ಚಿಕ್ಕೋಡಿಯಲ್ಲಿ ಬಿಜೆಪಿ ಕಾರ್ಯಕರ್ತರ ಬಹಿರಂಗ ಸಮಾವೇಶಕ್ಕೆ ಕ್ಷಣಗಣನೆ

0
68

ಚಿಕ್ಕೋಡಿ: ಪಟ್ಟಣದ ಆರ್.ಡಿ. ಕ್ರೀಡಾಂಗಣದಲ್ಲಿ ನಡೆಯಲಿರುವ ಚಿಕ್ಕೋಡಿಯಲ್ಲಿ ಬಿಜೆಪಿ ಕಾರ್ಯಕರ್ತರ ಬಹಿರಂಗ ಸಮಾವೇಶಕ್ಕೆ ಕ್ಷಣಗಣನೆ ಆರಂಭವಾಗಿದೆ.ಸಮಾವೇಶವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಉದ್ಘಾಟಿಸಲಿದ್ದು, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಸಂಸದ ಪ್ರಲ್ಹಾದ ಜೋಶಿ, ರಾಜ್ಯಸಭಾ ಸದಸ್ಯ ಡಾ‌. ಪ್ರಭಾಕರ್ ಕೋರೆ, ಮಾಜಿ ಸಚಿವ ಉಮೇಶ ಕತ್ತಿ, ವಿಧಾನ ಪರಿಷತ್ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ ಶಾಸಕರಾದ ಶಶಿಕಲಾ‌ ಜೊಲ್ಲೆ, ಪಿ.ರಾಜೀವ, ದುರ್ಯೋಧನ ಐಹೊಳೆ, ಮಾಜಿ ಸಂಸದ ರಮೇಶ ಕತ್ತಿ, ರೈತ ಮೋರ್ಚಾ ಅಧ್ಯಕ್ಷ ಲಕ್ಷ್ಮಣ ಸವದಿ, ಶಶಿಕಾಂತ ನಾಯಿಕ, ಮಾರುತಿ ಅಷ್ಟಗಿ ಸೇರಿದಂತೆ ಹಲವು ನಾಯಕರು ಭಾಗಿಯಾಗಲಿದ್ದಾರೆ.
ಸಮಾವೇಶದಲ್ಲಿ ಮೂವತ್ತು ಸಾವಿರ ಕಾರ್ಯಕರ್ತರು ಸೇರುವ ನಿರೀಕ್ಷೆಯಿದೆ.

loading...