ಹೈಕಮಾಂಡ್ ಆದೇಶದಂತೆ ಪಾದಯಾತ್ರೆ: ಸಂಸದ ಜೊಲ್ಲೆ

0
25

ಬೆಳಗಾವಿ
ಪ್ರಧಾನಿ ನರೇಂದ್ರ ‌ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ಸೂಚನೆಯ ಮೇರೆಗೆ ಗಾಂಧಿ ಜಯಂತಿಯ‌ ನಿಮಿತ್ತ ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಚಿಕ್ಕೋಡಿ ಸಂಸದ ಅಣ್ಣಾ ಸಾಹೇಬ ಜೊಲ್ಲೆ ಹೇಳಿದರು.
ಶನಿವಾರ ಸದ್ದಿಗೋಷ್ಠಿಯಲ್ಲಿ ಮಾತನಾಡಿದರು.

ರಾಷ್ಟ್ರೀಯ ಅಧ್ಯಕ್ಷ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರು ಗಾಂಧಿ ಜಯಂತಿ ನಿಮಿತ್ತ ಜನಾಂಧೋಲ ಆಗುವ ನಿಟ್ಟಿನಲ್ಲಿ ಎಲ್ಲ ಸಂಸದರು ಪಾದಯಾತ್ರೆ ನಡೆಸಬೇಕೆಂದು ಸೂಚನೆ ನೀಡಿದ್ದಾರೆ.

ಸಂಸದರು, ಮಾಜಿ ಶಾಸಕ, ಸಚಿವರು ಸೇರಿದಂತೆ ರಾಜಕೀಯ ನಾಯಕರು ಈ ಪಾದಯಾತ್ರೆಯಲ್ಲಿ ಭಾಗಿಯಾಗಿ ಗಾಂಧಿಜಿಯ ಜೀವನ ಚರಿತ್ರೆಯ ಬಗ್ಗೆ ಜನರಿಗೆ ಅರಿವು ಮೂಡಿಸಬೇಕೆಂದು ಆದೇಶ ಹೊರಡಿಸಿದ್ದಾರೆ.
ನಿಪ್ಪಾಣಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ ಕಟೀಳ ಅವರು ಈ ಪಾದಯಾತ್ರೆಗೆ ಚಾಲನೆ ನೀಡಿದ್ದಾರೆ. ಮಹಾತ್ಮಾ ಗಾಂಧಿಜೀ ಏಳು ದಿನಗಳ ಕಾಲ ಹುದಲಿಯಲ್ಲಿ ವಾಸ್ತವ್ಯ ಮಾಡಿದ್ದರು‌. ಇಲ್ಲಿಂದಲೇ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. ಚಂದಘಡ, ಅಷ್ಟೇ, ಮುಚ್ಚಂಡಿ, ಕಲಕಾಂಬ, ಕಾಕತಿ, ಮುಕ್ತಿಮಠ, ಯಮಕನಮರಡಿ, ಹತ್ತರಗಿ, ಉ-ಖಾನಾಪೂರ, ಚಿಕ್ಕಾಲಗುಡ್ಡ, ಹೆಬ್ಬಾಳದಲ್ಲಿ ನಡೆಸಲಾಗುತ್ತಿದೆ ಎಂದರು.

ಚಿಕ್ಕೋಡಿಯಲ್ಲಿ ದೊಡ್ಡ ಪ್ರಮಾಣದಲ್ಲಿ ಪಾದಯಾತ್ರೆಯ ಸಮಾರೋಪ ಸಮಾರಂಭ ಮಾಡಲು‌ ಚಿಂತನೆ ನಡೆಸಲಾಗುತ್ತಿದೆ. ಸುಮಾರು 150 ಕಿಲೋಮೀಟರ್ ಪಾದಯಾತ್ರೆ ನಡೆಸುವ ಗುರಿ ಇಟ್ಟುಕೊಳ್ಳಲಾಗಿದೆ. ಪಾದಯಾತ್ರೆಯಲ್ಲಿ ಗಾಂಧಿಜೀಯವರ ವಿಚಾರಧಾರಣೆ ಹಾಗೂ ಜನರ ಸಮಸ್ಯೆಯನ್ನು ಆಲಿಸಲಾಗುವುದು ಎಂದರು.
ಪಾದಯಾತ್ರೆಯ ಸಂಕಲ್ಪ ಹೆಚ್ಚು ಇದೆ. 650 ಗ್ರಾಮಗಳಿಗೆ ಭೇಟಿ ನೀಡುತ್ತೇವೆ. ಈ ಹಿಂದೆ ವಿಚಾರಧಾರೆಗಳನ್ನು‌ ಮುಟ್ಟಿಸಬೇಕು ಎಂದು ಹೇಳಿದರು.
ಮೋದಿಯ ಸ್ವಚ್ಛ ಮುಂದಾಗಿದೆ.ಯಂಥಾ ರಾಜ ತತಾ ಪ್ರಜೆ ಎನ್ನುವ ಹಾಗೆ ಮೂರು ತಿಂಗಳ‌ ಹಿಂದೆ ಪಾದಯಾತ್ರೆ ಬಗ್ಗೆ ತಿಳಿಸಿದರು ಎಂದರು.

ಮಾಜಿ ಸಚಿವ ಶಶಿಕಾಂತ ನಾಯಿಕ ಮಾತನಾಡಿ, ಗಾಂಧಿಜೀಯವರ ವಿಚಾರಧಾರೆಗಳನ್ನು ಗ್ರಾಮೀಣ ಜನರಿಗೆ ಮುಟ್ಟಿಸುವ ನಿಟ್ಟಿನಲ್ಲಿ ದೇಶದ ಎಲ್ಲ ಸಂಸದರಿಗೆ 150 ಕಿಲೋಮೀಟರ್ ಪಾದಯಾತ್ರೆ ನಡೆಸುವಂತೆ ಸೂಚನೆ ನೀಡಿದ್ದಾರೆ. ಅದರಂತೆ ಚಿಕ್ಕೋಡಿ ‌ಸಂಸದರು ಹುದಲಿಯಲ್ಲಿ ಪಾದಯಾತ್ರೆ ಹಮ್ಮಿಕೊಂಡಿದ್ದಾರೆ ಎಂದರು.

loading...