ಉಚಿತವಾಗಿ ಬಸ್ ಪಾಸ ನೀಡುವಂತೆ ಆಗ್ರಹಿಸಿ ಮನವಿ

0
71

ಬೈಲಹೊಂಗಲ- ರಾಜ್ಯದ ಎಲ್ಲಾ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತವಾಗಿ ಬಸ್ ಪಾಸ ನೀಡುವಂತೆ ಆಗ್ರಹಿಸಿ ಶನಿವಾರ ಅಖೀಲ ಭಾರತೀಯ ವಿದ್ಯಾರ್ಥಿ ಪರಿಷತ್ ತಾಲೂಕಾ ಘಟಕ ಉಪವಿಭಾಗಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.
ತಾಲೂಕಾ ಸಂಚಾಲಕ ಸಿದ್ದಾರೂಡ ಹೊಂಡಪ್ಪನವರ ಮಾತನಾಡಿ, ರಾಜ್ಯದ ಸಮ್ಮಿಶ್ರ ಸರ್ಕಾರವು ಶಾಲಾ ಕಾಲೇಜು ವಿದ್ಯಾರ್ಥಿಗಳಲ್ಲಿ ತಾರತಮ್ಯ ನೀತಿಯನ್ನು ಅನುಸರಿಸುತ್ತಿದ್ದು, ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ರಾಜ್ಯದ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ ಘೋಷಣೆಯನ್ನು ಮಾಡಿ ಇತ್ತಿಚೆಗೆ ಮಂಡಿಸಿದ ಬಜೇಟನಲ್ಲಿ ಅದನ್ನು ಜಾರಿಗೊಳಿಸದೇ ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡಿದೆ. ರಾಜ್ಯ ಸರ್ಕಾರದ ಈ ವಿದ್ಯಾರ್ಥಿ ವಿರೋಧಿ ನೀತಿಯನ್ನು ಎಬಿವಿಪಿ ತಾಲೂಕಾ ಘಟಕ ತೀವ್ರವಾಗಿ ಖಂಡಿಸುತ್ತದೆ.
ವಿದ್ಯಾರ್ಥಿಗಳಲ್ಲಿ ಸರ್ಕಾರಿ ಹಾಗೂ ಖಾಸಗಿ ಎಂಬ ಬೇಧಭಾವವನ್ನು ಮೂಡಿಸುತ್ತಿದೆ. ಖಾಸಗಿ ವಿದ್ಯಾ ಸಂಸ್ಥೆಗಳಲ್ಲಿಯೂ ಕೂಡಾ ಗ್ರಾಮೀಣ ಭಾಗದಿಂದ ಬಂದ ಬಡ, ಮಧ್ಯಮ ವರ್ಗದ ಜನಾಂಗಕ್ಕೆ ಸೇರಿದ ವಿದ್ಯಾರ್ಥಿಗಳಿದ್ದು ವ್ಯಾಸಂಗ ಮಾಡುತ್ತಿದ್ದು ಸರ್ಕಾರ ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡುತ್ತಿದೆ. ಸರ್ಕಾರಗಳು ಶೈಕ್ಷಣಿಕ ಪ್ರಗತಿಗೆ ಸಾಕಷ್ಟು ಅನುದಾನವನ್ನು ಮಂಜೂರು ಮಾಡಿ ವಿದ್ಯಾರ್ಥಿಗಳಿಗೆ ಪ್ರೊÃತ್ಸಾಹ ನೀಡುತ್ತಿದೆ. ಉಚಿತ ಬಸ್ ವಿತರಿಸಿ ಗ್ರಾಮೀಣ ವಿದ್ಯಾರ್ಥಿಗಳ ಶೈಕ್ಷಣಿಕ ಹಕ್ಕುಗಳಿಗೆ ಮರುಜೀವ ನೀಡಬೇಕು ಎಂದರು.
ಪಟ್ಟಣದ ವೀರರಾಣಿ ಕಿತ್ತೂರು ಚನ್ನಮ್ಮ ಸಮಾಧಿ ಸ್ಥಳದಿಂದ ಆರಂಭವಾದ ವಿದ್ಯಾರ್ಥಿಗಳ ಬೃಹತ ಪ್ರತಿಭಟನಾ ಮೆರವಣಿಗೆ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಉಪವಿಭಾಗಾಧಿಕಾರಿ ಡಾ. ವಿಜಯಕುಮಾರ ಹೊನಕೇರಿ ಅವರಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ವಿದ್ಯಾರ್ಥಿ ಮುಖಂಡರಾದ, ಪ್ರವೀಣ ತಿಗಡಿ, ವಿರೇಶÀ ಸಂಗೊಳ್ಳಿ, ರವಿ ಜಾಲಿಕಟ್ಟಿ, ವಿಜಯ ಪಾಟೀಲ, ಅಪ್ಪಯ್ಯ ಪಡೇನ್ನವರ, ಮಂಜುನಾಥ ಭಾಂವಿಹಾಳ, ಪ್ರಫುಲ ಪಾಟೀಲ, ಅಜೀತ ಕುಲಕರ್ಣಿ, ವಿರೇಶ ಮದನಭಾವಿ ಹಾಗೂ ಸಾವಿರಾರು ವಿದ್ಯಾರ್ಥಿಗಳು ಇದ್ದರು.

loading...