ಜಂತಕಲ್ ಮೈನಿಂಗ್ ಪ್ರಕರಣ: ಕುಮಾರಸ್ವಾಮಿಗೆ ನಿರೀಕ್ಷಣಾ ಜಾಮೀನು

0
48

ಬೆಂಗಳೂರು: ಜಂತಕಲ್ ಮೈನಿಂಗ್ ಕಂಪನಿಗೆ ಪರ್ಮಿಟ್ ನೀಡಿದ ಪ್ರಕರಣ ಸಂಬಂಧ ಮಾಜಿ ಸಿಎಂ ಎಚ್. ಡಿ ಕುಮಾರಸ್ವಾಮಿ ಅವರಿಗೆ ಹೈಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ಸಾಕ್ಷ್ಯಾಧಾರಗಳನ್ನು ನಾಶಪಡಿಸದಂತೆ ಸೂಚಿಸಿರುವ ಕೋರ್ಟ್ 15 ದಿನಗಳಿಗೊಮ್ಮೆ ಎಸ್‍ಐಟಿ ಮುಂದೆ ಹಾಜರಾಗಬೇಕೆಂದು ಸೂಚಿಸಿರುವ ಹೈಕೋರ್ಟ್ ಏಕ ಸದಸ್ಯ ಪೀಠ, 5 ಲಕ್ಷ ರು ಬಾಂಡ್ ಶ್ಯೂರಿಟಿ ನೀಡುವಂತೆ ತಿಳಿಸಿದೆ.
ಕುಮಾರಸ್ವಾಮಿ ಸಿಎಂ ಆಗಿದ್ದ ಸಂದರ್ಭದಲ್ಲಿ ಜಂತಕಲ್ ಕಂಪೆನಿಗೆ ಮೈನಿಂಗ್‍ಗೆ ಅವಕಾಶ ನೀಡಿದ್ದರೆಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‍ಐಟಿ ವಿಚಾರಣೆ ಕೈಗೆತ್ತಿಕೊಂಡಿತ್ತು. ಈ ಸಂಬಂಧ ಕುಮಾರಸ್ವಾಮಿ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಕೆಳಹಂತದ ನ್ಯಾಯಾಲಯದ ವಜಾಗೊಳಿಸಿತ್ತು.

loading...