ಹಾಲಕ್ಕಿ ಸಮಾಜ ಪರಿಶಿಷ್ಟ ಪಂಗಡಕ್ಕೆ ಸೇರಿಸುವವರೆಗೂ ನಿರಂತರ ಹೋರಾಟ

0
75

14Ankola1ಅಂಕೋಲಾ,14 : ಹಾಲಕ್ಕಿ ಜನಾಂಗವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವವರೆಗೂ ನಮ್ಮ ಹೋರಾಟ ನಿರಂತರವಾಗಿ ಮುಂದುವರೆಯುತ್ತದೆ. ತೀರಾ ಹಿಂದುಳಿದ ನಮ್ಮ ಸಮುದಾಯದವರಿಗೆ ನ್ಯಾಯ ಸಿಗಬೇಕಾದರೆ ಪರಿಶಿಷ್ಟ ಪಂಗಡಕ್ಕೆ ಸೇರಬೇಕಾದ ಅನಿವಾರ್ಯತೆಯಿದೆ ಎಂದು ಜಿಲ್ಲಾ ಹಾಲಕ್ಕಿ ಒಕ್ಕಲಿಗರ ಸಂಘದ ಅಧ್ಯಕ್ಷ ಹನುಮಂತ ಬೊಮ್ಮು ಗೌಡ ಅವರು ಹೇಳಿದರು.
ತಾಲೂಕಿನ ಶಿರಕುಳಿಯಲ್ಲಿರುವ ಹಾಲಕ್ಕಿ ಒಕ್ಕಲಿಗರ ಸಂಘದ ಕಟ್ಟಡದಲ್ಲಿ ಹಮ್ಮಿಕೊಂಡ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು. ಸಮುದಾಯ ವಿದ್ಯಾರ್ಥಿ ಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಇಂತಹ ಪುರಸ್ಕಾರ ಕಾರ್ಯಕ್ರಮವನ್ನು ನಿರಂತರವಾಗಿ ನಡೆಸಿ ಕೊಂಡು ಬರಲಾಗಿದೆ ಎಂದರು.
ಸಂಘದ ಪ್ರಮುಖರಾದ ರಮೇಶ ಗೌಡ ಬಿಣಗಾ ಮಾತನಾಡಿ, ಸಮಾಜದಲ್ಲಿ ಜಾಗೃತಿ ಮೂಡಿಸುವ ಕೆಲಸವನ್ನು ಪ್ರಜ್ಞಾವಂತರು ಮಾಡಬೇಕಾಗಿದೆ. ಇಂತಹ ಕಾರ್ಯಕ್ರಮದ ಮೂಲಕ ಪರಸ್ಪರ ಬಾಂಧವ್ಯ ಬೆಸೆಯಲು ಸಹಕಾರಿಯಾಗುತ್ತದೆ ಎಂದರು.
ಸಮಾಜದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪುರಸ್ಕಾರವನ್ನು ವಿತರಿಸಲಾಯಿತು. ನಾಡೋಜ ಸುಕ್ರಿ ಗೌಡ, ಪ್ರಮುಖರಾದ ಮಂಗು ಗೌಡ, ಬಿ.ಎಸ್. ಗೌಡ, ಹೂವಣ್ಣ ಗೌಡ, ಶಿವಾನಂದ ಗೌಡ, ಶ್ರೀಧರ ಗೌಡ, ಅರುಣ ಗೌಡ, ಶ್ಯಾಮ ಗೌಡ, ವಸಂತ ಗೌಡ ಇತರರು ಮಾತನಾಡಿದರು. ಗೋಪಾಲ ಗೌಡ ಪ್ರಾರ್ಥಿಸಿದರು. ಜಿಲ್ಲಾ ಹಾಲಕ್ಕಿ ಒಕ್ಕಲಿಗರ ಸಂಘದ ಕಾರ್ಯದರ್ಶಿ ಎಂ.ಎಚ್. ಗೌಡ ಸ್ವಾಗತಿಸಿದರು. ಶಿಕ್ಷಕ ಗಣಪತಿ ಗೌಡ ನಿರ್ವಹಿಸಿದರು. ಉಪನ್ಯಾಸಕ ನಾರಾಯಣ ಗೌಡ ವಂದಿಸಿದರು.

loading...

LEAVE A REPLY

Please enter your comment!
Please enter your name here