ಸದಸ್ಯತ್ವ ಅಭಿಯಾನ: ೧ ಕೋಟಿ ಸದಸ್ಯತ್ವ ಗುರಿ ಹೊಂದಲಾಗಿದೆ: ಗೋವಿಂದ ಕಾರಜೋಳ

0
41

ವಿಜಯಪುರ : ವಿಶ್ವದಲ್ಲಿಯೇ ಅತೀ ಹೆಚ್ಚು ಸದಸ್ಯರನ್ನು ಹೊಂಧಿರುವ ಭಾರತೀಯ ಜನತಾ ಪಕ್ಷ ಈ ಬಾರಿಯೂ ಸದಸ್ಯತ್ವ ಅಭಿಯಾನ ಚುರುಕುಗೊಳಿಸಿದ್ದು, ಕರ್ನಾಟಕದಲ್ಲಿ ೧ ಕೋಟಿ ಸದಸ್ಯತ್ವ ಗುರಿ ಹೊಂದಲಾಗಿದೆ ಎಂದು ವಿರೋಧ ಪಕ್ಷದ ಉಪನಾಯಕ ಗೋವಿಂದ ಕಾರಜೋಳ ಹೇಳಿದರು.
ನಗರದ ಹೇಮರಡ್ಡಿ ಕಲ್ಯಾಣ ಮಂಟಪದಲ್ಲಿ ಭಾರತೀಯ ಜನತಾ ಪಕ್ಷದ ಜಿಲ್ಲಾ ಸಂಘಟನಾ ಪರ್ವ ಸದಸ್ಯತ್ವ ಅಭಿಯಾನ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ೨೦೧೯ ರ ಲೋಕಸಭಾ ಚುನಾವಣೆಯಲ್ಲಿ ಅಭೂತಪೂರ್ವ ಗೆಲವು ಸಾಧಿಸಿರುವ ಬಿಜೆಪಿಯ ಬಗ್ಗೆ ಜನತೆ ಅಪಾರ ವಿಶ್ವಾಸ, ಅಭಿಮಾನ ಹೊಂದಿದ್ದಾರೆ. ಮುಂಬರುವ ಜುಲೈ ೦೬ ರಿಂದ ಆಗಸ್ಟ್ ೧೧ ರವರೆಗೆ ಬಿಜೆಪಿ ಸದಸ್ಯತ್ವ ಅಭಿಯಾನ ನಡೆಸಲು ನಿರ್ಧರಿಸಿದೆ, ಸದ್ಯ ದೇಶದಲ್ಲಿ ೧೧ಕೋಟಿ ಜನರು ಬಿಜೆಪಿ ಸದಸ್ಯತ್ವ ಪಡೆದಿದ್ದು, ಈ ಸದಸ್ಯತ್ವ ಸಂಖ್ಯೆ ಈ ಬಾರಿ ಮತ್ತಷ್ಟು ವೃದ್ಧಿಯಾಗಲಿದೆ ಎಂದು ವಿವರಿಸಿದರು. ರಾಜ್ಯ ಸರ್ಕಾರ ಅಭಿವೃದ್ಧಿ ಮಾಡುವಲ್ಲಿ ಸಂಪೂರ್ಣ ವಿಫಲವಾಗಿದೆ. ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಗ್ರಾಮ ವಾಸ್ತವ ಒಂದು ಡ್ರಾಮಾ ಅಷ್ಟೆÃ, ರಾಜ್ಯದ ಬಹುತೇಕ ಜಿಲ್ಲೆಗಳ ಜನತೆ ಬರದಿಂದ ತತ್ತರಿಸುತ್ತಿವೆ, ಜನರು ಗುಳೇ ಹೋಗುತ್ತಿದ್ದಾರೆ, ಇಂತಹ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಗ್ರಾಮ ವಾಸ್ತವ್ಯದ ಸಲುವಾಗಿ ಕೋಟ್ಯಂತರ ರೂ. ಪೊಲು ಮಾಡುತ್ತಿದ್ದಾರೆ ಎಂದು ಕಾರಜೋಳ ಆಕ್ರೊÃಶ ವ್ಯಕ್ತಪಡಿಸಿದರು. ರೈತರ ಸಾಲ ಮನ್ನಾ ಮಾಡದ ಮೈತ್ರಿ ಸರ್ಕಾರ ಅವರವರ ಕಚ್ಚಾಟದಿಂದ ಸರ್ಕಾರ ಬಿದ್ದೊÃಗಲಿದೆ. ಭಾರತೀಯ ಜನತಾ ಪಕ್ಷ ಮತ್ತೆ ಅಧಿಕಾರ ಪಡೆದುಕೊಳ್ಳುತ್ತದೆ ಎಂದು ಇದೇ ಸಂದರ್ಭದಲ್ಲಿ ಭವಿಷ್ಯ ನುಡಿದರು.

ಜಿಲ್ಲೆಯಲ್ಲಿ ೪ ಲಕ್ಷ ಸದಸ್ಯತ್ವ ಗುರಿ
ಅಧ್ಯಕ್ಷತೆ ವಹಿಸಿದ್ದ ಬಿಜೆಪಿ ಜಿಲ್ಲಾಧ್ಯಕ್ಷ ಚಂದ್ರಶೇಖರ ಕವಟಗಿ ಮಾತನಾಡಿ, ಲೋಕಸಭಾ ಚುನಾವಣೆ ಬಳಿಕ ಸದಸ್ಯತ್ವ ಅಭಿಯಾನಕ್ಕೆ ಬಿಜೆಪಿ ಚಾಲನೆ ನೀಡಲಿದೆ. ಜುಲೈ ೬ ರಿಂದ ಸದಸ್ಯತ್ವ ಅಭಿಯಾನ ಆರಂಭವಾಗಲಿದ್ದು, ವಿಜಯಪುರ ಜಿಲ್ಲೆಯಲ್ಲಿ ೪ಲಕ್ಷಕ್ಕೂ ಹೆಚ್ಚು ಸದಸ್ಯರನ್ನು ಸೇರಿಸುವ ಗುರಿ ಹೊಂದಲಾಗಿದೆ. ಸದಸ್ಯತ್ವ ಅಭಿಯಾನ ನಡೆಸುವ ಜೊತೆಗೆ ಭೂತ್ ಮಟ್ಟದ ತನಕ ಸದಸ್ಯತ್ವ ನೋಂದಣಿ ಗುರಿ ಹೊಂದಲಾಗಿದೆ ಎಂದರು.
ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ, ಬಿಜೆಪಿ ಮುಖಂಡ ವಿಜುಗೌಡ ಪಾಟೀಲ, ಮಾಜಿ ಶಾಸಕ ರಮೇಶ ಭೂಸನೂರ, ಬೆಳಗಾಂವ ವಿಭಾಗದ ಸಂಘಟನಾ ಕಾರ್ಯದರ್ಶಿ ಪ್ರಕಾಶ ಅಕ್ಕಲಕೋಟ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಆರ್.ಎಸ್.ಪಾಟೀಲ ಕುಚಬಾಳ, ಸಂಗರಾಜ ದೇಸಾಯಿ, ರವಿಕಾಂತ ಬಗಲಿ, ವಿವೇಕಾನಂದ ಡಬ್ಬಿ, ದಯಾಸಾಗರ ಪಾಟೀಲ, ಡಾ.ಗೋಪಾಲ ಕಾರಜೋಳ, ಶಿವರುದ್ರ ಬಾಗಲಕೋಟ, ಮಲ್ಲಮ್ಮ ಜೋಗೂರ ಉಪಸ್ಥಿತರಿದ್ದರು.

loading...