ಹುಕ್ಕೇರಿ ಹಿರೇಮಠದಲ್ಲಿ ದೇಸಾಯಿ ಅವರಿಗೆ ವೀರಭದ್ರ ಶಿವಾಚಾರ್ಯ ಸ್ವಾಮೀಜಿಯಿಂದ ಗೌರವ

0
37

ಬೆಳಗಾವಿ
ಹುಬ್ಬಳ್ಳಿ ವಿದ್ಯುತ್ ನಿಗಮ ಮಂಡಳಿಯ ನೂತನ ನಿರ್ದೇಶಕರಾಗಿ ಆಯ್ಕೆಯಾಗಿರುವ ಅಣ್ಣಾಸಾಹೇಬ ದೇಸಾಯಿ ಅವರಿಗೆ ಶುಕ್ರವಾರ ನಗರದ ಹುಕ್ಕೇರಿ ಹಿರೇಮಠದ ಶಾಖಾ ಮಠದಲ್ಲಿ ಕಟಕೋಳ ಎಂ.ಚAದರಗಿಯ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ಗೌರವಿಸಿ ಸತ್ಕರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶ್ರೀಗಳು, ಹುಬ್ಬಳ್ಳಿ ವಿದ್ಯುತ್ ನಿಗಮದ ನಿರ್ದೇಶಕರಾಗಿ ಆಯ್ಕೆಯಾಗಿರುವ ತಾವುಗಳು, ಜನರ ಕಷ್ಟಗಳನ್ನು ತಿಳಿದು ಕಾರ್ಯಮಾಡಬೇಕು ಹಾಗೂ ಬೆಳಗಾವಿಗೆ ಒಳ್ಳೆಯ ಹೆಸರನ್ನು ತರಬೇಕೆಂದು ಶ್ರೀಗಳು ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ಬಿಜೆಪಿ ಯುವ ಮುಖಂಡ ರಾಜಕುಮಾರ ಟೋಪಣ್ಣವರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

loading...