ಸಾರಿಗೆ ನೌಕರರ ಸಮಸ್ಯೆ ಬಗ್ಗೆ ಸಿಎಂ ಜೊತೆ ಚರ್ಚೆ: ಪರಮೇಶ್ವರ್‌

0
25

ಬೆಂಗಳೂರು: ಕೆಎಸ್‌ಆರ್‌ಟಿಸಿ ಸ್ಟಾಫ್‌ ಆ್ಯಂಡ್‌ ವರ್ಕರ್ಸ್‌ ಫೆಡರೇಷನ್‌ನ ನಿಯೋಗ ಇಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಅವರ ಸದಾಶಿವನಗರ ಗೃಹ ಕಚೇರಿಗೆ ಆಗಮಿಸಿ, ವಿವಿಧ ಬೇಡಿಕೆಗಳ ಈಡೇರಿಸುವಂತೆ ಮನವಿ ಪತ್ರ ಸಲ್ಲಿಸಿತು.

ಬಳಿಕ ಮಾತನಾಡಿದ ಪರಮೇಶ್ವರ್, ಫೆಡರೇಷನ್‌ನ ಪದಾಧಿಕಾರಿಗಳು ಇಂದು ವಿವಿಧ ಬೇಡಿಕೆ ಈಡೇರಿಸಲು ಸಾರಿಗೆ ನೌಕರರ ಬೆಂಗಳೂರು ಚಲೋ ಕಾರ್ಯಕ್ರಮ ನಡೆಸುತ್ತಿದ್ದಾರೆ. ವಿದ್ಯಾರ್ಥಿಗಳ ಬಸ್‌ ಪಾಸ್‌ ವೆಚ್ಚದ ಬಾಬ್ತು ಭರಿಸುವುದು, ನಾಲ್ಕು ನಿಗಮಗಳ ಬದಲು ಒಂದೇ ನಿಗಮ ಮಾಡುವುದು ಸೇರಿದಂತೆ ಅನೇಕ ಬೇಡಿಕೆ ಇಟ್ಟಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವರ ಜೊತೆ ಚರ್ಚಿಸಲಾಗುವುದು. ಅಲ್ಲದೆ, ಸಾರಿಗೆ ಅಧಿಕಾರಿಗಳೊಂದಿಗೆ ಸಭೆ ಮಾಡಲಾಗುವುದು ಎಂದು ಭರವಸೆ ನೀಡಿದರು.

loading...