ಗೋವಾದಲ್ಲಿ 10ರಂದು ಮೋದಿ ಪ್ರಚಾರ

0
16

ಪಣಜಿ:- ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಶ್ಯಾಮ ಪ್ರಸಾದ್ ಮುಖರ್ಜಿ ಸ್ಟೇಡಿಯಂನಲ್ಲಿ ಗೋವಾ ಬಿಜೆಪಿ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರ ಮಾಡಲಿದ್ದಾರೆ ಎಂದು ಕೇಂದ್ರ ಆಯುಶ್ ಖಾತೆ ಸಚಿವ ಶ್ರೀ ಪಾದ ಯಸ್ಕೋ ನಾಯಕ್ ಬುಧವಾರ ತಿಳಿಸಿದ್ದಾರೆ.
ಬಿಜೆಪಿಯ ರಾಜ್ಯ ಮುಖ್ಯಕಾರ್ಯಾಲಯದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನ ಮಂತ್ರಿ ಅವರ ಜೊತೆಗೆ ಕೆಲವು ಕೇಂದ್ರ ಬಿಜೆಪಿ ನಾಯಕರು ಮತ್ತು ಕೆಲವು ರಾಜ್ಯಗಳ ಮುಖ್ಯಮಂತ್ರಿಗಳೂ ಸಹ ಚುನಾವಣಾ ಸಭೆ ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಹೇಳಿದರು.ಕೇಂದ್ರ ಸಚಿವರಾದ ನಿತಿನ್ ಗಡ್ಕರಿ, ಸ್ಮೃತಿ ಇರಾನಿ ಸೇರಿದಂತೆ ಹಲವು ಕೇಂದ್ರ ನಾಯಕರು ಹಾಗೂ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ಗೋವಾ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ ಎಂದು ಹೇಳಿದರು.
ಈ ಮೊದಲು ಏಪ್ರಿಲ್ 12ರಂದು ಚುನಾವಣಾ ಪ್ರಚಾರ ಸಭೆಯಲ್ಲಿ ಪ್ರಧಾನ ಮಂತ್ರಿ ಭಾಗಿಯಾಗಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಕೆಲವು ಅನಿವಾರ್ಯ ಕಾರಣಗಳಿಗಾಗಿ ಎರಡು ದಿನ ಮುನ್ನವೇ ಗೋವಾ ಪ್ರಚಾರಕ್ಕೆ ಮೋದಿ ಬರುತ್ತಿದ್ದಾರೆ ಎಂದು ಅವರು ತಿಳಿಸಿದರು.

loading...