11ರಂದು ದ್ವಿತಿಯ ಸುತ್ತಿನ ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ರಮ

0
81
11ರಂದು ದ್ವಿತಿಯ ಸುತ್ತಿನ ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ರಮ
ಕನ್ನಡಮ್ಮ ಸುದ್ದಿ-ಬೆಳಗಾವಿ: ದ್ವಿತಿಯ ಸುತ್ತಿನ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಮಾರ್ಚ್ 11 ರಂದು ಜಿಲ್ಲೆಯಾದ್ಯಂತ ಹಮ್ಮಿಕೊಳ್ಳಲಾಗಿದ್ದು, ಸಿಇಓ ಪ್ರತಿ ಗ್ರಾಮ ಪಂಚಾಯತಿಗೆ ಹಲಗೆ ಹೊಡಿಸಲು ಸೂಚನೆ ನೀಡಬೇಕು. ಲಸಿಕೆ ಕಾರ್ಯಕ್ರಮದಲ್ಲಿ ಎನ್‍ಜಿಓ ಅಧಿಕಾರಿಗಳ ಪಾತ್ರ ಬಹು ಮುಖ್ಯವಾಗಿದೆ ಎಂದು   ಹೇಳಿದರು.
ಅವರು ಶನಿವಾರ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಸಭಾಂಗಣದಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದ ನಿಮಿತ್ಯ ಏರ್ಪಡಿಸಿದ್ದ ಜಿಲ್ಲಾ ಕಾರ್ಯಪಡೆ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯಲ್ಲಿ ಐದು ವರ್ಷದೊಳಗಿನ 5,42,174 ಮಕ್ಕಳನ್ನು ಗುರುತಿಸಲಾಗಿದ್ದು, ಎಲ್ಲ ಮಕ್ಕಳಿಗೂ ತಪ್ಪದೇ ಪೋಲಿಯೋ ಲಸಿಕೆಯನ್ನು ಹಾಕಬೇಕು. ಗ್ರಾಮೀಣ ಪ್ರದೇಶದಲ್ಲಿ ಮೂರು ದಿನಗಳ ಕಾಲ ಪಲ್ಸ್ ಪೋಲಿಯೋ ಕಾರ್ಯಕ್ರಮ ನಡೆಯಲಿದೆ. ಮೊದಲನೇ ದಿನ ಲಸಿಕಾ ಕೇಂದ್ರದಲ್ಲಿ ಮಕ್ಕಳಿಗೆ ಲಸಿಕೆ ಹಾಕಲಾಗುತ್ತದೆ. ಎರಡು ಹಾಗೂ ಮೂರನೇ ದಿನ ಮನೆ ಮನೆಗೆ ಭೇಟಿ ನೀಡಿ ಲಸಿಕೆ ಹಾಕುವ ವ್ಯವಸ್ಥೆ ಮಾಡಲಾಗುವುದು. ನಗರ ಪ್ರದೇಶದಲ್ಲಿ ನಾಲ್ಕು ದಿನಗಳ ಕಾಲ ಪಲ್ಸ್ ಪೋಲಿಯೋ ಕಾರ್ಯಕ್ರಮ ನಡೆಯಲಿದೆ ಎಂದು ಹೇಳಿದರು.
ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಮಚಂದ್ರನ್.ಆರ್ ಅವರು ಮಾತನಾಡಿ, ಜಿಲ್ಲೆಯ ಎಲ್ಲ ಗ್ರಾಮ ಪಂಚಾಯತ ವತಿಯಿಂದ ಪಲ್ಸ್ ಪೋಲಿಯೋ ಕಾರ್ಯಕ್ರಮದ ಕುರಿತು ಅರಿವು ಮೂಡಿಸುವ ನಿಟ್ಟಿನಲ್ಲಿ ಗ್ರಾಮದಲ್ಲಿ ಹಲಗೆ (ಟಾಂಟಾಂ) ಹೊಡಿಸಬೇಕು. ಈ ಕುರಿತು ಎಲ್ಲ ಗ್ರಾಮ ಪಂಚಾಯತಗಳಿಗೆ ಸೂಚನೆ ನೀಡಲಾಗುವುದು ಎಂದರು. ನರೇಗಾ ಕೆಲಸದಲ್ಲಿ ಇರುವ ಕೂಲಿ ಕಾರ್ಮಿಕರ ಮಕ್ಕಳಿಗೂ ಸಹ ಸ್ಥಳಕ್ಕೆ ಬೇಟಿ ನೀಡಿ ಪೋಲಿಯೋ ಲಸಿಕೆ ಹಾಕಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮಹಾನಗರ ಪಾಲಿಕೆಯ ಆಯುಕ್ತರಾದ ಶಶಿಧರ ಕುರೇರ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಅಪ್ಪಾಸಾಹೇಬ ನರಹಟ್ಟಿ, ಎಡಿಎಚ್‍ಒ ಡಾ,ಎಸ್.ವಿ. ಮನ್ನಾಳ, ಆರ್‍ಸಿಎಚ್‍ಒ ಡಾ, ಐ.ಪಿ. ಗಡಾದಿ ಸೇರಿದಂತೆ ಶಿಕ್ಷಣ, ಸಾರಿಗೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸೇರಿದಂತೆ ಇನ್ನಿತರ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.
loading...