ಬೆಳಗಾವಿಯಲ್ಲೇ ಬಂಡವಾಳ ಹೂಡಿಕೆದಾರರ ಸಮಾವೇಶ ನಡೆಸಲು ಮನವಿ

0
37

ಗೋಕಾಕ 12: ರಾಜ್ಯ ಮಟ್ಟದ ಬಂಡವಾಳ ಹೂಡಿಕೆದಾರರ ಸಮಾವೇಶವನ್ನು ಬೆಳಗಾವಿ ಜಿಲ್ಲೆಯಲ್ಲಿಯೇ ನಡೆಸಬೇಕೆಂದು ಇಲ್ಲಿಯ ಕರ್ನಾಟಕ ನವ ನಿರ್ಮಾಣ ಪಡೆ ಸಂಘಟನೆಯ ಪದಾಧಿಕಾರಿಗಳು ತಾಲೂಕಾಧ್ಯಕ್ಷ ಆನಂದ ಉಳ್ಳಾಗಡ್ಡಿ ಅವರ ನೇತ್ರತ್ವದಲ್ಲಿ ಮಂಗಳವಾರದಂದು ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು.
ಫೆಬ್ರುವರಿ ತಿಂಗಳಲ್ಲಿ ಬೆಂಗಳೂರಿನಲ್ಲಿ ನಡೆಯಲಿರುವ ಬೃಹತ್ ರಾಜ್ಯ ಮಟ್ಟದ ಬಂಡವಾಳ ಹೂಡಿಕೆದಾರರ ಸಮಾವೇಶ ಆಯೋಜಿಸಿದ್ದು, ಇದರಿಂದಾಗಿ ಕೇವಲ ಬೆಂಗಳೂರು ಹಾಗೂ ಮೈಸೂರು ಭಾಗಕ್ಕೆ ಮಾತ್ರ ಲಾಭದಾಯಕವಾಗುತ್ತದೆ. ಉತ್ತರ ಕರ್ನಾಟಕದ ಜಿಲ್ಲೆಗಳಿಗೆ ಯಾವುದೇ ಲಾಭವಾಗುವುದಿಲ್ಲ, ಸಮಾವೇಶವು ಎಲ್ಲ ಜಿಲ್ಲೆಗಳಲ್ಲಿ ಜಿಲ್ಲಾಡಳಿತ ವತಿಯಿಂದ ಪೂರ್ವಭಾವಿಯಾಗಿ ಸಮಾವೇಶ ನಡೆಸುತ್ತಿರುವುದು ಕೇವಲ ಕಾಟಾಚಾರಕ್ಕೆ ಮಾಡುತ್ತಿರುವುದು ಖಂಡನೀಯವಾಗಿದೆ. ಕಳೆದ ಮೂರು ವರ್ಷಗಳಿಂದ ಹೂಡಿಕೆದಾರರ ಸಮಾವೇಶದಿಂದ ಪ್ರಭಾವ ಬೀರಿಲ್ಲ.ಜೊತೆಗೆ ಕೈಗಾರಿಕೆ ಕಂಪನಿಗಳು ಇಲ್ಲಿನ ಜನರಿಗೆ ಯಾವುದೇ ಉದ್ಯೋಗಾವಕಾಶ ದೊರಕಿಸಿಕೊಟ್ಟಿಲ್ಲ. ಉತ್ತರ ಕರ್ನಾಟಕಕ್ಕೆ ಅವಕಾಶವನ್ನು ನೀಡಬೇಕೆಂದು ಒತ್ತಾಯಿಸಿ ತಹಶೀಲ್ದಾರ ಮುಖಾಂತರ ಮುಖ್ಯಮಂತ್ರಿಗಳಿಗೆ ಮತ್ತು ಬೃಹತ್ ಕೈಗಾರಿಕಾ ಸಚಿವರಿಗೆ ಮನವಿಯನ್ನು ಸಲ್ಲಿಸಿದ್ದಾರೆ.

loading...

LEAVE A REPLY

Please enter your comment!
Please enter your name here