ಕೇಂದ್ರ ಸರ್ಕಾರ ಸ್ಮಾರ್ಟ್ ಸಿಟಿ ಯೋಜನೆ-ಕಣ್ಣಿಗೆ ಮಣ್ಣೆರಚುವ ಕಾರ್ಯ-ಜೂನ್ 15ರೊಳಗಾಗಿ ಅಭ್ಯರ್ಥಿಗಳ ಪಟ್ಟಿ

0
27

ಕನ್ನಡಮ್ಮ ಸುದ್ದಿ-ವಿಜಯಪುರ
ಕೇಂದ್ರ ಸರ್ಕಾರ ಸ್ಮಾರ್ಟ್ ಸಿಟಿ ಯೋಜನೆ ಜಾರಿಗೆ ತಂದು ಕಣ್ಣಿಗೆ ಮಣ್ಣೆರಚುವ ಕಾರ್ಯ ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಹೇಳಿದರು.
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಸ್ಮಾರ್ಟ್ ಸಿಟಿ ಯೋಜನೆಯಡಿ ರಾಜ್ಯದ ಐದು ನಗರಗಳನ್ನು ಆಯ್ಕೆ ಮಾಡಿದೆ. 2015ರಲ್ಲೇ ಯೋಜನೆ ಘೋಷಣೆಯಾಗಿದೆ. ಅದಕ್ಕಾಗಿ 46 ಸಾವಿರ ಕೋಟಿ ರೂ.ನೀಡುವುದಾಗಿ ಹೇಳಿರುವ ಕೇಂದ್ರ ಸರ್ಕಾರ ಮಾಹಿತಿ ಪ್ರಕಾರ ಈ ವರೆಗೆ 500 ಕೋಟಿ ರೂ.ಕೂಡ ಬಿಡುಗಡೆ ಮಾಡಿಲ್ಲ ಎಂದು ಹರಿಕಾರಿದರು.
ಮುಖ್ಯಮಂತ್ರಿಗಳು ಅಧಿಕಾರಿಗಳ ಮಾತು ನಂಬಿ ಕೆಟ್ಟಿರುವುದಾಗಿ ಈಚೆಗಷ್ಟೇ ಹೇಳಿಕೊಂಡಿದ್ದಾರೆ. ಅಧಿಕಾರಿಗಳು ದಾರಿ ತಪ್ಪಿಸಿದರು ಎಂದು ತಿಳಿಸಿದ್ದಾರೆ. ಹೀಗಾಗಿ ಜನರ ಆಶೀರ್ವಾದದಿಂದಾಗಿ ಜೆಡಿಎಸ್ ಅಧಿಕಾರಕ್ಕೆ ಬಂದರೆ ಅಧಿಕಾರಿಗಳ ಸಲಹೆಯಂತೆ ಆಡಳಿತ ನಡೆಸುವುದಿಲ್ಲ ಎಂದರು.
ಕಾಂಗ್ರೆಸ್ ಮುಖಂಡ ಎಚ್.ವಿಶ್ವನಾಥ ಮಾನಸಿಕವಾಗಿ ಜೆಡಿಎಸ್‍ನಲಿದ್ದಾರೆ. ಮುಂದಿನ ತಿಂಗಳು ಅಧಿಕೃತವಾಗಿ ಜೆಡಿಎಸ್‍ಗೆ ಸೇರಲಿದ್ದಾರೆ. ಅವರು ಸಿದ್ಧರಾಮಯ್ಯಗೆ ಪರ್ಯಾಯವಲ್ಲ. ಅವರೊಬ್ಬ ಹಿರಿಯ ಮತ್ತು ಪ್ರಬುದ್ಧ ರಾಜಕಾರಣಿ. ದೇವರಹಿಪ್ಪರಗಿ ಶಾಸಕ ಎ.ಎಸ್. ಪಾಟೀಲ ನಡಹಳ್ಳಿ ಇನ್ನೂ ಕಾಂಗ್ರೆಸ್ ಶಾಸಕರಾಗಿದ್ದಾರೆ. ಮುಂದಿನ ಎರಡು ತಿಂಗಳಲ್ಲಿ ಜೆಡಿಎಸ್‍ಗೆ ಅಧಿಕೃತವಾಗಿ ಸೇರ್ಪಡೆಯಾಗಲಿದ್ದಾರೆ ಎಂದರು.

ಜೂನ್ 15ರೊಳಗಾಗಿ ಶಾಸಕರ ಪಟ್ಟಿ ಬಿಡುಗಡೆ: ಜೆಡಿಎಸ್‍ನ 118 ಅಭ್ಯರ್ಥಿಗಳ ಪಟ್ಟಿ ಸಿದ್ದಗೊಂಡಿದೆ. ಪಟ್ಟಿ ರಾಷ್ಟ್ರೀಯ ಅಧ್ಯಕ್ಷರ ಕೈ ಸೇರಿದೆ. ಜೂನ್ 15ರೊಳಗಾಗಿ ಮೊದಲನೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೊಳಿಸಲಾಗುವುದು ಎಂದು ಹೇಳಿದರು.

loading...