ಐಬಿ ನಿರಾಕರಣೆ- ಈ ವಿಷಯದ ಬಗ್ಗೆ ಸದನದಲ್ಲಿ ಧ್ವನಿ

0
66

ಕನ್ನಡಮ್ಮ ಸುದ್ದಿ-ವಿಜಯಪುರ

ಜಿಲ್ಲಾ ಪ್ರವಾಸಿ ಮಂದಿರ ನೀಡಲು ನಿರಾಕರಿಸಿದ ಹಿನ್ನೆಲೆ ಎಚ್.ಡಿ. ಕುಮಾರಸ್ವಾಮಿ ಅವರು ದಿಢೀರನೆ ಖಾಸಗಿ ಹೋಟೆಲ್‍ನಲ್ಲಿ ಸುದ್ದಿಗೋಷ್ಠಿ ಏರ್ಪಡಿಸಬೇಕಾದ ಅನಿವಾರ್ಯತೆ ಎದುರಾಯಿತು.
ಈ ಕುರಿತು ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿರುವ ಅವರು, ಇದೇನು ಚುನಾವಣೆ ನೀತಿ ಸಂಹಿತೆ ಇರುವ ಸಮಯವಲ್ಲ. ಈ ಹಿಂದೆ ರಾಜ್ಯಾದ್ಯಂತ ಸುದ್ದಿಗೋಷ್ಠಿಗಳಿಗಾಗಿ ಪ್ರವಾಸಿ ಮಂದಿರ ನೀಡಲಾಗುತ್ತಿತ್ತು. ಯಾವ ಕಾರಣಕ್ಕಾಗಿ ಜಿಲ್ಲಾಡಳಿತ ಪ್ರವಾಸಿ ಮಂದಿರ ನಿರಾಕರಿಸಿದೆ ಎಂಬ ಮಾಹಿತಿ ಇಲ್ಲ. ಈ ಬಗ್ಗೆ ಸದನದಲ್ಲಿ ವಿಷಯ ಪ್ರಸ್ತಾಪಿಸುತ್ತೇನೆ ಎಂದರು.
ಪ್ರವಾಸಿ ಮಂದಿರ ಬಳಕೆಯಲ್ಲಿ ಭಷ್ಟಾಚಾರ ನಡೆಯುತ್ತಿರುವ ಬಗ್ಗೆ ಸಂಬಂಧಿಸಿದ ಮಾಹಿತಿ ಕಲೆ ಹಾಕುತ್ತಿದ್ದನೇ ಎಂದು ಕುಮಾರಸ್ವಾಮಿ ತಿಳಿಸಿದರು.

loading...