ಸ್ವಚ್ಛ ಗ್ರಾಮಕ್ಕೆ ಎಲ್ಲರೂ ಕೈಜೋಡಿಸಿ: ಹಂಚಿನಾಳ

0
14

ಕನ್ನಡಮ್ಮ ಸುದ್ದಿ-ಮುಂಡರಗಿ: ಎನ್‍ಎಸ್‍ಎಸ್ ಶಿಬಿರಾರ್ಥಿಗಳ ಜೊತೆಗೆ ಗ್ರಾಮಸ್ಥರು ಕೈಜೋಡಿಸಿ ಸ್ವಚ್ಛಂದ ಗ್ರಾಮವನ್ನಾಗಿ ಮಾಡಲು ಶ್ರಮಿಸಬೇಕು. ಸಾಮಾಜಿಕ ಸೇವೆಯ ಮೂಲಕ ಜನಜಾಗೃತಿ ಕೆಲಸ ಮಾಡುವಂತ ಶಿಬಿರಾರ್ಥಿಗಳ ಕಾರ್ಯ ಶ್ಲಾಘನೀಯ. ಎಂದು ಭಾರತ ಸೇವಾ ದಳ ತಾಲೂಕು ಅಧ್ಯಕ್ಷ ಕರಬಸಪ್ಪ ಹಂಚಿನಾಳ ಹೇಳಿದರು.
ತಾಲೂಕಿನ ಮಕ್ತುಂಪುರ ಗ್ರಾಮದಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜ್ ಎನ್‍ಎಸ್‍ಎಸ್ ಘಟಕದ ವತಿಯಿಂದ ಬುಧರಾತ್ರಿ ರಾತ್ರಿ ಏರ್ಪಡಿಸಿದ್ದ ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸ್ವಚ್ಛತೆ ಬಗೆಗೆ ಎಲ್ಲರೂ ಜಾಗೃತರಾಗಬೇಕು. ಸ್ವಚ್ಛತೆಯಿಂದ ಮಾತ್ರ ಉತ್ತಮ ಆರೋಗ್ಯ ಕಂಡುಕೊಳ್ಳಲು ಸಾಧ್ಯವಾಗುತ್ತದೆ. ಗ್ರಾಮೀಣ ಭಾಗಗಳ ಇನ್ನು ಪ್ರಮಾಣದಲ್ಲಿ ಅಭಿವೃದ್ಧಿ ಕಾಣಬೇಕಿದೆ. ಶಿಬಿರಾರ್ಥಿಗಳ ಕಾರ್ಯವನ್ನು ಗ್ರಾಮಸ್ಥರು ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಶಾಲಾ ಎಸ್‍ಡಿಎಂಸಿ ಅಧ್ಯಕ್ಷೆ ಸುಜಾತಾ ಬರದೂರ ಅಧ್ಯಕ್ಷತೆ ವಹಿಸಿದ್ದರು. ಇದೇ ಸಂದರ್ಭದಲ್ಲಿ ಜಿ.ಪಂ.ಸದಸ್ಯೆ ಶೋಭಾ ಮೇಟಿ ಕಾಲೇಜ್ ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಮಂಜುನಾಥ ಇಟಗಿ, ಪುರಸಭೆ ಅಧ್ಯಕ್ಷೆ ಹೇಮಾವತಿ ಅಬ್ಬಿಗೇರಿ, ದೇವಪ್ಪ ಕಂಬಳಿ, ಎಸ್.ವಿ.ಪಾಟೀಲ, ಉಮೇಶ ಲಕ್ಕುಂಡಿ, ಗಿರಿಯಪ್ಪ ಲಕ್ಕುಂಡಿ, ಅಂದಪ್ಪ ವಾಲಿಕಾರ, ರಾಜೇಶ ಹೂಗಾರ, ಶಿವು ನವಲಗುಂದ, ಕೊರ್ಲಹಳ್ಳಿ ಗ್ರಾ.ಪಂ.ಪಿಡಿಓ ಶಾಬುದ್ದೀನ್ ನದಾಫ್, ಕಾಲೇಜ್ ಉಪನ್ಯಾಸಕರು, ಶಿಬಿರಾರ್ಥಿಗಳು ಮತ್ತು ಗ್ರಾಮಸ್ಥರು ಕಾರ್ಯಕ್ರಮದಲ್ಲಿ ಇದ್ದರು. ಸರ್ಕಾರಿ ಪದವಿ ಪೂರ್ವ ಕಾಲೇಜ್ ಪ್ರಾಚಾರ್ಯ ಎಂ.ಎಂ.ಹೆಬ್ಬಾಳ ಕಾರ್ಯಕ್ರಮ ನಿರೂಪಿಸಿದರು.

loading...