟ್ರ ಲಂಕಾದಲ್ಲಿ ಈ ವರ್ಷ ದಾಖಲಾಗಿರುವ ಅತಿ ಹೆಚ್ಚಿನ ಪ್ರಮಾಣದ ಮಳೆ ಇದಾಗಿದ್ದು, ದೇಶದ ಪಶ್ಚಿಮ ಕರಾವಳಿ ವ್ಯಾಪ್ತಿಯಲ್ಲಿರುವ ಕಲುತರಾ ಜಿಲ್ಲೆಯ 5 ಕಡೆ ಭೂಕುಸಿತ ಸಂಭವಿಸಿರುವುದಾಗಿ ಮಾಧ್ಯಮಗಳ ವರದಿಗಳು ತಿಳಿಸಿವೆ.
ಪ್ರವಾಸ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಶ್ರೀಲಂಕಾ ಗೃಹ ಖಾತೆ ವ್ಯವಹಾರಗಳ ಸಚಿವ ವಾಜಿರಾ ಅಬೇವರ್ಧನ ಅವರು, ಮುಂದಿನ 72 ಗಂಟೆಗಳಲ್ಲಿ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುವ ಮುನ್ಸೂಚನೆಯಿದೆ ಎಂದು ಎಚ್ಚರಿಸಿದ್ದಾರೆ.

loading...