ಆಶುಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ

0
107

ಕನ್ನಡಮ್ಮ ಸುದ್ದಿ-ಯಲ್ಲಾಪುರ : ಪದವಿಪೂರ್ವ ಶಿಕ್ಷಣ ಇಲಾಖೆಯ ವತಿಯಿಂದ ಮಂಡ್ಯದ ವಿಶ್ವಮಾನವ ಕಾಲೇಜಿನಲ್ಲಿ ನಡೆದ ಪದವಿಪೂರ್ವ ಕಾಲೇಜುಗಳ ಝೋನಲ್ ಮಟ್ಟದ ಸಹಪಠ್ಯೇತರ, ಸಾಂಸ್ಕøತಿಕ, ಚಟುವಟಿಕೆಗಳ ಸ್ಪರ್ಧೆಯಲ್ಲಿ ತಾಲೂಕಿನ ದೋಣಗಾರದ ದಿನೇಶ ಗಣಪತಿ ಹೆಬ್ಬಾರ ಆಶುಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.
ಉಡುಪಿಯ ಪೂರ್ಣಪ್ರಜ್ಞ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವ ದಿನೇಶ, ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಯನ್ನು ಪ್ರತಿನಿಧಿಸಿದ್ದರು. ಆಶುಭಾಷಣ ಸ್ಪರ್ಧೆಯಲ್ಲಿ ಭಯೋತ್ಪಾದನೆಯ ಪಿಡುಗು ಎಂಬ ವಿಷಯದ ಕುರಿತು ಮಾತನಾಡಿದ್ದರು. ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬಿ. ಎಂ. ಶ್ರೀಕಂಠಯ್ಯ ಬಹುಮಾನ ವಿತರಿಸಿದರು.

loading...