ಜಿಲ್ಲಾ ಪಂಚಾಯತ ಅಧಿಕಾರ ಕಾಂಗ್ರೆಸ್ ಪಕ್ಷಕ್ಕೆ : ಹೆಬ್ಬಾಳಕರ ವಿಶ್ವಾಸ

0
39

ಬೆಳಗಾವಿ:23 ಜಿಲ್ಲಾ ಪಂಚಾಯತ ಚುನಾವಣೆಯಲ್ಲಿ 43 ಸ್ಥಾನವನ್ನು ಗೆದ್ದು ಮೂವರು ಪಕ್ಷೇತರ ಅಭ್ಯರ್ಥಿಗಳ ಮನವೊಲಿಸಿ ಅಧಿಕಾರ ಹಿಡಿಯುತ್ತೇವೆ ಎಂದು ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳಕರ ಇಂದಿಲ್ಲಿ ವಿಶ್ವಾಸ ವ್ಯಕ್ತಪಡಿಸಿದರು.
ಅವರು ಮಂಗಳವಾರ ನಗರದ ಕಾಂಗ್ರೆಸ್ ಕಚೇರಿಯಲ್ಲಿ ಕರೆಯಲಾದ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತ, ಪ್ರಜಾ ಪ್ರಭುತ್ವದಲ್ಲಿ ವಿರೋಧ ಪಕ್ಷದವರ ಟೀಕೆಯಿಂದ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಲಾಭವಾಗಿದೆ. ಜಿಲ್ಲಾ ಪಂಚಾಯತನ ಅಧಿಕಾರದ ಗದ್ದುಗೆ ಹಿಡಿಯಲು ಇನ್ನೂ ಮೂರು ಸದಸ್ಯರ ಬೆಂಬಲ ಬೇಕಾಗಿದ್ದು ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಅಭ್ಯರ್ಥಿಗಳ ಮನೊಲಿಸುವ ಪ್ರಯತ್ನದಲ್ಲಿದ್ದೇವೆ. ಈ ಬಾರಿ ಜಿಪಂ ಅಧಿಕಾರವನ್ನು ಕಾಂಗ್ರೆಸ್ ಪಕ್ಷಕ್ಕೆ ಆರ್ಶಿವಾದ ನೀಡಿದ ಮತದಾರರಿಗೆ ಧನ್ಯವಾದಗಳನ್ನು ತಿಳಿಸಿದರು.
ಬೆಳಗಾವಿಯ ಅಭಿವೃದ್ಧಿಯ ಪರವಾಗಿ ಬಿಜೆಪಿ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಉತ್ತಮ ಕಾರ್ಯಮಾಡಲಾಗುವುದು ಎಂದರು. ಇದೇ 27 ಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕರೆಸಿ ಬೆಳಗಾವಿಯಲ್ಲಿ ರೈತ ಸಮಾವೇಶದ ಹೆಸರಿನಲ್ಲಿ ಕೆಸರಿಕರಣ ಮಾಡಲು ತೆರಳುತ್ತಿದ್ದಾರೆ ಎಂದು ಆರೋಪಿಸಿದರು.
ಪ್ರಧಾನಿ ನರೇಂದ್ರ ಮೋದಿ ಅವರು ನಮ್ಮ ಯೋಜನೆಗಳನ್ನು ಹೆಸರು ಬದಲಾವಣೆ ಮಾಡಿ ತಾವು ಮಾಡಿದ್ದೇವೆ ಎಂದು ಹೇಳಿಕೊಳ್ಳುತ್ತೊದ್ದಾರೆ ಒಟ್ಟಾರೆಯಾಗಿ 27 ರ ಸಮಾವೇಶ ರೈತರಿಗೆ ಅನುಕೂಲವಾಗಲಿ ಎಂದು ಅವರು ಹಾರೈಸಿದರು.
ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್‍ನ ಗ್ರಾಮೀಣಾಧ್ಯಕ್ಷ ವಿನಯ ನವಲಗಟ್ಟಿ, ಬುಡಾ ಅಧ್ಯಕ್ಷ ಯುವರಾಜ ಕದಂ ಸೇರಿದಂತೆ ಮೊದಲಾದವರು ಹಾಜರಿದ್ದರು.

loading...

LEAVE A REPLY

Please enter your comment!
Please enter your name here