ದೇಶದಲ್ಲಿ ಕಾಂಗ್ರೆಸ್ಗೆ ನೆಲೆ ಇಲ್ಲ : ಡಾ. ಕೋರೆ

0
74

ಕನ್ನಡಮ್ಮ ಸುದ್ದಿ-ಬೆಳಗಾವಿ: ಕಾಂಗ್ರೆಸ್ ನ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ತಮ್ಮ ಕ್ಷೇತ್ರದಲ್ಲಿ ಗೆಲವು ಸಾಧಿಸಲು ಸಾಧ್ಯವಾಗಲ್ಲ ಎಂದು ಮನಗಂಡು ಬೇರೆ ಕ್ಷೇತ್ರ ನೋಡಿಕೊಂಡಿದ್ದಾರೆ ಎಂದು ರಾಜ್ಯ ಸಭಾ ಸದಸ್ಯ ಡಾ. ಪ್ರಭಾಕರ ಕೋರೆ ಹೇಳಿದರು. ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿದರು.
ಧಾರವಾಡ, ಹಾವೇರಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆಯ ವಿಚಾರದಲ್ಲಿ ಗೊಂದಲವಾಗಿದೆ. ಕಾಂಗ್ರೆಸ್ ನವರಿಗೆ ಅಭ್ಯರ್ಥಿಗಳು ಸಿಗುತ್ತಿಲ್ಲ.‌ಇದರಿಂದ ಕರ್ನಾಟಕದಲ್ಲಿ ಬಿಜೆಪಿ‌ 20ಕ್ಕೂ ಅಧಿಕ ಲೋಕಸಭಾ ಕ್ಷೇತ್ರದಲ್ಲಿ ಗೆಲವು ಸಾಧಿಸಲಿದೆ. ಕಾಂಗ್ರೆಸ್ ನಾಯಕರು ಮತಕ್ಕಾಗಿ ದೇವಸ್ಥಾನ ಗಳಿಗೆ ಓಡಾಡುತ್ತಿದ್ದಾರೆ. ಆದರೆ, ಹಿಂದುಳಿದವರನ್ನು ನಿರ್ಲಕ್ಷ್ಯ ಮಾಡಿಕೊಂಡು ಬರುತ್ತಿದೆ. ಧಾರವಾಡ,ಕ್ಷೇತ್ರಗಳಲ್ಲಿ ಅಭ್ಯರ್ಥಿ ಗಳು ಸಿಗುತ್ತಿಲ್ಲ ಅಂತಹ ಸ್ಥೀತಿ ಕಾಂಗ್ರೆಸ್ ಗೆ ಬಂದಿದೆ ಎಂದರು.ಬೆಳಗಾವಿಯಲ್ಲಿ ನಾಲ್ಕನೇ ಬಾರಿಗೆ ಬೆಳಗಾವಿ ಲೋಕಸಭಾ ಅಭ್ಯರ್ಥಿ, ಹಾಲಿ ಸಂಸದ ಸುರೇಶ ಅಂಗಡಿ ಅವರು ಗೆಲವು ಸಾಧಿಸುವುದು ಶತಸಿದ್ದ. ಅದೇ ರೀತಿ ಬುಧವಾರ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ ಜೊಲ್ಲೆ ನಾಮಪತ್ರ ಸಲ್ಲಿಸಿದ್ದಾರೆ. ಅವರ ಗೆಲವು ನಿಶ್ಚಿತ ಎಂದರು. ಪ್ರಧಾನಿ ನರೇಂದ್ರ ಮೋದಿ ಅವರನ್ನು ಸೋಲಿಸಲು ಹುಟ್ಟಿಕೊಂಡಿರುವ ಮಹಾಘಟಬಂಧನ ಪ್ರಾದೇಶಿಕ ಪಕ್ಷಗಳು ಹರಿದು ಹಂಚಿ‌ ಹೋಗುತ್ತಿವೆ.ಈಗಾಗಲೇ ರಾಹುಲ್ ಗಾಂಧಿ ಬಚ್ಚಾ ಅಮೂಲ ಬೆಬಿ ಎಂದು ಪಶ್ಚಿಮ ಬಂಗಾಳ, ಕೆರಳದ ಮುಖ್ಯಮಂತ್ರಿಗಳು ವ್ಯಂಗ್ಯ ಮಾಡುತ್ತಿದ್ದಾರೆ. ಅಂಥ ವ್ಯಕ್ತಿ ಪ್ರಧಾನಿಯಾಗುತ್ತಾರೆ ಎಂದು ಪ್ರಶ್ನಿಸಿದರು.

loading...