11 ರಂದು ವಿಚಾರ ಸಂಕಿರಣ

0
29

ಬೆಳಗಾವಿ:9 ಸಂಗೊಳ್ಳಿ ರಾಯಣ್ಣನ ಹುಟ್ಟೂರು ಸಂಗೊಳ್ಳಿಯಲ್ಲಿ ರಾಯಣ್ಣನ ಉತ್ಸವದ ಹಿನ್ನೆಲೆಯಲ್ಲಿ ಈ ಉತ್ಸವದ ಬಗ್ಗೆ ಜಾಗೃತಿಯನ್ನುಂಟು ಮಾಡುವ ಹಿನ್ನೆಲೆಯಲ್ಲಿ ಜ. 11 ರಂದು ಬೆಳಗ್ಗೆ10.30 ಕ್ಕೆ ಮಹಾಂತೇಶ ನಗರದ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದಲ್ಲಿ ವಿಚಾರ ಸಂಕಿರಣ ಏರ್ಪಡಿಸಲಾಗಿದೆ.
ವಿದ್ವಾಂಸ ಜ್ಯೋತಿ ಹೊಸೂರ ಉದ್ಘಾಟಿಸುವರು. ಜಿಲ್ಲಾಧಿಕಾರಿ ಎನ್. ಜಯರಾಮ್ ಉಪಸ್ಥಿತರಿರುವರು. ರಾಣಿ ಚನ್ನಮ್ಮ ವಿ.ವಿ. ಶಾಸ್ತ್ರೀಯ ಕನ್ನಡ ಭಾಷಾ ಅಧ್ಯಯನ ಸಂಸ್ಥೆಯ ಮುಖ್ಯಸ್ಥ ಡಾ.ಎಸ್.ಎಂ.ಗಂಗಾಧರಯ್ಯನವರು ಆಶಯ ನುಡಿಯನ್ನಾಡುವರು. ರಾಣಿ ಚನ್ನಮ್ಮ ವಿ.ವಿ.ಸಹಾಯಕ ಪ್ರಾಧ್ಯಾಪಕ ಡಾ. ಗಜಾನನ ನಾಯ್ಕ ಅವರು `ಕಿತ್ತೂರು ಸಂಗ್ರಾಮದಲ್ಲಿ ರಾಯಣ್ಣನ ಪಾತ್ರ ಹಾಗೂ ಕಸಾಪ ನಿಕಟಪೂರ್ವ ಜಿಲ್ಲಾಧ್ಯಕ್ಷ ಯ.ರು.ಪಾಟೀಲ ಅವರು `ಸ್ವಾತಂತ್ರ್ಯ ಚಳವಳಿಗೆ ಬೆಳಗಾವಿ ಬಳವಳಿ ಕುರಿತು ಉಪನ್ಯಾಸ ನೀಡಲಿದ್ದಾರೆ. ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯ ಕನ್ನಡ ವಿಭಾಗದ ಮುಖ್ಯಸ್ಥ ಹನುಮಂತಪ್ಪ ಸಂಜೀವಣ್ಣವರ ಪ್ರಾಸ್ತಾವಿಕವಾಗಿ ಮಾತನಾಡುವರು.ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದ ಪ್ರಾಚಾರ್ಯ ಎಸ್.ಓ. ಹಲಸಗಿ ಅ`À್ಯಕ್ಷತೆ ವಹಿಸುವರು. ವಿದ್ಯಾರ್ಥಿಗಳಲ್ಲಿ ಪುಸ್ತಕಪ್ರೀತಿ ಹುಟ್ಟಿಸುವ ದಿಸೆಯಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಯ.ರು.ಪಾಟೀಲರವರ ಸಹಯೋಗದಲ್ಲಿ ಪುಸ್ತಕ ಮಾರಾಟ ಹಾಗೂ ಪ್ರದರ್ಶನ ಏರ್ಪಡಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

loading...

LEAVE A REPLY

Please enter your comment!
Please enter your name here