ಉತ್ತಮ ಸಮಾಜ ನಿರ್ಮಾಣದಲ್ಲಿ ವಿದ್ಯಾರ್ಥಿಗಳ ಪಾತ್ರ ಮುಖ್ಯ: ರಾಜಶೇಖರ

0
368

ಕನ್ನಡಮ್ಮ ಸುದ್ದಿ-ಕೊಪ್ಪಳ: ಶಿಕ್ಷಕರು ನವ ಸಮಾಜ ನಿರ್ಮಾಣದಲ್ಲಿ, ಹಾಗೂ ಇಂದಿನ ಸವಾಲುಗಳನ್ನು ಮೆಟ್ಟಿನಿಲ್ಲಲು ವಿದ್ಯಾರ್ಥಿಗಳನ್ನು ಸಿದ್ಧಗೊಳಿಸುವಲ್ಲಿ ಶಿಕ್ಷಕರ ಪಾತ್ರ ಬಹು ಪ್ರಮುಖವಾದುದ್ದು ಎಂದು ಜಿಲ್ಲಾ ಪಂಚಾಯತಿ ಅಧ್ಯಕ್ಷ ಕೆ. ರಾಜಶೇಖರ ಹಿಟ್ನಾಳ ಹೇಳಿದರು.
ನಗರದ ಸಾಹಿತ್ಯ ಭವನದಲ್ಲಿ ಶನಿವಾರ ನಡೆದ ಶಿಕ್ಷಕರ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ, ಉತ್ತಮ ಶಿಕ್ಷಕರು, ನಿವೃತ್ತ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಇಂದಿನ ತಂತ್ರಜ್ಞಾನ ಹಾಗೂ ಸ್ಪರ್ಧೆಯುಗಕ್ಕೆ ತಕ್ಕಂತೆ ಶಿಕ್ಷಣ ಮತ್ತು ವಿದ್ಯಾರ್ಥಿಗಳನ್ನು ತಯಾರು ಮಾಡಬೇಕು, ಆಧುನಿಕ ಪ್ರಪಂಚ ಬೆಳೆದಂತೆಲ್ಲ ವಿದ್ಯಾರ್ಥಿಗಳು ಮಾರ್ಡ್‍ನ ಶಿಕ್ಷಣಕ್ಕೆ ಮಾರು ಹೋಗುತ್ತಿದ್ದಾರೆ. ಹೀಗಾಗಿ ಸರ್ಕಾರಿ ಶಾಲೆಯ ಶಿP್ಷÀಕರು ಕೂಡ ಕಾಲಕ್ಕೆ ತಕ್ಕ ಹಾಗೇ ಬದಲಾಗಬೇಕು. ವಿದ್ಯಾರ್ಥಿಗಳಿಗೆ ವಿನೂತನ ರೀತಿಯಲ್ಲಿ ಬೋಧನೆ ಮಾಡುವ ಕೌಶಲ್ಯ ಬೆಳೆಸಿಕೊಳ್ಳಬೇಕು. ಅಂದಾಗ ಮಾತ್ರ ಸುಭದ್ರ ರಾಷ್ಟ್ರ ನಿರ್ಮಾಣಕ್ಕೆ ಶಿಕ್ಷಕರ ಕೊಡುಗೆ ಸಾರ್ಥಕವಾಗುತ್ತದೆ ಎಂದು ಹೇಳಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಶೋಭಾ ಬಾಗೇವಾಡಿ ಮಾತನಾಡಿ, ಅನೇಕ ಮಹನೀಯರು ಶಿP್ಷÀಣ ಕ್ಷೇತ್ರಕ್ಕೆ ತಮ್ಮದೇ ಆದ ಕೊಡುಗೆ ನೀಡಿz್ದÁರೆ. ಮಹಿಳಾ ಕ್ಷೇತ್ರದಲ್ಲಿ ಸಾವಿತ್ರಿ ಬಾಯಿ ಪುಲೆ ಅವರು ಕೂಡ ಶಿP್ಷÀಣ ಕ್ಷೇತ್ರಕ್ಕೆ ತಮ್ಮದೇ ಆದ ಕೊಡುಗೆ ನೀಡಿz್ದÁರೆ eಒಜu ಸ್ಮರಿಸಿದರು.
ಇದೇ ವೇಳೆ ಉತ್ತಮ ಸೇವೆ ಸಲ್ಲಿಸಿದ ಶಿಕ್ಷಕರು ಹಾಗೂ ನಿವೃತ್ತ ಶಿಕ್ಷಕರಿಗೆ ಸನ್ಮಾನಿಸಿ ಗೌರವಿಸಲಾಯಿತು. ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎ. ಶ್ಯಾಮಸುಂದರ, ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ನಾಗರಾಜ ಜುಮ್ಮಣ್ಣವರ, ಉಪನ್ಯಾಸಕ ಶರಣಬಸಪ್ಪ ಬಿಳಿಎಲಿ, ಶಿವಪ್ಪ ಜೋಗಿ, ಬೀರಪ್ಪ ಅಂಡಗಿ, ವೆಂಕಟೇಶ ಗೌಡರ, ಶರಣೇಗೌಡ ಪೆÇಲೀಸ್ ಪಾಟೀಲ್, ಶರಣಬಸವನಗೌಡ ಪಾಟೀಲ, ಸುರೇಶ ಅರಕೇರಿ, ಬಸವನಗೌಡ ಮೇಟಿ, ಶರಣೇಗೌಡ, ಪ್ರಾಣೇಶ ಪೂಜಾರ ಇದ್ದರು.

loading...