ದಕ್ಷಿಣ ಆಫ್ರಿಕಾ ವಿರುದ್ಧ ಉತ್ತಮ ಪ್ರದರ್ಶನ ನೀಡಲಿದ್ದೇವೆ: ಚಾಂಡಿಮಾಲ್‌

0
9

ಕ್ಯಾನ್‌ಬೆರಾ:- ಮುಂಬರುವ ದಕ್ಷಿಣ ಆಫ್ರಿಕಾ ಸರಣಿಯಲ್ಲಿ ತಂಡ ಉತ್ತಮ ಪ್ರದರ್ಶನ ನೀಡಲಿದೆ ಎಂದು ಶ್ರೀಲಂಕಾ ತಂಡದ ನಾಯಕ ದಿನೇಶ್ ಚಾಂಡಿಮಲ್‌ ಹೇಳಿದ್ದಾರೆ.
ಎರಡನೇ ಹಾಗೂ ಅಂತಿಮ ಪಂದ್ಯದ ಸೋಲಿನ ನಂತರ ಮಾತನಾಡಿದ ಅವರು, ಪ್ರಸ್ತುತ ಶ್ರೀಲಂಕಾ ಯುವ ತಂಡವಾಗಿದ್ದು, ಕಠಿಣ ಪರಿಸ್ಥಿತಿಗಳಲ್ಲಿ ಹೇಗೆ ಆಡಬೇಕೆಂಬುದನ್ನು ಕಲಿಯುತ್ತಿದ್ದು ಫೆ.13 ರಿಂದ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ಪುಟುದೇಳುವುದಾಗಿ ಅವರು ಹೇಳಿದರು.
ಇಂಗ್ಲೆಂಡ್‌ ಹಾಗೂ ಆಸ್ಟ್ರೇಲಿಯಾ ತಂಡಗಳು ಬಲಿಷ್ಠವಾಗಿದ್ದು, ದಕ್ಷಿಣ ಆಫ್ರಿಕಾ ತಂಡ ಕೂಡ ಶಕ್ತಿಯುತವಾಗಿದ್ದು ಉತ್ತಮ ಬೌಲರ್‌ಗಳನ್ನು ಒಳಗೊಂಡಿದೆ. ಹಾಗಾಗಿ, ಪರಿಸ್ಥಿತಿಗೆ ತಕ್ಕಂತೆ ಹೊಂದಿಕೊಂಡು ಉತ್ತಮ ಪ್ರದರ್ಶನ ನೀಡಲಿದ್ದೇವೆ ಎಂದು ಚಾಂಡಿಮಾಲ್‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ

loading...