ಅಂಕೋಲಾ ಹೊನ್ನಳ್ಳಿಯಲ್ಲಿ ಅಪಘಾತ: ಐವರ ಸಾವು

0
71

ಕನ್ನಡಮ್ಮ ಸುದ್ದಿ-ಅಂಕೋಲಾ: ನಿಂತಿರುವ ಲಾರಿಗೆ ಸ್ವಿಫ್ಟ್ (ಆZiಡಿe) ( ಏಚಿ 29 b 4291) ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಸ್ವಿಫ್ಟ್ ಕಾರಿನಲ್ಲಿದ್ದ ಐವರು ಸ್ಥಳದಲ್ಲಿಯೇ ಸಾವನ್ನಪ್ಪಿ ನಾಲ್ವರು ಗಂಭೀರ ಗಾಯಗೊಂಡಿರುವ ಘಟನೆ ತಾಲೂಕಿನ ಹೊನ್ನಳ್ಳಿ ಸಮೀಪದ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಬುಧವಾರ ರಾತ್ರಿ ಸಂಭವಿಸಿದೆ.ಸ್ವಿಫ್ಟ್ ಕಾರಿನವರು ವಿಜಯಪುರ ಜಿಲ್ಲೆಯ ಜಮನಾಳ ದಿಂದ ದಕ್ಷಿಣ ಕನ್ನಡದ ಸುಬ್ರಹ್ಮಣ್ಯಕ್ಕೆ ಪ್ರಯಾಣ ಬೆಳೆಸುತ್ತಿದ್ದರು. ವಿಧಿ ಅವರನ್ನು ಅರ್ಧದಲ್ಲಿಯೆ ತಡೆದಿದೆ.
ಮೃತರಲ್ಲಿ ಇಬ್ಬರು ಮಕ್ಕಳು ಓರ್ವ ಮಹಿಳೆ ಹಾಗೂ ಇಬ್ಬರು ಪುರುಷರು ಸೇರಿದ್ದಾರೆ. ಮೃತರ ಹೆಸರು ಇನ್ನಷ್ಟೆ ತಿಳಿದು ಬರಬೇಕಾಗಿದ್ದು, ಗಾಯಗೊಂಡವರಲ್ಲಿ ಮೂವರ ಗುರುತು ಪತ್ತೆಯಾಗಿದ್ದು ದಾನಪ್ಪ ರುದ್ರಪ್ಪ ಕೋರಿ ಆತನ ಮಗ ಆದಿತ್ಯ ದಾನಪ್ಪ ಕೋರಿ ರಾಜು ಗೋಪಾಲ್ ಪಾಟೀಲ್ ಎಂದು ಗುರುತಿಸಲಾಗಿದೆ. ಅಪಘಾತದಾಲ್ಲಿ ಓರ್ವ ಬಾಲಕಿ ಓರ್ವ ಬಾಲಕ ಓರ್ವ ಮಹಿಳೆ ಇಬ್ಬರು ಪುರುಷರು ಸಾವನಪ್ಪಿದ್ದಾರೆ ಎನ್ನಲಾಗಿದೆ.ಸ್ಥಳಕ್ಕೆ ಅಂಕೋಲಾ ಪಿಎಸ್ಐ ಬಸಪ್ಪ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ ಗಂಭೀರ ಗಾಯಗೊಂಡ ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೇರೆಡೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲು ತೆಗೆದುಕೊಂಡು ಹೋಗಲಾಗುತ್ತಿದೆ.

 

loading...