ಸಾಮಾಜಿಕ‌ ಹೋರಾಟಗಾರ ಎಸ್.ಆರ್.ಹಿರೇಮಠ್ ಗೆ ಭದ್ರತೆ ನೀಡಲು ಒತ್ತಾಯ

0
14

ಬೆಂಗಳೂರು:- ಸಾಮಾಜಿಕ‌ ಹೋರಾಟಗಾರ ಎಸ್.ಆರ್.ಹಿರೇಮಠ್ ಅವರಿಗೆ ಭದ್ರತೆ ನೀಡಬೇಕು ಎಂದು‌‌ ಒತ್ತಾಯಿಸಿ ಕರ್ನಾಟಕ ರಾಷ್ಟ್ರ ಸಮಿತಿ ವತಿಯಿಂದ ರವಿಕೃಷ್ಣಾ ರೆಡ್ಡಿ ಅವರು ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.
ಸಮಾಜ ಪರಿವರ್ತನ ಸಮುದಾಯ ಸಂಸ್ಥೆಯ ಮುಖಂಡರಾದ ಎಸ್ ಆರ್ ಹಿರೇಮಠ ಅವರಿಗೆ ಜೀವ ಬೆದರಿಕೆ ಇರುವ ಹಿನ್ನೆಲೆಯಲ್ಲಿ
ಪೊಲೀಸ್ ಬಿಗಿ ಭದ್ರತೆ ಒದಗಿಸುವಂತೆ ರೆಡ್ಡಿ ಅವರು ಪತ್ರದಲ್ಲಿ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹಾಗೂ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಒತ್ತಾಯಿಸಿದ್ದಾರೆ.
ಇತ್ತೀಚೆಗೆ ಮಾಜಿ ಮುಖ್ಯಮಂತ್ರಿ ಎಚ್‌ಡಿ.ಕೆ ಹಾಗೂ ಡಿ.ಸಿ.ತಮ್ಮಣ್ಣ ಅವರಿಗೆ ಸೇರಿದ ಆಸ್ತಿ ಪ್ರಕರಣದ ಕುರಿತು ಮಾಹಿತಿ ಪಡೆಯಲು
ಕೇತನಾಗಹಳ್ಳಿಗೆ ಭೇಟಿ ನೀಡಿದಾಗ ಮೊಟ್ಟೆ ಹಾಗೂ ಟಮೋಟಾ ಎಸೆದು ಜೆಡಿಎಸ್ ಕಾರ್ಯಕರ್ತರು ಹಿರೇಮಠ ಅವರ ಮೇಲೆ ಹಲ್ಲೆ ನಡೆಸಿದ್ದರು.
ಹೀಗಾಗಿ ಅವರಿಗೆ ಪ್ರಾಣ ಬೆದರಿಕೆ ಇರುವುದರಿಂದ ಭದ್ರತೆ ಕಲ್ಪಿಸುವಂತೆ ರವಿ ಕೃಷ್ಣಾ ರೆಡ್ಡಿ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

loading...