ವಿಶ್ವ ಏಡ್ಸ್ ವಿರೋಧಿ ದಿನ :ವಿದ್ಯಾರ್ಥಿಗಳಿಂದ ಬೃಹತ್ ಜಾಗೃತಿ ಜಾಥಾ

0
59

1srs5bಶಿರಸಿ,2; ವಿಶ್ವ ಏಡ್ಸ್ ವಿರೋಧಿ ದಿನದ ಅಂಗವಾಗಿ ನಗರದಲ್ಲಿ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ವಿದ್ಯಾರ್ಥಿಗಳಿಂದ ಬೃಹತ್ ಜಾಗೃತಿ ಜಾಥಾ ನಡೆಯಿತು. ಮಂಗಳವಾರ ಇಲ್ಲಿನ ಪಂಡಿತ್ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ನ್ಯಾಯಾಧೀಶ ಸಿ.ಎನ್.ಸುಣಗಾರ ಜಾಥಾಕ್ಕೆ ಚಾಲನೆ ನೀಡಿದರು.

ಪರಶುರಾಮ ದೊಡ್ಮನಿ, ತಹಶೀಲ್ದಾರ ಬಸಪ್ಪ ಪೂಜಾರಿ, ವೈದ್ಯರಾದ ಕೃಷ್ಣಮೂರ್ತಿ ರಾಯ್ಸ್‍ದ್, ರಾಮಾ ಹೆಗಡೆ, ಮಹಾಬಲೇಶ್ವರ ಹೆಗಡೆ, ಕೆ.ವಿ.ಶಿವರಾಮ, ದಿನೇಶ ಹೆಗಡೆ ಮುಂತಾದವರು ಉಪಸ್ಥಿತರಿದ್ದರು. ನಗರದ ಪ್ರಮುಖ ಬೀದಿಗಳಲ್ಲಿ ಜಾಥಾ ಸಾಗಿತು.

ಏಡ್ಸ್ ಕುರಿತ ಜಾಗೃತಿ ಘೋಷಣಾ ಫಲಕವನ್ನು ಹಿಡಿದ ಮಕ್ಕಳು ಜಾಥಾದಲ್ಲಿ ಹೆಜ್ಜೆ ಹಾಕಿದರು. ಜಾಥಾದಲ್ಲಿ ಮಾರಿಕಾಂಬಾ ಕಾಲೇಜ್‍ನ ಎನ್.ಎಸ್.ಎಸ್. ಘಟಕದ ವಿದ್ಯಾರ್ಥಿ, ವಿದ್ಯಾರ್ಥಿನಿಯರು, ಆರೋಗ್ಯ ಇಲಾಖೆ ಸಿಬ್ಬಂದಿಗಳು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಪಾಲ್ಗೊಂಡಿದ್ದರು.

ಯುವ ಜನತೆ ಹದಿಹರೆಯದಲ್ಲಿ ಆರೋಗ್ಯದ ಬಗ್ಗೆ ಜಾಗೃತಿ ವಹಿಸಬೇಕು. ರೋಗ ಬಂದ ನಂತರ ಚಿಕಿತ್ಸೆ ಪಡೆಯುವುದಕ್ಕಿಂತ ರೋಗ ಬರದಂತೆ ಎಚ್ಚರಿಕೆ ವಹಿಸಬೇಕು ಎಂದು ಘೋಷಣೆ ಕೂಗಲಾಯಿತು. ಈ ಜಾಥಾದಲ್ಲಿ ನೂರಾರು ಮಕ್ಕಳು ಪಾಲ್ಗೊಂಡಿದ್ದರು.

loading...

LEAVE A REPLY

Please enter your comment!
Please enter your name here