ಮಕ್ಕಳ ಸುಪ್ತ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಿ

0
92

pratibhe
ವಿಜಯಪುರ : ಶಿಕ್ಷಕರಾವದರು ಮಕ್ಕಳಲ್ಲಿ ಅಡಗಿರುವ ಸುಪ್ತ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಬೇಕು ಎಂದು ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷೆ ದ್ರಾಕ್ಷಾಯಣಿ ಬಸವರಾಜ ಹೇಳಿದರು.
ವಿಜಯಪುರ ತಾಲೂಕಿನ ಇಟ್ಟಂಗಿಹಾಳದ ಎಕ್ಸಲೆಂಟ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಅಮ್ಮನ ಮಡಿಲು ಚಾರಿಟೇಬರ್ ಟ್ರಸ್ಟ್, ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಹಾಗೂ ಎಕ್ಸಲಂಟ್ ಸಮೂಹ ಶಿಕ್ಷಣ ಸಂಸ್ಥೆ ಸಂಯುಕ್ತಾಶ್ರದಲ್ಲಿ ಬಾಲ ಸಾಧಕರಿಗೆ `ಭಾರತ ರತ್ನ ಡಾ.ಎ.ಪಿ.ಜೆ. ಅಬ್ದುಲ್ ಕಲಾಂ ಯುವ ಪ್ರಶಸ್ತಿ ಹಾಗೂ ಶಂ.ಗು. ಬಿರಾದಾರ, ಭಾಸ್ಕರಾಚಾರ್ಯ ಬಾಲ ಪ್ರತಿಭಾ ಪ್ರಶಸ್ತಿ ಪ್ರಧಾನ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಪ್ರತಿಯೊಂದು ಮಗುವಿನಲ್ಲಿಯೂ ಪ್ರತಿಭೆ ಇರುತ್ತದೆ. ಶಿಕ್ಷಕರು ಮಕ್ಕಳಲ್ಲಿರುವ ಪ್ರತಿಭೆ ಪ್ರಕಾಶನಕ್ಕೆ ಪ್ರೋತ್ಸಾಹ ಹಾಗೂ ಅವಕಾಶದ ವೇದಿಕೆಯನ್ನು ಕಲ್ಪಿಸಬೇಕು ಎಂದರು.
ಮಕ್ಕಳನ್ನು ಬೇರೆ ಮಕ್ಕಳೊಂದಿಗೆ ಹೋಲಿಕೆ ಮಾಡಬಾರದು, ಪ್ರತಿಯೊಬ್ಬರ ಮಗುವಿನ ಆಸಕ್ತಿ, ಅಭಿರುಚಿಗಳು ಭಿನ್ನವಾಗಿರುತ್ತವೆ. ನಾವು ಮಕ್ಕಳ ಮೇಲೆ ಒತ್ತಡ ಹೇರಬಾರದು, ಮಕ್ಕಳ ಮೇಲೆ ಒತ್ತಡ ಹೇರುವುದರಿಂದ ಮಕ್ಕಳಲ್ಲಿ ಸಂಕುಚಿತ ಮನೋಭಾವನೆ ಉಂಟಾಗುತ್ತದೆ, ಆತ್ಮವಿಶ್ವಾಸ ಕುಗ್ಗುತ್ತದೆ. ಶಿಕ್ಷಕರು ಹಾಗೂ ಪಾಲಕರು ಮಕ್ಕಳ ಮೇಲೆ ಯಾವುದೇ ರೀತಿಯ ಒತ್ತಡ ಹೇರಬಾರದು ಎಂದು ಅವರು ಕಿವಿಮತು ಹೇಳಿದರು.
ಮಕ್ಕಳ ಮನೋವಿಕಾಸಕ್ಕೆ ಪೂರಕವಾದ ಕಾರ್ಯಚಟುವಟಿಕೆಗಳನ್ನು ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಕೈಗೊಳ್ಳುತ್ತಿದೆ. ಮಕ್ಕಳ ಯಶಸ್ಸಿನ ದೀಪವನ್ನು ಪ್ರಜ್ವಲಿಸುವ ಕಾರ್ಯದಲ್ಲಿ ಶಿಕ್ಷಕರು ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದರು.
ಮುಖ್ಯ ಅತಿಥಿಯಾಗಿದ್ದ ಹಿರಿಯ ಮಕ್ಕಳ ಸಾಹಿತಿ ಶರಣಪ್ಪ ಕಂಚ್ಯಾಣಿ ಮಾತನಾಡಿ, ಮಕ್ಕಳು ರಾಷ್ಟ್ರದ ಸಂಪತ್ತು. ಮಕ್ಕಳ ಜ್ಞಾನವೃದ್ಧಿಯಲ್ಲಿ ದೇಶದ ಅಭಿವೃದ್ಧಿ ಅಡಗಿದೆ. ಮಕ್ಕಳ ಶ್ರೇಯೋಭಿವೃದ್ಧಿಗಾಗಿ ವಿಶೇಷವಾದ ಕಾರ್ಯಯೋಜನೆಗಳು ರೂಪುಗೊಳ್ಳಬೇಕಿದೆ. ವಿವಿಧ ಕ್ಷೇತ್ರದಲ್ಲಿ ಸಾಧನೆ ತೋರಿದ ಮಕ್ಕಳಿಗೆ ಪ್ರಶಸ್ತಿ ನೀಡಿ ಗೌರವಿಸುತ್ತಿರುವುದು ಸಂತೋಷದ ಸಂಗತಿ ಎಂದರು.ಅಧ್ಯಕ್ಷತೆ ವಹಿಸಿದ್ದ ಶಿಕ್ಷಣ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಶಿವಾನಂದ ಕೆಲೂರ ಮಾತನಾಡಿ, ಜೀವನದಲ್ಲಿ ಅಸಾಧ್ಯವೆಂಬುದಿಲ್ಲ. ಸತತ ಪ್ರಯತ್ನದಿಂದ ಯಶಸ್ಸು ಗಳಿಸಲು ಸಾಧ್ಯ ಎಂದರು.
ಸಮಾರಂಭದಲ್ಲಿ ವಿದ್ಯಾರ್ಥಿಗಳಾದ ಕುಮಾರ. ಅಂತಃಕರಣ, ಕುಮಾರ ಕಾರ್ತಿಕ ಹಣಮಶೆಟ್ಟಿ, ಕುಮಾರಿ ರಶ್ಮಿ ಆರ್. ಕುಮಟಗಿ, ವೈಷ್ಣವಿ ಕುಲಕರ್ಣಿ, ಸಾಕ್ಷಿ ಎ ಕುಲಕರ್ಣಿ ಅವರಿಗೆ ಶಂ.ಗು. ಬಿರಾದಾರ ಪ್ರಶಸ್ತಿ, ಕುಮಾರ, ಯೋಗೇಶ ಬಿಸನಾಳ, ಕುಮಾರಿ. ಮೋನಿಕಾ ಜೋಶಿ, ಹರ್ಷಿತಾ ತುಪ್ಪದ, ತನ್ವಿ ಬಿರಾದಾರ, ಅನುಷ್ಕಾ ಬೆವರಗಿ ಅವರಿಗೆ ಭಾಸ್ಕರಾಚಾರ್ಯ ಪ್ರಶಸ್ತಿ, ಕುಮಾರಿ. ಸುಸ್ಮಾ ಬಿರಾದಾರ, ವೈಷ್ಣವಿ ಸಂಪಗಾಂವಕರ, ಸುಮೇದಾ ದೇಸಾಯಿ, ಸುಮತಾ. ಆರ್. ಎಮ್, ಸೃಷ್ಟಿ ಕುಲಕರ್ಣಿ ಅವರಿಗೆ ಡಾ.ಎ.ಪಿ.ಜೆ. ಅಬ್ದುಲ್ ಕಲಾಂ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಚಾಣಕ್ಯ ಸ್ಪರ್ಧಾತ್ಮಕ ತರಬೇತಿ ಕೇಂದ್ರದ ನಿರ್ದೇಶಕ ಎನ್.ಎಂ. ಬಿರಾದಾರ ಮಾತನಾಡಿದರು. ಶಿಕ್ಷಣ ಸಂಸ್ಥೆಯ ನಿರ್ದೇಶಕ ಮಂಜುನಾಥ ಕೌಲಗಿ, ದಯಾನಂದ ಕೆಲೂರ, ಎಸ್.ಬಿ. ಹೆಗಳಾಡಿ, ಎನ್.ಜಿ. ಯರನಾಳ ಮತ್ತಿತರರು ಉಪಸ್ಥಿತರಿದ್ದರು.
ಅಮ್ಮನ ಮಡಿಲು ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಪ್ರಾಸ್ತಾವಿಕವಾಗಿ ಮಾತನಾಡಿ ಮಕ್ಕ್ಕಳ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಬೇಕು ಎಂದರು. ರಾಜಶೇಖರ ದೈವಾಡಿ ಹಾಗೂ ಹಸೀನಾ ಮುಲ್ಲಾ ಕಾರ್ಯಕ್ರಮ ನಿರೂಪಿಸಿದರು. ಟ್ರಸ್ಟ್ ಸಂಚಾಲಕ ಡಿ.ಎಸ್. ಖಿಲಾರಿ ವಂದಿಸಿದರು.

loading...

LEAVE A REPLY

Please enter your comment!
Please enter your name here