ಜಿಲ್ಲೆಯ ಎಲ್ಲ ನಾಯಕರು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ

0
33

ಸಭೆಯಲ್ಲಿ ಕಾಂಗ್ರೆಸ್ ಮುಖಂಡರುಗಳಿಗೆ ರೇವಣ್ಣ ಸೂಚನೆ
ಬೆಳಗಾವಿ 27: ಬೆಳಗಾವಿ ಜಿಲ್ಲೆ ರಾಜ್ಯದಲ್ಲಿಯೇ ಅತೀ ದೊಡ್ಡ ಜಿಲ್ಲೆಯಾಗಿದ್ದೂ, ಈ ಜಿಲ್ಲೆಯ ಜಿಲ್ಲಾ ಪಂಚಾಯತಿ ಹಾಗೂ ತಾಲೂಕಾ ಪಂಚಾಯತಿಗಳನ್ನು ಕೈ ವಶ ಮಾಡಿಕೊಳ್ಳಲು ಜಿಲ್ಲೆಯ ಎಲ್ಲ ಕಾಂಗ್ರೆಸ್ ನಾಯಕರು ಒಗ್ಗಟ್ಟಿನಿಂದ ಕೆಲಸ ಮಾಡಿ ಗೆಲ್ಲುವ ಅಭ್ಯರ್ಥಿಗೆ ಟಿಕೆಟ್ ನೀಡಬೇಕು ಎರಡು ದಿನದಲ್ಲಿ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಿ ಕೆಪಿಸಿಸಿಯಿಂದ ಅನುಮೋದನೆ ಪಡೆದುಕೊಳ್ಳಬೇಕೆಂದು ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಪಕ್ಷದ ವೀಕ್ಷಕರಾದ ಎಚ್.ಎಂ.ರೇವಣ್ಣ ಸೂಚನೆ ನೀಡಿದರು.
ಬೆಳಗಾವಿಯ ಖಾಸಗಿ ಹೊಟೇಲಯೊಂದರಲ್ಲಿ ಜಿಪಂ,ತಾಪಂ ಚುನಾವಣೆಯ ಪೂರ್ವಭಾವಿ ಸಭೆ ನಡೆಸಿದ ಅವರು, ಮುಖ್ಯಮಂತ್ರ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ಅನೇಕ ಚುನಾವಣೆಗಳನ್ನು ಎದುರಿಸಿ ಗೆದ್ದಿದ್ದೆವೆ. ಜಿಪಂ, ತಾಪಂ ಚುನಾವಣೆಯ ಫಲಿತಾಂಶ ಮುಂದಿನ ವಿಧಾನ ಸಭೆ ಚುನಾವಣೆಗೆ ದಿಕ್ಸೂಚಿ ಯಾಗಲಿದ್ದೂ ಈ ಚುನಾವಣೆಯಲ್ಲಿ ಜಿಲ್ಲೆಯ ಎಲ್ಲ ನಾಯಕರು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ ಪಕ್ಷದ ಅಭ್ಯರ್ಥಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಗೆಲ್ಲಿಸುವ ಸಂಕಲ್ಪ ಮಾಡಬೇಕೆಂದು ಹೇಳಿದರು.
ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಮಾತನಾಡಿ, ಕಾಂಗ್ರೆಸ್ ಪಕ್ಷದೊಳಗಿನ ಭಿನ್ನಮತ ಪಕ್ಷದ ಸೋಲಿಗೆ ಕಾರಣವಾಗುತ್ತಿದೆ. ಜಿಲ್ಲಾ ಪಂಚಾಯತಿ ಹಾಗೂ ತಾಲೂಕ ಪಂಚಾಯತಿ ಚುನಾವಣೆಯಲ್ಲಿ ಗೆಲ್ಲುವ ಅಭ್ಯರ್ಥಿಗಳಿಗೆ ಟಿಕೆಟ್ ಸಿಗಬೇಕು. ಈ ನಿಟ್ಟಿನಲ್ಲಿ ಸ್ಥಳಿಯ ನಾಯಕರು ಒಕ್ಕೊರಲಿನ ನಿರ್ಧಾರ ಕೈಗೊಳ್ಳಬೇಕು. ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆಯನ್ನು ಎದುರಿಸಬೇಕು ಎಂದು ಕರೆ ನೀಡಿದರು.
ಜಿಲ್ಲೆಯ ಅಭಿವೃದ್ಧಿಗೆ ರಾಜ್ಯ ಸರ್ಕಾರ ಸಾವಿರಾರು ಕೋಟಿ ಅನುದಾನ ನೀಡಿ ಜಿಲ್ಲೆಯಲ್ಲಿ ಹತ್ತು ಹಲವಾರು ಅಭಿವೃದ್ಧಿ ಕಾಮಗಾರಿಗಳನ್ನು ನಡೆಸಲಾಗುತ್ತಿದ್ದು ಈ ಕುರಿತು ವ್ಯಾಪಕ ಪ್ರಚಾರ ಮಾಡಿ ಪಕ್ಷದ ಗೆಲುವಿಗೆ ಶ್ರಮಿಸಬೇಕು ಎಂದು ಜಾರಕಿಹೊಳಿ ಕಾರ್ಯಕರ್ತರಲ್ಲಿ ಮನವಿ ಮಾಡಿಕೊಂಡರು.
ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳಕರ ಮಾತನಾಡಿ, ಬೆಳಗಾವಿ ಜಿಲ್ಲೆ ಕಾಂಗ್ರೆಸ್ ಪಕ್ಷದ ಭದ್ರಕೋಟೆಯಾಗಿದ್ದು, ಈ ಜಿಲ್ಲೆಯನ್ನು ಕಾಂಗ್ರೆಸ್ ಮುಕ್ತ ಜಿಲ್ಲೆ ಮಾಡಲು ಯಾರಿಂದಲೂ ಸಾಧ್ಯವಿಲ್ಲ. ಜಿಲ್ಲೆಯಾದ್ಯಂತ ಕಾಂಗ್ರಸ್ ಪರ ಗಾಳಿ ಬಿಸುತ್ತಿದ್ದು ಚುನಾವಣೆಯಲ್ಲಿ ಜಿಲ್ಲೆಯ ಎಲ್ಲ ನಾಯಕರು ಜವಾಬ್ದಾರಿಯಿಂದ ತಮ್ಮ ಕರ್ತವ್ಯ ನಿಭಾಯಿಸಿ ಬೆಳಗಾವಿ ಜಿಲ್ಲೆಯನ್ನು ಕಾಂಗ್ರೆಸ್‍ಮಯವನ್ನಾಗಿಸಲು ಶ್ರಮಿಸಬೇಕೆಂದು ಹೇಳಿದರು.
ನಿಕಟಪೂರ್ವ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಲಕ್ಷ್ಮೀ ಹೆಬ್ಬಾಳಕರ ಅವರು, ನೂತನ ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ಜಿಲ್ಲೆಯ ಎಲ್ಲ ಕಾಂಗ್ರೆಸ್ ಮುಖಂಡರ ಸಮ್ಮುಖದಲ್ಲಿ ನಾವಲಗಟ್ಟಿ ಅಧಿಕಾರ ಪದಗ್ರಹಣ ಮಾಡಿದರು.
ಅಥಣಿ ತಾಲೂಕಿನ ಜೆಡಿಎಸ್ ಮುಖಂಡ ಬೂಟಾಳೆ ಅವರು ಜೆಡಿಎಸ್ ತೊರೆದು ನೂರಾರು ಬೆಂಬಲಿಗರೊಂದಿಗೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ಈ ಸಂದರ್ಭದಲ್ಲಿ ಇನ್ನೋರ್ವ ವೀಕ್ಷಕ ಸದಾನಂದ ಡಂಗನವರ, ಸಂಸದ ಪ್ರಕಾಶ ಹುಕ್ಕೇರಿ, ಶಾಸಕರಾದ ಡಿ.ಬಿ.ಇನಾಮದಾರ, ರಮೇಶ ಜಾರಕಿಹೊಳಿ, ಮಾಜಿ ಶಾಸಕರಾದ ಶ್ಯಾಮ ಘಾಟಗೆ, ಸುಭಾಷ ಕೌಜಲಗಿ, ಕಾಕಾಸಾಹೇಬ ಪಾಟೀಲ, ಎ.ಬಿ.ಪಾಟೀಲ, ವಿಧಾನ ಪರಿಷತ್ ಸದಸ್ಯ ಮಾಂತೇಶ ಕೌಜಲಗಿ, ಲಕ್ಷ್ಮಣರಾವ ಚಿಂಗಳೆ, ಅಮರಸಿಂಹ ಪಾಟೀಲ, ವೀರಕುಮಾರ ಪಾಟೀಲ, ಶಿವನಗೌಡ ಪಾಟೀಲ ಸೇರಿಂದತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

loading...

LEAVE A REPLY

Please enter your comment!
Please enter your name here