ಸಂಭವನೀಯ ಪ್ರವಾಹ ಎದುರಿಸಲು ಜಿಲ್ಲಾಡಳಿತ ಸನ್ನದ್ಧ: ಡಿಸಿ ಜಿಯಾವುಲ್ಲಾ

0
25

ಕನ್ನಡಮ್ಮ ಸುದ್ದಿ
ಚಿಕ್ಕೋಡಿ 20: ಮಹಾರಾಷ್ಟ್ರದ ಕೊಯ್ನಾ ಜಲಾಶಯ 82.55 ಟಿಎಂಸಿಯಷ್ಟು ಭರ್ತಿಯಾಗಿದ್ದು, 105 ಟಿಎಂಸಿ ಗರಿಷ್ಟಮಟ್ಟ ತುಂಬುವವರೆಗೆ ನೀರು ಬಿಡುವದಿಲ್ಲ, ಬಿಟ್ಟರೂ ಸಹ ಸಂಭವನೀಯ ಪ್ರವಾಹ ಎದುರಿಸಲು ಜಿಲ್ಲಾಡಳಿತ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಜಿಯಾವುಲ್ಲಾ ಹೇಳಿದರು.
ಕೃಷ್ಣಾ ನದಿ ಒಳಹರಿವು 2 ಲಕ್ಷ ಕ್ಯೂಸೆಕ್ ದಾಟಿದ ಹಿನ್ನೆಲೆಯಲ್ಲಿ ಸಂಭವನೀಯ ಪ್ರವಾಹ ಪರಿಸ್ಥಿತಿ ಇರುವ ಚಿಕ್ಕೋಡಿ ತಾಲೂಕಿನ ಯಡೂರ, ಕಲ್ಲೋಳ, ಇಂಗಳಿ ಗ್ರಾಮಗಳಿಗೆ ಜಿಲ್ಲಾಧಿಕಾರಿ ಜಿಯಾವುಲ್ಲಾ ಶುಕ್ರವಾರ ಬೇಟ್ಟಿ ನೀಡಿ ಪರಿಶೀಲನೆ ನಡೆಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಿಕ್ಕೋಡಿ ತಾಲೂಕಿನ ಮಾಂಜರಿ ಸೇತುವೆ ಬಳಿ 1.81 ಲಕ್ಷ ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, ಹಿಪ್ಪರಗಿ ಬ್ಯಾರೇಜ್‍ನಿಂದ 2.03 ಲಕ್ಷ ಕ್ಯೂಸೆಕ್ ಒಳಹರಿವು ಇದ್ದು 2.02 ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ. ಆಲಮಟ್ಟಿಯಿಂದ 1.73 ಕ್ಯೂಸೆಕ್ ನೀರನ್ನು ಹೊರಗೆ ಬಿಡಲಾಗುತ್ತಿದೆ 2 ಲಕ್ಷ 25 ಸಾವಿರ ಕ್ಯೂಸೆಕ್ಸ ಒಳಹರಿವು ದಾಟಿದರೆ ಮಾತ್ರ ಪ್ರವಾಹ ಪರಿಸ್ಥಿತಿ ಎದುರಾಗಲಿದೆ.
ಮಹಾರಾಷ್ಟ್ರದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿದೆ. ಹೀಗಾಗಿ ಇನ್ನೆರಡು ದಿನಗಳಲ್ಲಿ ನದಿಗಳ ಪಾತ್ರದಲ್ಲಿ ಇಳಿತ ಕಾನುವ ಲಕ್ಷಣಗಳಿವೆ. ನದಿ ತೀರದಲ್ಲಿ ನೇಮಕವಾಗಿರುವ ನೋಡೆಲ್ ಅಧಿಕಾರಿಗಳಿಗೆ ಅವಶ್ಯವೆನಿಸಿದ ಕಡೆಗಳಲ್ಲಿ ಗಂಜಿ ಕೇಂದ್ರಗಳನ್ನು ತೆರೆಯಲು ಸೂಚನೆ ನೀಡಿದೆ.
ಜಿಲ್ಲಾ ಪಂಚಾಯತಿ ಸಿಇಒ ರಾಮಚಂದ್ರನ್, ಎಸ್.ಪಿ.ಸುದೀಂದ್ರಕುಮಾರ ರೆಡ್ಡಿ, ಉಪವಿಭಾಗಾಧಿಕಾರಿ ಗೀತಾ ಕೌಲಗಿ, ಡಿವೈಎಸ್‍ಪಿ ದಯಾನಂದ ಪವಾರ, ತಹಶೀಲ್ದಾರ ಚಿದಂಬರ ಕುಲಕರ್ಣಿ ಸೇರಿದಂತೆ ಪೋಲಿಸ್ ಅಧಿಕಾರಿಗಳು ಇದ್ದರು.
..

loading...