ಹಳೆ ವೈಷಮ್ಯ: ಕಲಬುರಗಿಯಲ್ಲಿ ಸ್ನೇಹಿತನ ಕೊಲೆ

0
16

ಕಲಬುರಗಿ- ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಸ್ನೇಹಿತನೋರ್ವನ ಕೊಲೆ ಮಾಡಿರುವ ಘಟನೆ ಕಲಬುರಗಿ‌ ನಗರದ ಖ್ವಾಜಾ ಬಂದೇ ನವಾಜ್ ದರ್ಗಾ ಬಳಿ ರವಿವಾರ ರಾತ್ರಿ ನಡೆದಿದೆ.
ಶಾರೂಖ್ (24 ) ಕೊಲೆಯಾದ ದುರ್ದೈವಿ. ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ರವಿವಾರ ಸಂಜೆ ಖ್ವಾಜಾ ಬಂದೇ ನವಾಜ್ ದರ್ಗಾ ಹಿಂಭಾಗದಲ್ಲಿ ಶಾರೂಖ್‌ನನ್ನು ಸ್ನೇಹಿತರು ಕರೆ ಮಾಡಿ ಕರೆಯಿಸಿಕೊಂಡು ಚಾಕುವಿನಿಂದ ಮನಬಂದಂತೆ ಕುತ್ತಿಗೆ ಹಾಗೂ ಹೊಟ್ಟೆ ಭಾಗಕ್ಕೆ ಇರಿದು ಪರಾರಿಯಾಗಿದ್ದಾರೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಆತನನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಅಷ್ಟರಲ್ಲಿಯೇ ಆತ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.
ಕೊಲೆಯಾದ ಶಾರೂಖ್ ಕಳೆದ ಕೆಲವು ದಿನಗಳ ಹಿಂದಷ್ಟೆ ಅಕ್ರಮ ಗಾಂಜಾ ಪ್ರಕರಣವೊಂದರಲ್ಲಿ ಜೈಲು ಸೇರಿ ಬಿಡುಗಡೆಗೊಂಡಿದ್ದ ಎನ್ನಲಾಗುತ್ತಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ರೋಜಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದೂರು ದಾಖಲಾಗಿದ್ದು, ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

loading...