ಕದಂಬೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

0
76

ಕನ್ನಡಮ್ಮ ಸುದ್ದಿ-ಶಿರಸಿ: ಕನ್ನಡಿಗರ ಸ್ವಾಭಿಮಾನದ ಸಂಕೇತವಾದ ಬನವಾಸಿ ನೆಲದಲ್ಲಿ ಫೆ.2 ಮತ್ತು 3ರಂದು ನಡೆಯಲಿರುವ ಕದಂಬೋತ್ಸವದ ಆಮಂತ್ರಣ ಪತ್ರಿಕೆಯನ್ನು ಶಾಸಕ ಶಿವರಾಮ ಹೆಬ್ಬಾರ ಭಾನುವಾರ ಶಿರಸಿಯ ಮಿನಿ ವಿಧಾನಸೌಧದಲ್ಲಿ ಬಿಡುಗಡೆ ಮಾಡಿದರು.
ಕದಂಬೋತ್ಸವದ ಪ್ರಯುಕ್ತ ಜನವರಿ 31 ರಂದು ಗುಡ್ನಾಪುರದ ಕದಂಬ ರಾಜ ರವಿವರ್ಮನ ಅರಮನೆ ಆವರಣದಲ್ಲಿ ಕದಂಬ ಜ್ಯೋತಿ ಉದ್ಘಾಟನಾ ಸಮಾರಂಭ ನಡೆಯಲಿದೆ. ನಂತರ ಜ್ಯೋತಿ ವಿವಿಧೆಡೆ ಸಂಚರಿಸಿ ಫೆ.2ರಂದು ಬನವಾಸಿ ತಲುಪಲಿದ್ದು, ಕದಂಬ ಜ್ಯೋತಿಯಿಂದ ಕದಂಬೋತ್ಸವ ಉದ್ಘಾಟನೆ ನಡೆಯಲಿದೆ. ಫೆ.2ರಂದು ಜಿಲ್ಲಾ ಉಸ್ತುವಾರಿ ಸಚಿವ ಆರ್‌.ವಿ.ದೇಶಪಾಂಡೆ ಕದಂಬೋತ್ಸವ ಉದ್ಘಾಟಿಸಲ್ಲಿದ್ದಾರೆ. ನಾಡಿನ ಖ್ಯಾತ ಸಾಹಿತಿ ನಾಡೋಜ ಡಾ.ಕೆ.ಎಸ್‌.ನಿಸಾರ ಅಹಮ್ಮದ್‌ ಇವರಿಗೆ ಕದಂಬೋತ್ಸವ ಉದ್ಘಾಟನಾ ಸಮಾರಂಭದಲ್ಲಿ ‘ಪಂಪ ಪ್ರಶಸ್ತಿ’ ನೀಡಿ ಗೌರವಿಸಲಾಗುವುದು. ಶಾಸಕ ಶಿವರಾಮ ಹೆಬ್ಬಾರ ಅಧ್ಯಕ್ಷತೆ ವಹಿಸಿದ್ದರು. ಕದಂಬೋತ್ಸವ ವೇದಿಕೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಸಚಿವೆ ಉಮಾಶ್ರೀ, ಪ್ರವಾಸೋದ್ಯಮ ಸಚಿವ ಪ್ರೀಯಾಂಕ ಖರ್ಗೆ, ಕೇಂದ್ರ ಸಚಿವ ಅನಂತಕುಮಾರ ಹೆಗಡೆ, ಗ್ರಾಮೀಣಾಭಿವೃದ್ಧಿ ಸಚಿವ ಎಚ್‌.ಕೆ.ಪಾಟೀಲ್‌, ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಜಯಶ್ರೀ ಮೊಗೇರ, ಶಾಸಕರಾದ ವಿಶ್ವೇಶ್ವರ ಹೆಗಡೆ ಕಾಗೇರಿ, ಶಾರದಾ ಶೆಟ್ಟಿ, ಸತೀಶ ಸೈಲ್‌, ಮಂಕಾಳು ವೈದ್ಯ, ಬನವಾಸಿ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ಸಿ.ಎಫ್‌.ನಾಯ್ಕ, ಎ.ಕೆ.ಶಾಸ್ತ್ರೀ, ಜಿಲ್ಲಾ ಪಂಚಾಯ್ತಿ ಸದಸ್ಯೆ ರೂಪಾ ನಾಯ್ಕ, ತಾಲೂಕಾ ಪಂಚಾಯ್ತಿ ಅಧ್ಯಕ್ಷೆ ಶ್ರೀಲತಾ ಕಾಳೇರಮನೆ ಸೇರಿದಂತೆ ವಿವಿಧ ಸ್ಥರದ ಜನಪ್ರತಿನಿಧಿಗಳು, ಅಧಿಕಾರಿಗಳು ಉಪಸ್ಥಿತರಿರುವರು.
ಸಾಂಸ್ಕೃತಿಕ ಕಾರ್ಯಕ್ರಮಗಳು
ಫೆ.3ರಂದು ಸಂಜೆ 7 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದೆ. ರಾಜ್ಯ ಸರ್ಕಾರದ ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಹಾಗೂ ಹಿರಿಯ ಸಾಹಿತಿ ಸಿದ್ದಲಿಂಗ ಪಟ್ಟಣಶೆಟ್ಟಿ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲ್ಲಿದ್ದಾರೆ ಎಂದು ಉಪವಿಭಾಗಾಧಿಕಾರಿ ರಾಜು ಮೊಗವೀರ ಮಾಹಿತಿ ನೀಡಿದರು.
ಈ ವೇಳೆ ತಾಲೂಕು ಪಂಚಾಯ್ತಿ ಅಧ್ಯಕ್ಷೆ ಶ್ರೀಲತಾ ಕಾಳೇರಮನೆ, ಜಿಲ್ಲಾ ಪಂಚಾಯ್ತಿ ಸದಸ್ಯ ಬಸವರಾಜ, ಉಷಾ ಹೆಗಡೆ, ಬನವಾಸಿ ಗ್ರಾಮ ಪಂಚಾಯ್ತಿ ಅಧ್ಯಕ್ಷ ಗಣೇಶ ಸಣ್ಣಲಿಂಗಣ್ಣನವರ, ಎಎಸ್‌ಪಿ ಡಿ.ಎಲ್‌.ನಾಗೇಶ, ತಹಶೀಲ್ದಾರ ಬಸಪ್ಪ ಪೂಜಾರಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

loading...