ಸತೀಶ ಜಾರಕಿಹೊಳಿ ನೇತೃತ್ವದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ : ಶಾಸಕಿ ಹೆಬ್ಬಾಳಕರ

0
31

ಕನ್ನಡಮ್ಮ ಸುದ್ದಿ-ಬೆಳಗಾವಿ : ಬೆಳಗಾವಿ ಜಿಲ್ಲೆಯ ಕಾಂಗ್ರೆಸ್ ಅಭ್ಯರ್ಥಿ ಪರ ¸ಸಚಿವ
ಸತೀಶ ಜಾರಕಿಹೊಳಿ ನೇತೃತ್ವದಲ್ಲಿ ಪ್ರಚಾರವನ್ನು ನಡೆಸಲಾಗುತ್ತಿದೆ. ಅದೇ ರೀತಿ ಲಖನ್ ಜಾರಕಿಹೊಳಿ ಕಾಂಗ್ರೆಸ್ ನವರೆ ಅಗಿರುವುದರಿಂದ ಅವರಿಗೆ ಗೋಕಾಕ್ ಕ್ಷೇತ್ರದ ಜವಾಬ್ದಾರಿ ನೀಡಿಲಾಗಿದೆ ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಹೇಳಿದರು.
ರವಿವಾರ ಮಾಧ್ಯದೊಂದಿಗೆ ಮಾತನಾಡಿದ ಅವರು, ಬೆಳಗಾವಿ ಜಿಲ್ಲೆ ಚುನಾವಣೆ ಜವಾಬ್ದಾರಿ ಸತೀಶ ಜಾರಕಿಹೊಳಿಯವರಿಗೆ ನೀಡಲಾಗಿದೆ. ಅಲ್ಲದೆ ಆಯಾ ಕ್ಷೇತ್ರದ ಶಾಸಕರಿಗೆ ಪ್ರಚಾರದ ಜವಾಬ್ದಾರಿ ನೀಡಲಾಗಿದೆ.ನಾನು ಸಹ ಗ್ರಾಮೀಣ ಕ್ಷೇತ್ರದಲ್ಲಿ ನಿಷ್ಠೆಯಿಂದ ಪ್ರಚಾರ ನಡೆಸುತ್ತಿದ್ದು, ಈ ಬಾರಿ ಗ್ರಾಮೀಣ ಕ್ಷೇತ್ರದ ಮತಗಳು ಲೀಡ್ ನೀಡಲಾಗುವುದು ಎಂದು ಹೇಳಿದರು.
ಅದೇ ಲಖನ್ ಜಾರಕಿಹೊಳಿ ಬಗ್ಗೆ ಮಾತನಾಡಿ, ಲಖನ್ ಜಾರಕಿಹೊಳಿ ಕಾಂಗ್ರೆಸ್ ಪಕ್ಷದವರೇ ಆಗಿದ್ದರಿಂದ ಅವರಿಗೆ ಗೋಕಾಕ್ ಜವಾಬ್ದಾರಿ ನೀಡಲಾಗಿದೆ. ಕಳೆದ ಚುನಾವಣೆಯಲ್ಲಿ ಹೆಚ್ಚಿನ ಮತಗಳನ್ನು ಲೀಡ್ ನೀಡಿದ್ದರು. ಅದೇ ರೀತಿ ಈ ಬಾರಿ ಅವರಿಗೆ ಜವಾಬ್ದಾರಿ ನೀಡಿರುವುದರಿಂದ ಹೆಚ್ಚು ಮತಗಳು ಬರುವ ನಿರೀಕ್ಷೆ ಇದೆ ಎಂದರು.

loading...