ಮೊದಲ ಹಂತದ ಲೋಕಸಭಾ ಚುನಾವಣೆಗೆ ಇಂದು ಪ್ರಚಾರ ಅಂತ್ಯ

0
8

ನವದೆಹಲಿ:-ಮೊದಲ ಹಂತದ ಲೋಕಸಭಾ ಚುನಾವಣೆಗೆ ಪ್ರಚಾರ ಇಂದು ಅಂತ್ಯಗೊಳ್ಳಲಿದೆ. ಗುರುವಾರ ಮೊದಲ ಹಂತದಲ್ಲಿ 20 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 91 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.
10 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಎಲ್ಲಾ ಲೋಕಸಭಾ ಕ್ಷೇತ್ರಗಳಿಗೆ ಈ ಹಂತದಲ್ಲಿ ಮತದಾನ ನಡೆಯಲಿದೆ. ಆಂಧ್ರಪ್ರದೇಶ, ಅರುಣಾಚಲ ಪ್ರದೇಶ, ಮೇಘಾಲಯ, ಮಿಜೋರಾಂ, ನಾಗಲ್ಯಾಂಡ್, ಸಿಕ್ಕಿಂ, ಅಂಡಮಾನ್ ಮತ್ತು ನಿಕೋಬಾರ್, ಲಕ್ಷದ್ವೀಪ, ತೆಲಂಗಾಣ ಮತ್ತು ಉತ್ತರಾಖಂಡ ರಾಜ್ಯಗಳ ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಮತದಾನ ಗುರುವಾರ ನಡೆಯಲಿದೆ.

ಅಸ್ಸಾಂ, ಬಿಹಾರ, ಛತ್ತೀಸ್‌ಗಡ, ಜಮ್ಮು-ಕಾಶ್ಮಿರ, ಮಹಾರಾಷ್ಟ್ರ, ಮಣಿಪುರ, ಒಡಿಸ್ಸಾ, ತ್ರಿಪುರಾ, ಉತ್ತರ ಪ್ರದೇಶ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳ ಲೋಕಸಭಾ ಕ್ಷೇತ್ರಗಳಿಗೂ ಈ ಹಂತದಲ್ಲಿ ಮತದಾನ ನಡೆಯಲಿದೆ.

ಆಂಧ್ರಪ್ರದೇಶ, ಸಿಕ್ಕಿಂ, ಅರುಣಾಚಲ ಪ್ರದೇಶ ವಿಧಾನಸಭಾ ಕ್ಷೇತ್ರಗಳು ಮತ್ತು ಒಡಿಸ್ಸಾದ 147 ವಿಧಾನಸಭಾ ಕ್ಷೇತ್ರಗಳ ಪೈಕಿ 28 ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಮತದಾನ ನಡೆಯಲಿದ್ದು, ಇಂದು ಸಂಜೆ ಚುನಾವಣಾ ಪ್ರಚಾರ ಅಂತ್ಯಗೊಳ್ಳಲಿದೆ.

ನಾಲ್ಕನೇ ಹಂತದ ಲೋಕಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ. 9 ರಾಜ್ಯಗಳ 71 ಕ್ಷೇತ್ರಗಳಿಗೆ ನಾಲ್ಕನೇ ಹಂತದಲ್ಲಿ ಇದೇ 29ರಂದು ಮತದಾನ ನಡೆಯಲಿದೆ. ನಾಳೆ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಏಪ್ರಿಲ್ 12ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ.

loading...