ಕೋಟೆನಾಡಿನಿಂದ ಇಂದು ಮೋದಿ ವಿಜಯ ರಣಕಹಳೆ

0
9

ಬೆಂಗಳೂರು:-ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕೋಟೆನಾಡು ಚಿತ್ರದುರ್ಗದಲ್ಲಿ ಬಿಜೆಪಿ ವಿಜಯದ ರಣ ಕಹಳೆ ಮೊಳಗಿಸಲಿದ್ದಾರೆ.
ದೇಶದಲ್ಲಿ ಲೋಕಸಭಾ ಚುನಾವಣೆ ಘೋಷಣೆಯಾದ ಬಳಿಕ ಇದೆ ಮೊದಲ ಬಾರಿಗೆ ರಾಜ್ಯಕ್ಕೆ ಬರುತ್ತಿರುವ ಅವರು ಇಂದು ಚಿತ್ರದುರ್ಗ ಮತ್ತು ಮೈಸೂರಿನಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ಮಾಡಿ ಮತ ಯಾಚಿಸಲಿದ್ದಾರೆ.
ಚಿತ್ರದುರ್ಗ, ತುಮಕೂರು ಮತ್ತು ದಾವಣಗೆರೆ ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಪರವಾಗಿ ಇಂದು ಕೋಟೆನಾಡು ಚಿತ್ರದುರ್ಗದಲ್ಲಿ ಪ್ರಧಾನಿ ಭಾಷಣ ಮಾಡಲಿದ್ದಾರೆ. ನಂತರ ಸಂಜೆ ಮೈಸೂರಿಗೆ ಆಗಮಿಸಿ ಮಹರಾಜ ಕಾಲೇಜು ಮೈದಾನದಲ್ಲಿ ಬೃಹತ್‌ ಬಹಿರಂಗ ಸಭೆಯನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಚಿತ್ರದುರ್ಗ ಕಾರ್ಯಕ್ರಮ ನಿನ್ನೆಯೇ ನಡೆಯಬೇಕಿತ್ತು, ಆದರೆ ದೆಹಲಿಯಲ್ಲಿ ಬಿಜೆಪಿ ಪ್ರಣಾಳಿಕೆ ಬಿಡುಗಡೆ ಕಾರಣ ಒಂದು ದಿನ ಮುಂದಕ್ಕೆ ಹೋಗಿದೆ.
ಚುನಾವಣಾ ಹಿನ್ನೆಲೆಯಲ್ಲಿ ಮೋದಿ ರಾಜ್ಯದಲ್ಲಿ ಏಳು ಕಡೆ ಬಿಜೆಪಿ ಪರವಾಗಿ ಪ್ರಚಾರ ಮಾಡಲಿದ್ದಾರೆ ಎಂದು ಪಕ್ಷ ಈಗಾಗಲೆ ಪ್ರಕಟಿಸಿದೆ. ಇದೆ 13ರಂದು ಮಂಗಳೂರು ಮತ್ತು ಬೆಂಗಳೂರಿನಲ್ಲಿ ಮೋದಿ ಬೃಹತ್‌ ಬಹಿರಂಗ ಸಭೆ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.

loading...