ಇಲಾಖಾ ಕಚೇರಿ ಸ್ಥಳಾಂತರಕ್ಕೆ ಆಗ್ರಹಸಿ ಸಚಿವರಿಗೆ ಘೇರಾವ್

0
41

ಬೆಳಗಾವಿ 28: ಸುವರ್ಣಸೌಧಕ್ಕೆ ಇಲಾಖಾ ಕಚೇರಿಗಳನ್ನು ಸ್ಥಳಾಂತರಿಸಬೇಕು ಹಾಗೂ ಚಳಿಗಾಲದ ಅಧಿವೇಶನವನ್ನು ಸುವರ್ಣಸೌಧದಲ್ಲಿಯೇ ನಡೆಸಬೇಕೆಂದು ಆಗ್ರಹಿಸಿ ಕರ್ನಾಟಕ ನವ ನಿರ್ಮಾಣ ಪಡೆಯ ಕಾರ್ಯಕರ್ತರು ಸೋಮವಾರ ಆಹಾರ, ನಾಗರಿಕ ಪೂರೈಕೆ ಹಾಗೂ ಗ್ರಾಹಕ ವ್ಯವಹಾರಗಳ ಸಚಿವ ದಿನೇಶ ಗೂಂಡುರಾವ ಅವರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಹಳೆ ಜಿಲ್ಲಾ ಪಂಚಾಯತಿ ಕಚೇರಿಯಲ್ಲಿ ಸಚಿವರು ಸಾರ್ವಜನಿಕರ ಅಹವಾಲು ಸ್ವೀಕಾರ ಸಭೆ ನಡೆಸಿ ಹೊರಬರುತ್ತಿದ್ದಂತೆ ಜಮಾವಣೆಗೊಂಡಿದ್ದ ಕನಪ ಕಾರ್ಯಕರ್ತರು ಸಚಿವರಿಗೆ ಘೇರಾವ್ ಹಾಕಿ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.
ಈ ಸಂದರ್ಭದಲ್ಲಿ ಕರ್ನಾಟಕನವ ನಿರ್ಮಾಣ ಪಡೆಯ ಸಂಸ್ಥಾಪಕ ಅಧ್ಯಕ್ಷ ರಾಜೀವ ಟೋಪಣ್ಣವರ ಮಾತನಾಡಿ, ರಾಜ್ಯ ಕಾಂಗ್ರೆಸ್ ಸರಕಾರ ಉತ್ತರ ಕರ್ನಾಟಕ ವಿರೋಧಿಯಾಗಿದೆ. ಸುವರ್ಣಸೌಧಕ್ಕೆ ಇಲಾಖಾ ಕಚೇರಿ ಸ್ಥಳಾಂತರ ಹಾಗೂ ಚಳಿಗಾಲದ ಅಧಿವೇಶನದ ಬಗ್ಗೆ ಸರಕಾರ ತನ್ನ ತೀರ್ಮಾಣ ಪ್ರಕಟಿಸುವವರೆಗೂ ನಮ್ಮ ಹೋರಾಟ ನಿರಂತರ. ನಮ್ಮ ಬೇಡಿಕೆಗಳಿಗೆ ಸರಕಾರ ಸ್ಪಂದಿಸದೇ ಇದ್ದಲ್ಲಿ ಉಗ್ರ ಹೋರಾಟ ನಡೆಸುವ ಎಚ್ಚರಿಕೆಯನ್ನು ನೀಡಿದರು.
ಪ್ರತಿಭಟನೆಯಲ್ಲಿ ಪಡೆಯ ಮುಖಂಡರಾದ ರುದ್ರಗೌಡ ಪಾಟೀಲ, ಶಿವಾನಂದ ಖಾರಿ, ಸುದೀರಗೌಡ ಪಾಟೀಲ, ಪ್ರಭು ಪುರಾಣಿಕಮಠ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

loading...

LEAVE A REPLY

Please enter your comment!
Please enter your name here