ನ.10 ರಂದು ಟಿಪ್ಪು ಸುಲ್ತಾನ್ ಜಯಂತಿ

0
42

ಕನ್ನಡಮ್ಮ ಸುದ್ದಿ-ಕಾರವಾರ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ನವಂಬರ 10 ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ರಂಗ ಮಂದಿರದಲ್ಲಿ ಮೈಸೂರ ಹುಲಿ ಟಿಪ್ಪು ಸುಲ್ತಾನ್ ಜಯಂತಿ ಕಾರ್ಯಕ್ರಮ ನಡೆಯಲಿದೆ.
ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಅವರು ಕಾರ್ಯಕ್ರಮ ಉದ್ಘಾಟಿಸುವರು. ವಿಧಾನಸಭಾ ಸದಸ್ಯ ಸತೀಶ ಸೈಲ್ ಅವರು ಕಾರ್ಯಕ್ರಮ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಯಶ್ರೀ ಮೊಗೇರ ಜಿಲ್ಲಾ ಪಂಚಾಯತ ಅಧ್ಯಕ್ಷರು, ಸಂಸತ್ ಸದಸ್ಯ ಅನಂತಕುಮಾರ ಹೆಗಡೆ ಶಾಸಕರಾದ ಶಾರದಾ ಶೆಟ್ಟಿ, ವಿಶ್ವೇಶ್ವರ ಹೆಗಡೆ ಕಾಗೇರಿ, ಶಿವರಾಮ ಹೆಬ್ಬಾರ, ಮಂಕಾಳು ವೈದ್ಯ, ವಿಧಾನ ಪರಿಷತ್ ಸದಸ್ಯರಾದ ಶ್ರೀಕಾಂತ ಘೋಟ್ನೇಕರ್, ಬಸವರಾಜ ಹೊರಟ್ಟಿ, ಎಸ್.ವಿ.ಸಂಕನೂರು, ರಾಜೇಂದ್ರ ನಾಯ್ಕ ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರು, ಸಂತೋಷ ರೇಣಕೆ ಜಿ.ಪ ಉಪಾಧ್ಯಕ್ಷರು, ಗಣಪತಿ ನಾಯ್ಕ ಕಾರವಾರ ನಗರಸಭೆ ಅಧ್ಯಕ್ಷರು, ಪ್ರಮೀಳಾ ನಾಯ್ಕ ಕಾರವಾರ ತಾಲೂಕ ಪಂಚಾಯತ ಅಧ್ಯಕ್ಷರು ಭಾಗವಹಿಸುವರು. ಹಿರಿಯ ಪತ್ರಕರ್ತರು ಹಾಗೂ ಸಾಹಿತಿ ರಂಜಾನ್ ದರ್ಗಾ ಅವರು ಟಿಪ್ಪು ಸುಲ್ತಾನ್ ಕುರಿತು ವಿಶೇಷ ಉಪನ್ಯಾಸ ನೀಡುವರು. ಸಭಾ ಕಾರ್ಯಕ್ರಮ ಬಳಿಕ ವಿವಿಧ ಶಾಲೆಗಳ ವಿದ್ಯಾರ್ಥಿಗಳಿಂದ ಸ್ವಾತಂತ್ರ್ಯ ಸಂಗ್ರಾಮ, ದೇಶಭಕ್ತಿ ಇತ್ಯಾದಿಗಳನ್ನು ಪ್ರತಿಬಿಂಬಿಸುವ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಲಿವೆ.

loading...

LEAVE A REPLY

Please enter your comment!
Please enter your name here