ಸಂಕೇಶ್ವರದಲ್ಲಿ ಜಿಲ್ಲಾ ಮಟ್ಟದ ಕ್ರೀಡಾಕೂಟ

0
19

ಸಂಕೇಶ್ವರ 05 : ಸ್ಥಳೀಯ ದುರದುಂಡೀಶ್ವರ ವಿದ್ಯಾ ಸಂವರ್ಧಕ ಸಂಘ ಹಾಗೂ ಪದವಿಪೂರ್ವ ಶಿಕ್ಷಣ ಇಲಾಖೆ ಬೆಳಗಾವಿ ಇವರ ಸಹಯೋಗದಲ್ಲಿ ದಿನಾಂಕ 6 ಮತ್ತು 7 ರಂದು ಜಿಲ್ಲಾ ಮಟ್ಟದ ಕ್ರೀಡಾಕೂಟ ಸಂಘದ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.
6 ರಂದು ಮುಂಜಾನೆ 9-30 ಕ್ಕೆ ನಡೆಯಲಿರುವ ಉದ್ಘಾಟನೆ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಜಿಲ್ಲಾಧಿಕಾರಿ ಎನ್.ಜಯರಾಮ ಭಾಗವಹಿಸಲಿದ್ದು ಅಧ್ಯಕ್ಷತೆಯನ್ನು ಮಾಜಿ ಸಚಿವ ಎ.ಬಿ.ವಹಿಸುವರು. ಗೌರವ ಅತಿಥಿಗಳಾಗಿ ಪ.ಪೂ.ಶಿಕ್ಷಣ ಇಲಾಖೆ ಉಪನಿರ್ದೇಶಕ ಎಲ್.ಸಿ.ಪಾಟೀಲ, ಸಂಘದ ಉಪಾದ್ಯಕ್ಷ ಜಿ.ಎಸ್.ಇಂಡಿ, ಸ್ಥಾನಿಕ ನಿಯಂತ್ರಣ ಸಮಿತಿ ಅಧ್ಯಕ್ಷ ಡಿ.ಎಸ್.ಕೇಸ್ತಿ, ಕಾರ್ಯದರ್ಶಿ ವ್ಹಿ.ಎಂ.ಮೇಟಿ ಉಪಸ್ಥಿತರುವರು. 7 ರಂದು ಬಹುಮಾನ ವಿತರಣಾ ಕಾರ್ಯಕ್ರಮ ಜರುಗಲಿದೆಯೆಂದು ಪ್ರಕಟನೆಯ ಮೂಲಕ ತಿಳಿಸಿದ್ದಾರೆ.

loading...

LEAVE A REPLY

Please enter your comment!
Please enter your name here