ಸರಕಾರಿ ಶಾಲೆಗಳಿಂದ ವಿದ್ಯಾರ್ಥಿಗಳ ಭವಿಷ್ಯ ಬದಲಾವಣೆ

0
9

ಸರಕಾರಿ ಶಾಲೆಗಳಿಂದ ವಿದ್ಯಾರ್ಥಿಗಳ ಭವಿಷ್ಯ ಬದಲಾವಣೆ
ಖಾನಾಪುರ:
ತಾಲೂಕಿನ ನಂದಗಡ ಗ್ರಾಮದ ಸಂಗೊಳ್ಳಿ ರಾಯಣ್ಣ ಸನಿವಾಸ ವಸತಿ ಶಾಲೆಯಲ್ಲಿ ಭಾನುವಾರ ಶಾಲೆಯ ಹಳೆಯ ವಿದ್ಯಾರ್ಥಿಗಳ ಸಂಘದ ವತಿಯಿಂದ ಹಳೆದ ವಿದ್ಯಾರ್ಥಿಗಳ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮವನ್ನು ಬೆಳಗಾವಿಯ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉಪ ನಿರ್ದೇಶಕಿ ಸಾಧನಾ ಉದ್ಘಾಟಿಸಿದರು.

ನಂತರ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು, ಶಾಲೆಯ ಈಗಿನ ವಿದ್ಯಾರ್ಥಿಗಳ ಮುಂದೆ ಹಳೆಯ ವಿದ್ಯಾರ್ಥಿಗಳು ನಿಂತು ತಮ್ಮ ಸಾಧನೆಯನ್ನು ಹೆಮ್ಮೆಯಿಂದ ಹೇಳಿಕೊಳ್ಳುವ ಮಹತ್ವದ ಕಾರ್ಯಕ್ರಮಕ್ಕೆ ಶಾಲೆಯ ಹಳೆಯ ವಿದ್ಯಾರ್ಥಿಗಳ ಸಂಘ ಮುಂದಾಗಿದೆ.

ನೀವೂ ಸಹ ಮುಂದೊAದು ದಿನ ಇವರಂತೆ ಸಾಧಕರಾಗಿ ನಿಂತು ನಿಮ್ಮ ಸಾಧನೆಯನ್ನು ಹೆಮ್ಮೆಯಿಂದ ಹೇಳಿಕೊಳ್ಳುವಷ್ಟರ ಮಟ್ಟದಲ್ಲಿ ಬೆಳೆಯಬೇಕು. ಇದಕ್ಕಾಗಿ ನಿಮ್ಮೆದುರಲ್ಲೇ ನಿಂತಿರುವ ನಾನಾ ಕ್ಷೇತ್ರಗಳ ಸಾಧಕರಿಂದ ಪ್ರೇರಣೆ ಪಡೆದು ನಿಮ್ಮ ಭವಿಷ್ಯವನ್ನು ಉಜ್ವಲಗೊಳಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಈ ಸಂದರ್ಭದಲ್ಲಿ ರಾಷ್ಟçಪ್ರಶಸ್ತಿ ವಿಜೇತ ಶಾಲೆಯ ನಿವೃತ್ತ ಶಿಕ್ಷಕಿ ವನಿತಾ ಜೋಶಿ, ಸಮಾಜ ಕಲ್ಯಾಣ ಅಧಿಕಾರಿ ಹಣಮಂತ ಬಿರಾದಾರ, ವಸತಿನಿಲಯ ಮೇಲ್ವಿಚಾರಕ ಗಿರೀಶ ಕುರಹಟ್ಟಿ, ಶಿಕ್ಷಕರಾದ ದೀಪಾ ಶೀಲಿ, ಕಾಂಬಳೆ ಸೇರಿದಂತೆ ಶಿಕ್ಷಕರು, ಸಂಪನ್ಮೂಲ ವ್ಯಕ್ತಿಗಳು, ಪಾಲಕರು, ಮಾಜಿ ಮತ್ತು ಹಾಲಿ ವಿದ್ಯಾರ್ಥಿಗಳು, ಸಿಬ್ಬಂದಿ ಇದ್ದರು. ರವೀಂದ್ರ ಪಾಟೀಲ ಸ್ವಾಗತಿಸಿದರು. ಬಸವರಾಜ ಧರ್ಮಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಶಿಗೌಡ ನಿರ್ವಾಣಿ ವಂದಿಸಿದರು.

loading...