ಪ್ರತ್ಯೇಕತೆಯ ಕೂಗು: ಒಮ್ಮತದ ಕೊರತೆ

0
24

ಬೆಂಗಳೂರು: ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಕೂಗಿಗೆ ಬಿಜೆಪಿ ಶಾಸಕ ಬಿ. ಶ್ರೀರಾಮುಲು ಅವರ ಹೇಳಿಕೆಗೆ ಬಿಜೆಪಿ ನಾಯಕರಲ್ಲಿಯೇ ಒಮ್ಮತವಿಲ್ಲ. ಸಂಸದೆ ಶೋಭಾ ಕರಂದ್ಲಾಜೆ ಪ್ರತ್ಯೇಕ ರಾಜ್ಯ ರಚನೆ ಬೇಡಿಕೆ ಸರಿಯಲ್ಲ ಎಂದಿದ್ದರೆ ಮತ್ತೇ ಬೆಜೆಪಿ ನಾಯಕ ಶಾಸಕ ಸುರೇಶ್ ಕುಮಾರ್, ಕರ್ನಾಟಕವನ್ನು ವಿಭಜಿಸುವ ಮಾತು ಸರಿಯಲ್ಲ. ಪ್ರತ್ಯೇಕ ರಾಜ್ಯವಾಗುವುದರಿಂದ ಸಮಸ್ಯೆಗಳಿಗೆ ಪರಿಹಾರ ಸಿಗುವುದಿಲ್ಲ ಎಂದು ಹೇಳಿದ್ದಾರೆ.
ಉತ್ತರ ಕರ್ನಾಟಕಕ್ಕೆ ಪ್ರತ್ಯೇಕ ರಾಜ್ಯ ರಚನೆಗೆ ಒತ್ತಾಯಿಸಿ ಆಗಸ್ಟ್ 2ರಂದು ಕರೆ ನೀಡಲಾಗಿರುವ ಉತ್ತರ ಕರ್ನಾಟಕ ಬಂದ್‍ಗೆ ಕೆಲವು ಸಂಘಟನೆಗಳು ಮತ್ತು ಸಾರ್ವಜನಿಕರು ಸಾಮಾಜಿಕ ಮಾಧ್ಯಮಗಳಲ್ಲಿ ಟೀಕೆ ವ್ಯಕ್ತಪಡಿಸುತ್ತಿದ್ದಾರೆ.
ರಾಜಕೀಯ ನಾಯಕ ಶ್ರೀರಾಮುಲು, ಉಮೇಶ್ ಕತ್ತಿ ಮೊದಲಾದವರು ಕರೆ ನೀಡಲಾಗಿರುವ ಬಂದ್‍ಗೆ ಸಾರ್ವಜನಿಕವಾಗಿ ಬೆಂಬಲ ಸೂಚಿಸಿದ ನಂತರ ಸಾಮಾಜಿಕ ಮಾಧ್ಯಮದಲ್ಲಿ ಬಿಜೆಪಿ ವಿರುದ್ಧ ಹರಿಹಾಯುತ್ತಿದ್ದಾರೆ. ಕನ್ನಡದಲ್ಲಿ ಡಬ್ಬಿಂಗ್ ಹಕ್ಕುಗಳಿಗಾಗಿ ಹೋರಾಟ ನಡೆಸಿದ್ದ, ಹಿಂದಿ ಭಾಷೆ ಹೇರಿಕೆ ವಿರೋಧಿ ಸಂಘಟನೆಗಳು ಮತ್ತು ಕಾರ್ಯಕರ್ತರು ಪ್ರತ್ಯೇಕ ರಾಜ್ಯ ರಚನೆಯ ಒತ್ತಾಯವನ್ನು ವಿರೋಧಿಸಿ ಆನ್ ಲೈನ್ ನಲ್ಲಿ ಅಖಂಡ ಕರ್ನಾಟಕಕ್ಕೆ ಒತ್ತಾಯಿಸುತ್ತಿದ್ದಾರೆ.

loading...