ರಾಯಬಾಗ ಕಾಂಗ್ರೆಸ್‍ನಲ್ಲಿ ಭಿನ್ನಮತವಿಲ್ಲ: ರಮೇಶ ಜಾರಕಿಹೊಳಿ

0
109

ರಾಯಬಾಗ 18: ಜಿಲ್ಲೆಯ ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಬಿನ್ನಾಭಿಪ್ರಾಯವಿಲ್ಲ ಎಲ್ಲ ಸರಿಯಾಗಿದೆ ಬರುವ ವಿಧಾನಸಭೆಯ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಹೆಚ್ಚು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳೆ ಗೆಲುವು ಸಾಧಿಸುವುದು ನಿಶ್ಚಿತ ಜನರು ಯಾವುದೇ ಗೊಂದಲಕ್ಕೆ ಕಿವಿಗೊಡದೇ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಹೇಳಿದರು.

ರಾಯಬಾಗ ಮತಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪ್ರದೀಪ ಮಾಳಗಿಯವರಿಗೆ ಕಾಂಗ್ರೆಸ್ ಪಕ್ಷದ ‘ಬಿ’ ಫಾರಂ ನೀಡಿ ಮಾತನಾಡಿದರು. ಟಿಕೆಟ್ ನೀಡುವುದು ಹೈಕಮಾಂಡ ಎಲ್ಲರೂ ಅದಕ್ಕೆ ಬದ್ಧರಾಗಿರಬೇಕು ಕೆಲ ಆಕಾಂಕ್ಷಿಗಳಿಗೆ ಕಾಂಗ್ರೆಸ್ ಪಕ್ಷದ ಟಿಕೆಟ್ ಸಿಗದಿರುವ ಹಿನ್ನಲೆಯಲ್ಲಿ ಅತೃಪ್ತರಾಗುವುದು ಸಹಜ ಆದರೆ ಯಾವುದೇ ಕಾರಣಕ್ಕೂ ಕಾಂಗ್ರೆಸದಲ್ಲಿ ಬಂಡಾಯ ಅಭ್ಯರ್ಥಿಗಳನ್ನು ಚುನಾವಣೆಯಲ್ಲಿ ನಿಲ್ಲಿಸಲು ಬಿಡುವುದಿಲ್ಲ. ಎಐಸಿಸಿ ಕಾರ್ಯದರ್ಶಿ ಸತೀಶ ಜಾರಕಿಹೊಳಿಯವರ ನೇತೃತ್ವದಲ್ಲಿ ಅತೃಪ್ತ ಟಿಕೆಟ್ ಆಕಾಂಕ್ಷಿಗಳೊಂದಿಗೆ ಸಂಧಾನ ಮಾತುಕತೆ ನಡೆಸಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಎಲ್ಲರೂ ಒಗ್ಗಟಿನಿಂದ ಶ್ರಮಿಸಲಾಗುವುದೆಂದು ಹೇಳಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ ಸದಸ್ಯ ವಿವೇಕರಾವ ಪಾಟೀಲ, ರಾಯಬಾಗ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರದೀಪ ಮಾಳಗಿ,ಜಿ.ಪಂ.ಸದಸ್ಯ ಪ್ರಣಯ ಪಾಟೀಲ, ಪ್ರಚಾರ ಸಮಿತಿ ಅಧ್ಯಕ್ಷ ಹಣಮಂತ ಸಾನೆ, ಕಲ್ಲಪ್ಪ ಹಳಿಂಗಳೆ, ದಾದು ಹಂಡಗೆ, ಭರಮಾ ಡೋಣೆ, ವಾಸು ಮನ್ನಿಕೆರಿ, ಚಂದ್ರಕಾಂತ ಕೋರೆ, ಭೂಪಾಲ ಪುಣೇಕರ, ಮಹಾದೇವ ಕೋಕಾಟೆ, ಯೂನುಸ ಅತ್ತಾರ, ಕಾಶಿಂ ಮುಲ್ಲಾ, ರಶೀದ ಪಠಾಣ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.

loading...