ಜನತಾ ದರ್ಶನಕ್ಕೆ ಉತ್ತಮ ಪ್ರತಿಕ್ರಿಯೆ : ಎಸ್ಪಿ

0
29

ಬೆಳಗಾವಿ, ಸೆ.15: ಈಲ್ಲಾ ಪೊಲೀಸ್ ಇಲಾಖೆ ಪ್ರಾರಂಭಿಸಿರುವ ಜನತಾ ದರ್ಶನ ಕಾರ್ಯಕ್ರಮ ದಿನದಿಂದ ದಿನಕ್ಕೆ ಪರಿಣಾಮಕಾರಿಯಾಗಿ ಅನುಷ್ಟಾನಗೊಳುತ್ತಿರುವುದರಿಂದ ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಸಲ್ಲಿಸಲು ಜನತಾ ದರ್ಶನ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಸಂದೀಪ ಪಾಟೀಲ ತಿಳಿಸಿದ್ದಾರೆ.

ಜಿಲ್ಲಾ ಪೊಲೀಸ್ ಭವನದಲ್ಲಿ ದಿ. 15ರಂದು ನಡೆದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿ ಮಾತನಾಡಿದ ಅವರು ಪೊಲೀಸ್ ಇಲಾಖೆಗೆ ಸಂಬಂಧಪಟ್ಟಂತೆ ಬರುವ ದೂರುಗಳನ್ನು ಪರಿಗಣಿಸಿ ಅವುಗಳನ್ನು ವಿಲೇವಾರಿ ಮಾಡಲು ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಅಲ್ಲದೇ ಬೇರೆ ಇಲಾಖೆಗೆ ಸಂಬಂಧಪಟ್ಟ ದೂರುಗಳನ್ನು ಆಯಾ ಸಂಬಂಧಪಟ್ಟ ಇಲಾಖೆಯವರೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುತ್ತದೆ ಮತ್ತು ಇಂದು ನಡೆದ ಜನತಾ ದರ್ಶನ ಕಾರ್ಯಕ್ರಮದಲ್ಲಿ 25 ಅರ್ಜಿಗಳನ್ನು ಸ್ವಿಕರಿಸಲಾಗಿದ್ದು, ಮುಂದಿನ ಗುರುವಾರ ನಡೆಯುವ ಜನತಾ ದರ್ಶನ ನಡೆಯುವ ವೇಳೆಗೆ ಈ ಅರ್ಜಿಗಳನ್ನು ವಿಲೇವಾರಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಈ ಜನತಾ ದರ್ಶನ ಕಾರ್ಯಕ್ರಮದಲ್ಲಿ ಜಿಲ್ಲೆಯ ಆರಕ್ಷಕಾಧೀಕ್ಷಕರು ಅಲ್ಲದೇ ಹಿರಿಯ ಅಧಿಕಾರಿಗಳು ಕೂಡ ಹಾಜರಿರುವುದರಿಂದ ದೂರುದಾರರು ಸಲ್ಲಿಸಿದ ಅರ್ಜಿಗಳ ವಿಲೇವಾರಿಗಳ ಬಗ್ಗೆ ಸ್ಥಳದಲ್ಲಿಯೇ ಸೂಕ್ತ ಮಾರ್ಗದರ್ಶನ ನೀಡಿ ಅವುಗಳನ್ನು ತ್ವರಿತವಾಗಿ ವಿಲೇವಾರಿ ಮಾಡಲು ಅಗತ್ಯ ಕ್ರಮ ಕೈಕೊಳ್ಳಲು ಅನುಕೂಲವಾಗುತ್ತದೆ ಸಂದೀಪ ಪಾಟೀಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

loading...

LEAVE A REPLY

Please enter your comment!
Please enter your name here