10ರಂದು ವಿಶ್ವ ಮಾನವ ಹಕ್ಕುಗಳ ದಿನಾಚರಣೆ

0
55

ವಿಜಯಪುರ : ಜಿಲ್ಲಾಡಳಿತದಿಂದ ಇದೇ ಡಿಸೆಂಬರ್ 10ರಂದು ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ಬುಧವಾರ ಜಿಲ್ಲಾಧಿಕಾರಿ ಡಿ.ರಂದೀಪ್ ಅವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಸಿದ್ಧತಾ ಸಭೆಯಲ್ಲಿ ತೀರ್ಮಾನಿಸಲಾಯಿತು.
ಅಂದು ಬೆಳಿಗ್ಗೆ 930ಕ್ಕೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಅಂಗವಾಗಿ ತಜ್ಞ ಉಪನ್ಯಾಸಕರಿಂದ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲು ನಿರ್ಧರಿಸಲಾಯಿತು.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಸೋಮರಾಜು ಅವರನ್ನು ಉದ್ಘಾಟನಾ ಕಾರ್ಯಕ್ರಮಕ್ಕೆ ಆಹ್ವಾನಿಸಲು ನಿರ್ಧರಿಸಲಾಯಿತು. ಜಿಲ್ಲಾಧಿಕಾರಿ ಡಿ.ರಂದೀಪ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಅಂಜುಮನ್ ಮಹಾವಿದ್ಯಾಲಯದ ಪ್ರಾಚಾರ್ಯ ಶ್ರೀಮತಿ ಉಜ್ವಲಾ ಸರನಾಡಗೌಡ ಅವರನ್ನು ವಿಶೇಷ ಉಪನ್ಯಾಸಕರನ್ನಾಗಿ ಆಹ್ವಾನಿಸಲು ನಿರ್ಧರಿಸಲಾಯಿತು.
ಕಾರ್ಯಕ್ರಮದಲ್ಲಿ ಮಾನವ ಹಕ್ಕುಗಳ ಸಂರಕ್ಷಣೆಯಲ್ಲಿ ದುಡಿಯುತ್ತಿರುವ ಎನ್.ಜಿ.ಓಗಳು, ಪೋಲಿಸ್ ಇಲಾಖೆ, ನಗರ ಸ್ಥಳೀಯ ಸಂಸ್ಥೆ ಅಧಿಕಾರಿ, ನೌಕರರು, ವಿದ್ಯಾರ್ಥಿಗಳು, ಜಿಲ್ಲೆಯ ಅಧಿಕಾರಿಗಳನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲು ನಿರ್ಧರಿಸಲಾಯಿತು.
ಸಭೆಯಲ್ಲಿ ಸಾರ್ವಜನಿಕ ಅಭಿಯೋಜಕ, ಆಹಾರ ಮತ್ತು ನಾಗರೀಕ ಇಲಾಖೆ ಉಪನಿರ್ದೇಶಕರು, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

loading...

LEAVE A REPLY

Please enter your comment!
Please enter your name here