2019 ರ ಲೋಕಸಭೆ ಚುನಾವಣೆ: ಅಣ್ಣಾಸಾಹೆಬ್ ಜೊಲ್ಲೆ ಪರ ಮತಯಾಚನೆ

0
128

ಯಮಕನಮರಡಿ:
2019 ರ ಲೋಕಸಭೆ ಚುನಾವಣೆಯ ಪ್ರಚಾರಾರ್ಥವಾಗಿ ಯಮಕನಮರಡಿ ಮತಕ್ಷೇತ್ರದಲ್ಲಿ ಬರುವ ಕಡೋಲಿ ಗ್ರಾಮದ ಪಿಕೆಪಿಎಸ್ ಆವರಣದಲ್ಲಿ ಜರುಗಿದ ಭವ್ಯ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರ ಬಹಿರಂಗ ಸಮಾವೇಶದಲ್ಲಿ ರಾಜ್ಯಸಭಾ ಸದಸ್ಯರು, ಮಾಜಿ ಸಂಸದರು, ಹಾಲಿ ಶಾಸಕರು, ಮಾಜಿ ಶಾಸಕರು, ವಿಧಾನ ಪರಿಷತ್ ಸದಸ್ಯರು, ಬಿಜೆಪಿ ಮಂಡಲ ಪದಾಧಿಕಾರಿಗಳೆಲ್ಲರೂ ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಶ್ರೀ. ಅಣ್ಣಾಸಾಹೇಬ ಜೊಲ್ಲೆರವರ ಪರ ಮತಯಾಚಿಸಿ ಈ ಚುನಾವಣೆಯಲ್ಲಿ ಚಿಕ್ಕೋಡಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯನ್ನು ಬಹುಮತಗಳಿಂದ ಗೆಲ್ಲಿಸಿ ಶ್ರೀ. ನರೇಂದ್ರ ಮೋದಿಯವರನ್ನು ಮತ್ತೇ ಪ್ರಧಾನಿಯನ್ನಾಗಿಸಲು ಮನವಿ ಮಾಡಿಕೊಳ್ಳಲಾಯಿತು.
ಈ ಸಂದರ್ಭದಲ್ಲಿ ಗಣ್ಯಮಾನ್ಯರು ಹಾಗೂ ಅಪಾರ ಸಂಖ್ಯೆಯಲ್ಲಿ ಉತ್ಸಾಹಿ ಯುವ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

loading...