ನರೇಂದ್ರ ಮೋದಿ ದೇಶದ ಪ್ರಥಮ ಚೌಕಿದಾರ: ಈಶ್ವರಪ್ಪ

0
19
 

ಕನ್ನಡಮ್ಮ ಸುದ್ದಿ-ಗಂಗಾವತಿ: ನಮ್ಮ ದೇಶದ ಪ್ರಥಮ ಚೌಕಿದಾರ(ಕಾವಲುಗಾರ)ನೆಂದರೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಎಂದು ಬಿಜೆಪಿ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ತಿಳಿಸಿದರು.

ಸಿಬಿಎಸ್ ಕಲ್ಯಾಣ ಮಂಟಪದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಚೌಕಿದಾರ ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ನೇರ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ನಮ್ಮ ದೇಶ ಆರ್ಥಿಕವಾಗಿ ೧೫ನೇ ಸ್ಥಾನದಲ್ಲಿತ್ತು. ಇವರ ಆಡಳಿತದಲ್ಲಿ ೬ನೇ ಸ್ಥಾನಕ್ಕೆ ಬಂದಿದೆ. ಈ ಕೀರ್ತಿ ಮೋದಿಯವರಿಗೆ ಸಲ್ಲುತ್ತದೆ. ಮೋದಿ ಚೌಕಿದಾರ ಎನ್ನಲು ದೇಶದ ಜನರಿಗೆ ಹೆಮ್ಮೆ ಎನ್ನಿಸುತ್ತದೆ. ಲೋಕಸಭಾ ಚುನಾವಣೆಯಲ್ಲಿ ೨೦ ರಿಂದ ೨೫ ಸ್ಥಾನಗಳನ್ನು ತಮ್ಮ ಪಕ್ಷ ಪಡೆದುಕೊಳ್ಳಲಿದೆ. ಜೆಡಿಎಸ್ ಪಕ್ಷವನ್ನು ಕಾಂಗ್ರೆಸ್ ಮುಖಂಡರು ಸೋಲಿಸುತ್ತಾರೆ. ಕಾಂಗ್ರೆಸ್ ಪಕ್ಷವನ್ನು ಜೆಡಿಎಸ್ ಕಾರ್ಯಕರ್ತರು ಸೋಲಿಸುತ್ತಾರೆ. ವಿಶ್ವಕ್ಕೆ ಭಾರತ ಗುರುವಾಗುವ ಕಾಲ ಹತ್ತಿರ ಬಂದಿದೆ. ಮೊತ್ತೊಮ್ಮೆ ಮೋದಿ ಆಡಳಿತ ನಡೆಸುತ್ತಾರೆ ಎಂದು ತಿಳಿಸಿದರು.

ಕೊಪ್ಪಳ ಲೋಕಸಭಾ ಬಿಜೆಪಿ ಅಭ್ಯರ್ಥಿ ಕರಡಿ ಸಂಗಣ್ಣ ಮಾತನಾಡಿ ಯುವಕರು ದೇಶದ ಶಕ್ತಿಯಾಗಿದ್ದಾರೆ. ಈ ಸಲದ ಚುನಾವಣೆಯಲ್ಲಿ ಯುವಕರು ಮೋದಿ ಮಂತ್ರ ಜಪಿಸುತ್ತಿದ್ದಾರೆ. ಮತ್ತೊಮ್ಮೆ ಮೋದಿ ಆಡಳಿತ ಬಯಸಿರುವ ಯುವಶಕ್ತಿ ತನ್ನ ಆಸೆಯನ್ನು ಈಡೇರಿಸಿಕೊಳ್ಳುತ್ತದೆ ಎಂದು ತಿಳಿಸಿದರು. ಶಾಸಕರಾದ ಪರಣ್ಣ ಮುನವಳ್ಳಿ, ಬಸವರಾಜ ದಢೇಸೂಗೂರು, ಹಾಲಪ್ಪ ಆಚಾರ್ ಮತ್ತು ಬಿಜೆಪಿ ಜಿಲ್ಲಾ ಅಧ್ಯಕ್ಷ ಸಿಂಗನಾಳ ವಿರುಪಾಕ್ಷಪ್ಪ ಪಾಲ್ಗೊಂಡು ಮಾತನಾಡಿದರು.

loading...