29 ರಿಂದ ಸಫಾಯಿ ಕರ್ಮಚಾರಿಗಳ ಸಮೀಕ್ಷೆ

0
23

ಬೆಳಗಾವಿ 22: ಫೆ 29 ರಿಂದ ಮಾರ್ಚ 10ರ ವರೆಗೆ ಜಿಲ್ಲೆಯಲ್ಲಿ 2016ರ ಸಫಾಯಿ ಕರ್ಮಚಾರಿಗಳ ಸಮೀಕ್ಷೆ ನಡೆಯಲ್ಲಿದ್ದು. ಗ್ರಾಮೀಣ ಪ್ರದೇಶದಲ್ಲಿರುವ ಸಫಾಯಿ ಕರ್ಮಚಾರಿಗಳನ್ನು ಸಮೀಕ್ಷೆಯಲ್ಲಿ ಗುರುತಿಸಬೇಕು ಎಂದು ಜಿಲ್ಲಾಧಿಕಾರಿ ಎನ್. ಜಯರಾಮ ಅಧಿಕಾರಿಗಳಿಗೆ ಹೇಳಿದರು.
ಅವರು ಸೋಮವಾರ ಜಿಲ್ಲಾಧಿಕಾರಿಗಳ ಕಛೇರಿಯ ಸಭಾಭವನದಲ್ಲಿ ಗ್ರಾಮೀಣ ಪ್ರದೇಶದಲ್ಲಿರುವ ಸಫಾಯಿ ಕರ್ಮಚಾರಿಗಳ 2016ರ ಸಮೀಕ್ಷೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
2011ರ ಸಮೀಕ್ಷೆಯ ವರದಿಯ ಪ್ರಕಾರ ಜಿಲ್ಲೆಯಲ್ಲಿ 45 ಕುಟುಂಬಗಳು ಸಫಾಯಿ ಕರ್ಮಚಾರಿಗಳಿದ್ದರೆಂದು ತಿಳಿದು ಬಂದಿದೆ. ಜಿಲ್ಲೆಯಲ್ಲಿ ನಡೆಯುವ ಸಮೀಕ್ಷೆಯನ್ನು ಆಯಾ ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿಗಳನೊಳ್ಳಗೊಂಡ ತಂಡವನ್ನು ರಚನೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ಸಭೆಯಲ್ಲಿ ಮಾಹಿತಿ ನೀಡಿದರು.
ದೈಹಿಕವಾಗಿ ಮಲ ಹೊರುವ ಪದ್ದತಿ ಇಂದಿಗೂ ಮುಂದು ವರೆದಿರುವುದು ವಿರ್ಪಯಾಸವಾಗಿದೆ. ಅಧಿಕಾರಿಗಳು ತಮ್ಮ ಜವಾಬ್ದಾರಿಯನ್ನು ಅರಿತುಕೊಂಡು ಸಮೀಕ್ಷೆಯಲ್ಲಿ ಸಫಾಯಿ ಕರ್ಮಚಾರಿಗಳ ಕುಟುಂಬಗಳು ಉಳಿಯದಂತೆ ಸಮೀಕ್ಷೆ ನಡಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರವೀಂದ್ರ ಗಡಾದ, ಸಮಾಜ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿ ಉಮಾ ಸಾಲಿಗೌಡರ, ಹಿಂದುಳಿದ ವರ್ಗಗಳ ಜಿಲ್ಲಾ ಕಲ್ಯಾಣ ಅಧಿಕಾರಿ ಪ್ರಕಾಶ ಹರಗಾಪೂರ, ಮಹಾನಗರ ಪಾಲಿಕೆಯ ಉದಯ ತಳವಾರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

loading...

LEAVE A REPLY

Please enter your comment!
Please enter your name here