ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಗೆ ಬೆಂಬಲ 

0
19

ನವದೆಹಲಿ: ಕೋಮುವಾದಿ ಬಿಜೆಪಿಯನ್ನು ಅಧಿಕಾರದಿಂದ ದೂರ ಇಡುವ ಉದ್ದೇಶದಿಂದ ಮಧ್ಯ ಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷ ಸರ್ಕಾರ ರಚಿಸಲು ಬೆಂಬಲ ನೀಡುವುದಾಗಿ ಬಿಎಸ್ ಪಿ ನಾಯಕಿ ಮಾಯಾವತಿ ಹೇಳಿದ್ದಾರೆ.
ಕಾಂಗ್ರೆಸ್ ನ ಹಲವು ನೀತಿಗಳಿಗೆ ನನ್ನ ಸಹಮತವಿಲ್ಲ, ಆದರೂ ಮಧ್ಯಪ್ರದೇಶದಲ್ಲಿ ಸರ್ಕಾರ ರಚಿಸಲು ನಾವು ಬೆಂಬಲ ನೀಡಲು ಒಪ್ಪಿರುವುದಾಗಿ ಹೇಳಿರುವ ಅವರು, ಅವಶ್ಯಕತೆ ಬಿದ್ದರೇ ರಾಜಸ್ತಾನದಲ್ಲೂ ಬೆಂಬಲ ನೀಡುವುದಾಗಿ ತಿಳಿಸಿದ್ದಾರೆ.
ಮಧ್ಯ ಪ್ರದೇಶದ 230 ವಿಧಾನಸಭೆ ಕ್ಷೇತ್ರಗಳ ಪೈಕಿ ಬಿಎಸ್ ಪಿ ಎರಡು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಐದು ರಾಜ್ಯಗಳ ಚುನಾವಣಾ ಫಲಿತಾಂಶ ಬಿಜೆಪಿ ವಿರುದ್ಧ ಬಂದಿದೆ ಎಂದು ಹೇಳಿರುವ ಮಾಯಾವತಿ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ವಿರುದ್ಧ ಹೋರಾಟ ಮಾಡುವುದಾಗಿ ಹೇಳಿದ್ದಾರೆ

loading...