ಕಾನೂನು ಸಾಕ್ಷರತಾ ಪೂರ್ವ ತಯಾರಿಯೊಂದಿಗೆ ಅನುಷ್ಠಾನಗೊಳಿಸಬೇಕು

0
38

ಕನ್ನಡಮ್ಮ ಸುದ್ದಿ-ಧಾರವಾಡ : ಏಪ್ರೀಲ್ ಮತ್ತು ಮೇ ತಿಂಗಳಿನಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸಹಯೋಗದಲ್ಲಿ ಏರ್ಪಡಿಸಲಾಗುವ ಕಾನೂನು ಸಾಕ್ಷರತಾ ಕಾರ್ಯಕ್ರಮಗಳನ್ನು ವಿವಿಧ ಇಲಾಖೆಗಳು ಪೂರ್ವತಯಾರಿಯೊಂದಿಗೆ ಅನುಷ್ಠಾನಗೊಳಿಸಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ವಿ.ಶ್ರೀಶಾನಂದ ಹೇಳಿದರು.
ಜಿಲ್ಲಾ ನ್ಯಾಯಾಲಯ ಸಭಾಂಗಣದಲ್ಲಿ ನಡೆದ ಪ್ರಾಧಿಕಾರದ ದ್ವೈಮಾಸಿಕ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿ, ಏಪ್ರೀಲ್ 8 ರಂದು ಮಾಸಿಕ ರಾಷ್ಟ್ರೀಯ ಲೋಕ ಅದಾಲತ್ ಹಮ್ಮಿಕೊಳ್ಳಲಾಗುವದು.ಏಪ್ರೀಲ್‍ನಲ್ಲಿ ಮಕ್ಕಳ ಹಕ್ಕುಗಳ ಕುರಿತು,ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ,ಭೂಮಿ ಉಳಿಸಿ ದಿನಾಚರಣೆ ,ರೈತರ ಕಲ್ಯಾಣಕ್ಕಾಗಿ ಇರುವ ಸರಕಾರದ ಯೋಜನೆಗಳ ಕುರಿತು ,ಮೇ ತಿಂಗಳಿನಲ್ಲಿ ಅಂತಾರಾಷ್ಟ್ರೀಯ ಕಾರ್ಮಿಕ ದಿನಾಚರಣೆ,ಬಾಲ್ಯ ವಿವಾಹ ತಡೆ,ಶಾಲೆ ಕಡೆ ನನ್ನ ನಡೆ ಜಾಗೃತಿ ಆಂದೋಲನ, ತಂಬಾಕು ವಿರೋಧಿ ದಿನದ ಸಂದರ್ಭದಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಬಗೆಗೆ ಸಭೆಯಲ್ಲಿ ಚರ್ಚಿಸಿತು.
ಜಿಲ್ಲಾ ನ್ಯಾಯಾಧೀಶರಾದ ಎಸ್.ಎಸ್.ಬಳ್ಳೊಳ್ಳಿ,ಸಿದ್ದಪ್ಪ ಹೊಸಮನಿ,ಡಿಹೆಚ್‍ಓ ಡಾ.ಆರ್.ಎಂ.ದೊಡ್ಡಮನಿ,ಜಿಲ್ಲಾ ಪರಿಸರ ಅಧಿಕಾರಿ ವಿಜಯಕುಮಾರ ಕಡಕ್‍ಬಾವಿ,ಡಿಡಿಪಿಐ ಎನ್.ಹೆಚ್.ನಾಗೂರ,ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಗಿರಿಧರ ಕುಕನೂರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಸ್.ಎನ್.ಹೆಗಡೆ ಉಪಸ್ಥಿತರಿದ್ದರು

loading...