ಹೂಸ್ಟನ್‌ನಿಂದ ನ್ಯೂಯಾರ್ಕ್‌ಗೆ ತೆರಳಿದ ಪ್ರಧಾನಿ ಮೋದಿ

0
12

ಹೂಸ್ಟನ್- ಬಹುನಿರೀಕ್ಷಿತ “ಹೌಡಿ ಮೋದಿ” ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಹೂಸ್ಟನ್‌ನಿಂದ ನ್ಯೂಯಾರ್ಕ್‌ಗೆ ತೆರಳಿದರು.
ಟೆಕ್ಸಾಸ್‌ಗೆ ವಿದಾಯ. ಹೂಸ್ಟನ್‌ನ ಅಭೂತಪೂರ್ವ ಮತ್ತು ಐತಿಹಾಸಿಕ ಭೇಟಿಯ ನಂತರ, ಪ್ರಧಾನಿ ನರೇಂದ್ರ ಮೋದಿ
ಯುಎನ್‌ಜಿಎಯನ್ನು ಉದ್ದೇಶಿಸಿ ಭಾಷಣ ಮಾಡಲು ಮತ್ತು ಇತರ ಬಹುಪಕ್ಷೀಯ ಮತ್ತು ದ್ವಿಪಕ್ಷೀಯ ಮಾತುಕತೆ ನಡೆಸಲು ನ್ಯೂಯಾರ್ಕ್ ನಗರಕ್ಕೆ ನಿರ್ಗಮಿಸಿದರು ಎಂದು ಎಂಇಎ ವಕ್ತಾರ ರವೀಶ್ ಕುಮಾರ್ ಟ್ವೀಟ್ ಮಾಡಿದ್ದಾರೆ
ವಿಶ್ವಸಂಸ್ಥೆಯ ಮಹಾ ಕಾರ್ಯದರ್ಶಿ ಆಯೋಜಿಸಿರುವ ಹವಾಮಾನ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಹಾಗೂ ಹಲವು ಪಕ್ಷೀಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸೋಮವಾರ ನ್ಯೂಯಾರ್ಕ್‌ಗೆ ಪ್ರಧಾನಿ ತೆರಳಿದರು.
ಈ ಸಂದರ್ಭದಲ್ಲಿ ತಮ್ಮ ಭಾಷಣದಲ್ಲಿ, ಹವಾಮಾನ ಬದಲಾವಣೆಯ ಸಮಸ್ಯೆಗಳನ್ನು ಪರಿಹರಿಸಲು ಭಾರತ ಏನು ಮಾಡಿದೆ ಎಂಬುದನ್ನು ಪ್ರಧಾನಿ ವಿವರಿಸಲಿದ್ದಾರೆ. ಈ ಗಂಭೀರ ಸಮಸ್ಯೆಯನ್ನು ಪರಿಹರಿಸಲು ಅಂತಾರಾಷ್ಟ್ರೀಯ ಸಮುದಾಯದಿಂದ ಭಾರತದ ನಿರೀಕ್ಷೆಗಳು ಮತ್ತು ಆಕಾಂಕ್ಷೆಗಳು ಏನು ಎಂಬುದರ ಬಗ್ಗೆ ಅವರು ಬೆಳಕು ಚೆಲ್ಲಲಿದ್ದಾರೆ ಎಂದು ವಿದೇಶಾಂಗ ಕಾರ್ಯದರ್ಶಿ ವಿಜಯ್ ಗೋಖಲೆ ಕಳೆದ ವಾರ ದೆಹಲಿಯಲ್ಲಿ ತಿಳಿಸಿದ್ದರು.
ವಿಶ್ವಸಂಸ್ಥೆಯ ಮಹಾ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಅವರು ಸಾರ್ವತ್ರಿಕ ಆರೋಗ್ಯ ಕುರಿತು ಪ್ರಮುಖ ಸಭೆ ನಡೆಸಲಿದ್ದಾರೆ.
ಭಾರತ ಸರ್ಕಾರದ ಆಯುಷ್ಮಾನ್ ಭಾರತ್ ಯೋಜನೆ ವಿಶ್ವದ ಅತಿದೊಡ್ಡ ಆರೋಗ್ಯ ಸುರಕ್ಷಾ ಕಾರ್ಯಕ್ರಮವಾಗಿದ್ದು, ಇದರ ಬಗ್ಗೆಯೂ ಅವರು ಇಲ್ಲಿನ ಕಾರ್ಯಕ್ರಮದಲ್ಲಿ ಅವರು ಹೆಚ್ಚಿನ ಆದ್ಯತೆ ನೀಡಲಿದ್ದಾರೆ.
ಸೋಮವಾರ ನಡೆಯಲಿರುವ ವಿಶ್ವಸಂಸ್ಥೆಯ ಮತ್ತೊಂದು ಪ್ರಮುಖ ಸಭೆಯಲ್ಲಿ ಭಯೋತ್ಪಾದಕರು ಮತ್ತು ಹಿಂಸಾತ್ಮಕ ಉಗ್ರಗಾಮಿಗಳ ವಿರುದ್ಧ ಕಾರ್ಯತಂತ್ರದ ಕುರಿತು ನಾಯಕರು ಮಾತುಕತೆ ನಡೆಸಲಿದ್ದಾರೆ.
ಜೋರ್ಡಾನ್ ದೊರೆ, ನ್ಯೂಜಿಲೆಂಡ್ ಪ್ರಧಾನಿ, ಫ್ರಾನ್ಸ್ ಅಧ್ಯಕ್ಷ ಮತ್ತು ವಿಶ್ವಸಂಸ್ಥೆಯ ಮಹಾ ಕಾರ್ಯದರ್ಶಿ ಜಂಟಿಯಾಗಿ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಈ ಕಾರ್ಯಕ್ರಮದಲ್ಲಿ ಮಾತನಾಡಲು ಪ್ರಧಾನಿಯನ್ನು ಆಹ್ವಾನಿಸಲಾಗಿದೆ. ಕೀನ್ಯಾ ಮತ್ತು ಇಂಡೋನೇಷ್ಯಾದ ಅಧ್ಯಕ್ಷರು, ಯುಕೆ  ಪ್ರಧಾನಿ ಮತ್ತು ಜರ್ಮನಿಯ ಚಾನ್ಸೆಲರ್ ಸಹ ಇತರ ಭಾಷಣಕಾರರಾಗಿ ಆಹ್ವಾನಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಪ್ರಧಾನಿ ಮಂಗಳವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ಸೆಪ್ಟೆಂಬರ್ 27 ರಂದು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯನ್ನೂ ಉದ್ದೇಶಿಸಿ ಮಾತನಾಡಲಿದ್ದಾರೆ.

loading...