ಸುರೇಶ ಅಂಗಡಿ ಪರ ಶಾಸಕ ಅಭಯ ಪಾಟೀಲ ದಕ್ಷಿಣ ಮತಕ್ಷೇತ್ರದಲ್ಲಿ ಮತಯಾಚನೆ

0
15

ಕನ್ನಡಮ್ಮ ಸುದ್ದಿ-ಬೆಳಗಾವಿ: ಬೆಳಗಾವಿ ದಕ್ಷಿಣ ಮತಕ್ಷೇತ್ರದಲ್ಲಿ ಶಾಸಕ ಅಭಯ ಪಾಟೀಲ ಬಿಜೆಪಿ ಅಭ್ಯರ್ಥಿ ಸುರೇಶ ಅಂಗಡಿ ಪರ ರವಿವಾರ ಬೆಳಿಗ್ಗೆ ಮತಯಾಚಿಸಿದರು.
ಬೆಳಗಾವಿ ದಕ್ಷಿಣ ಮತಕ್ಷೆÃತ್ರದಲ್ಲಿ ಒಟ್ಟು ೨೫೧ ಮತಗಟ್ಟೆಗಳಿದ್ದು ಪ್ರತಿಯೊಂದು ಮತಗಟ್ಟೆಯ ವ್ಯಾಪ್ತಿಯಲ್ಲಿ ಸುಮಾರು ೧೫ ರಿಂದ ೨೦ ಯುವಕರು ಸಂಚರಿಸಿ ಪ್ರತಿಯೊಂದು ಮನೆಗೆ ಭೇಟಿ ನೋಡಿ ಪ್ರಧಾನಿ ನರೇಂದ್ರ ಮೋದಿ ಅವರು ಮಾಡಿರುವ ಸಾಧನೆಗಳನ್ನು ,ಯಡಿಯೂರಪ್ಪ ಅವರು ಮಾಡಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ,ಮತ್ತುಶಾಸಕ ಅಭಯ ಪಾಟೀಲರು ಕ್ಷೇತ್ರದಲ್ಲಿ ಮಾಡಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ಕ್ಷೆÃತ್ರದ ಜನರಿಗೆ ಮಾಹಿತಿ ನೀಡಿ ಬಿಜೆಪಿ ಪರವಾಗಿ ಮತಯಾಚಿಸುತ್ತಿದ್ದಾರೆ
ಮಂಗಳೂರ ಹೊರತು ಪಡಿಸಿದರೆ ಬೆಳಗಾವಿ ದಕ್ಷಿಣ ಮತಕ್ಷೇತ್ರದಲ್ಲೇ ನಾಲ್ಕು ಸಾವಿರ ಕಾರ್ಯಕರ್ತರು ಸೇರಿ ಈ ರೀತಿಯ ಪ್ರಚಾರ ನಡೆಯುತ್ತಿದೆ. ಬಿಜೆಪಿ ಕಾರ್ಯಕರ್ತರು ಬಿಜೆಪಿ ಪರವಾಗಿ ಮತಯಾಚಿಸುವ ಜೊತೆಗೆ ಪ್ರತಿಯೊಬ್ಬ ಮತದಾರ ಮತದಾನ ಮಾಡುವಂತೆ ಜಾಗೃತಿ ಮಾಡಿದ್ದಾರೆ. ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಅಲೆ ಇದೆ ಈ ಚುನಾವಣೆಯಲ್ಲಿ ಬಿಜೆಪಿಗೆ ಬಹುಮತ ಸಿಗುವದು ನಿಶ್ಚಿತ ಬೆಳಗಾವಿ ಚಿಕ್ಕೋಡಿ ಸೇರಿದಂತೆ ಮುಂಬೈ ಕರ್ನಾಟಕದ ಎಲ್ಲ ಲೋಕಸಭಾ ಕ್ಷೆÃತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ದೇಶದ ಜನ ನರೇಂದ್ರ ಮೋದಿ ಮತ್ತೊಮ್ಮೆ ಎಂದು ನಿರ್ಧರಿದ್ದಾರೆ ಚುನಾವಣೆಯ ಫಲಿತಾಂಶದ ದಿನ ಇದು ಸಾಭೀತಾಗುತ್ತದೆ ಎಂದು ವಿಶ್ವಾಸ ವ್ಯೆಕ್ತ ಪಡಿಸಿದ್ದಾರೆ .
ಯಡಿಯೂರಪ್ಪನವರ ಸರ್ಕಾರ ಬೆಳಗಾವಿಯ ಅಭಿವೃದ್ಧಿಗೆ ಅನೇಕ ಕೊಡುಗೆಗಳನ್ನು ಕೊಟ್ಟಿದೆ ಬೆಳಗಾವಿ ನಗರದ ಅಭಿವೃದ್ಧಿಗೆ ಮೊಟ್ಟ ಮೊದಲ ಬಾರಿಗೆ ನೂರು ಕೋಟಿ ಕೊಟ್ಟಿದ್ದು,ಬೆಳಗಾವಿಯಲ್ಲಿ ಸುವರ್ಣ ಸೌಧ ನಿರ್ಮಿಸಿದ್ದು ಇಂತಹ ಅನೇಕ ಮಹತ್ವದ ಅಭಿವೃದ್ಧಿ ಕಾರ್ಯಗಳನ್ನು ಬಿಜೆಪಿ ಮಾಡಿದೆ ಕಾಂಗ್ರೆಸ್ ನಾಯಕರು ಬಿಜೆಪಿ ಬೆಳಗಾವಿಗಾಗಿ ಏನೂ ಮಾಡಿಲ್ಲ ಎಂದು ಟೀಕೆ ಮಾಡುತ್ತಿರುವದು ಹಾಸ್ಯಾಸ್ಪದ ಎಂದು ಅಭಯ ಪಾಟೀಲ ಹೇಳಿದ್ದಾರೆ
ಬೆಳಗಾವಿ ಲೋಕಸಭಾ ಮತಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಸುರೇಶ ಅಂಗಡಿ ಎರಡು ಲಕ್ಷ ಮತಗಳ ಅಂತರದಿಂದ ಗೆಲ್ಲೋದು ಗ್ಯಾರಂಟಿ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

loading...