ಸಾಹಿತಿ ಪಾಟೀಲ ಪುಟ್ಟಪ್ಪ ಜನ್ಮದಿನ: ಮುಖ್ಯಮಂತ್ರಿ ಯಡಿಯೂರಪ್ಪ ಶುಭಾಶಯ

0
2

ಬೆಂಗಳೂರು-  ಇಂದು ನಾಡೋಜ, ಹಿರಿಯ ಸಾಹಿತಿ ಪಾಟೀಲ ಪುಟ್ಟಪ್ಪ ಅವರ ಜನ್ಮದಿನ. ಪಾಪು ಅವರ ಜನ್ಮದಿನದ ಅಂಗವಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೇರಿ ಅನೇಕ ಗಣ್ಯರು, ಸಾಹಿತಿಗಳು ಶುಭಾಶಯ ಕೋರಿದ್ದಾರೆ.
ನಿರ್ಭಿಡೆಯ ಪತ್ರಕರ್ತರು, ಸೃಜನಶೀಲ ಸಾಹಿತಿಗಳು, ನಾಡಿನ ಸಾಕ್ಷಿಪ್ರಜ್ಞೆಯಂತಿರುವ ಅಪ್ರತಿಮ ಹೋರಾಟಗಾರರಾದ ನಾಡೋಜ  ಪಾಟೀಲ ಪುಟ್ಟಪ್ಪ ಅವರಿಗೆ ಜನ್ಮದಿನದ ಶುಭಾಶಯಗಳು. ಕರ್ನಾಟಕ ಏಕೀಕರಣಕ್ಕಾಗಿ ಅವರು ನಡೆಸಿದ ಹೋರಾಟ ಅನನ್ಯ. ರಾಜ್ಯಸಭಾ ಸದಸ್ಯರಾಗಿ ಅವರ ಕೊಡುಗೆ ಅನುಪಮ. ಶತಾಯುಷಿ ಪ್ರೀತಿಯ ಪಾಪು ಅವರ ಕ್ಷೇಮಕ್ಕಾಗಿ ಪ್ರಾರ್ಥಿಸುವೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.
ನಾಡೋಜ ಪಾಟೀಲ ಪುಟ್ಟಪ್ಪ ಹುಬ್ಬಳ್ಳಿ ಮೂಲದ ಖ್ಯಾತ ಲೇಖಕರು. ಇವರು ‘ಪ್ರಪಂಚ’ ಪತ್ರಿಕೆಯ ಸ್ಥಾಪಕ ಸಂಪಾದಕರಾಗಿದ್ದಾರೆ.
14 ಜನವರಿ 1919ರಲ್ಲಿ , ಹಾವೇರಿ ತಾಲೂಕಿನ ಕುರುಬಗೊಂಡದಲ್ಲಿ ಜನಿಸಿಸಿದ ಪುಟ್ಟಪ್ಪ ಅವರ  ತಂದೆ ಸಿದ್ಧಲಿಂಗಪ್ಪ, ತಾಯಿ ಮಲ್ಲಮ್ಮ. ಸ್ವಗ್ರಾಮ ಹಾಗೂ ಹಾವೇರಿಯಲ್ಲಿ ಪ್ರಾಥಮಿಕ  ಶಿಕ್ಷಣ ಪಡೆದ ಇವರು ಲಿಂಗರಾಜ ಕಾಲೇಜಿನಲ್ಲಿ ಕಾನೂನು ಶಿಕ್ಷಣ ಪಡೆಡಿದ್ದಾರೆ. ಕುರುಬಗೊಂಡ, ಬ್ಯಾಡಗಿ, ಹಾವೇರಿ, ಧಾರವಾಡ‍ದಲ್ಲಿ. ಕರ್ನಾಟಕ ಕಾಲೇಜಿನಲ್ಲಿ ಪದವಿ ಪಡೆದು, ಬೆಳಗಾವಿಯಲ್ಲಿ ಕಾನೂನು ಅಧ್ಯಯನ ಮಾಡಿದ್ದರು.
ಮುಂಬಯಿಯಲ್ಲಿ, ಹುಬ್ಬಳ್ಳಿಯಲ್ಲಿ ಪತ್ರಿಕೆಗಳಲ್ಲಿ ಕೆಲಸ ಮಾಡಿದ್ದ ಅವರು, 1945ರಲ್ಲಿ ವಕೀಲಿ ವೃತ್ತಿಗಾಗಿ ಮುಂಬಯಿಗೆ ತೆರಳಿದ್ದರು. 1949ರಲ್ಲಿ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮ‍ದಲ್ಲಿ ಸ್ನಾತಕೋತ್ತರ ಪದವಿ, ಅಮೆರಿಕೆದಿಂದ ಮರಳಿದ ನಂತರ ನವಯುಗ ಮಾಸಪತ್ರಿಕೆಯ ಸಂಪಾದಕತ್ವದ ಜವಾಬ್ದಾರಿ ವಹಿಸಿಕೊಂಡು. 1954ರಲ್ಲಿ ಪ್ರಪಂಚ ಪತ್ರಿಕೆಯನ್ನು ಹುಟ್ಟು ಹಾಕಿದ್ದಾರೆ.
ಎರಡು ಅವಧಿಗೆ ರಾಜ್ಯಸಭಾ ಸದಸ್ಯರಾಗಿಯೂ ಅವರು ಕೆಲಸ ಮಾಡಿದ್ದಾರೆ.

loading...