ಕಾಂಗ್ರೆಸ್‌ನಲ್ಲಿನ ಒಡಕು ಬಿಜೆಪಿಗೆ ವರವಾಗಲಿದೆಯಾ…?

0
26

 

ಅಲ್ಲಲ್ಲಿ ಅಸಮಾಧಾನದ ಹೊಗೆ ! ಕಾಣದ ‘ಕೈ’ಗಳು ಬಿಜೆಪಿ ಅಭ್ಯರ್ಥಿ ಪರ

ಮಾಲತೇಶ ಮಟಿಗೇರ

ಬೆಳಗಾವಿ : ರಾಜ್ಯದಲ್ಲಿರುವ ದೋಸ್ತಿ ಸರ್ಕಾರದಲ್ಲಿನ ಒಡಕು ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷಕ್ಕೆ ವರವಾಗಲಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಅದರಲ್ಲೂ ಬೆಳಗಾವಿಯ ಎರಡು ಲೋಕಸಭಾ ಕ್ಷೇತ್ರಗಳು ಕಮಲದ ತೆಕ್ಕೆ ಸೇರಬಹುದು ಎಂಬ ಮಾತು ರಾಜಕೀಯ ವಲಯದಲ್ಲಿ ಹರಿದಾಡುತ್ತಿವೆ.

ಕಾಂಗ್ರೆಸ್ ನಾಯಕರಲ್ಲಿ ಇರುವ ವೈಮನಸ್ಸಿನಿಂದ ಪಕ್ಷ ಮನೆಯೊಂದು ಮೂರು ಭಾಗಿಲಾಗಿದೆ ಎಂದು ವಿರೋಧ ಪಕ್ಷಗಳು ವ್ಯಂಗ್ಯವಾಡುತ್ತಿದ್ದಾರೆ. ಅಲ್ಲದೆ ಬಿಜೆಪಿ ಪಕ್ಷದ ನಾಯಕರು ಒಗ್ಗೂಡಿ ಭರ್ಜರಿ ಪ್ರಚಾರ ನಡೆಸುತ್ತಿದ್ದರೆ ಇತ್ತ ಕಾಂಗ್ರೆಸ್ ಪಕ್ಷ ತಮ್ಮ ನಾಯಕರನ್ನು ಒಗ್ಗೂಡಿಸುವುದರಲ್ಲಿಯೇ ಸಮಯ ಹಾಳು ಮಾಡುತ್ತಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಜಿಲ್ಲೆಯ ಕಾಂಗ್ರೆಸ್‌ನಲ್ಲಿ ಪಿಎಲ್‌ಡಿ ಬ್ಯಾಂಕ್ ಚುನಾವಣೆ ಬಳಿಕ ಬದಲಾದ ಬೆಳವಣಿಗೆಯ ಬಗ್ಗೆ ಸಾಮಾನ್ಯವಾಗಿ ಎಲ್ಲರಿಗೂ ಗೊತ್ತಿರುವ ವಿಚಾರವಾಗಿದೆ. ಇಲ್ಲಿ ಸಚಿವ ಸತೀಶ ಜಾರಕಿಹೊಳಿ ಹಾಗೂ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ನಡುವೆ ನಡೆದ ಗುದ್ದಾಟದ ಬಳಿಕ ರಮೇಶ ಜಾರಕಿಹೊಳಿ ಹೆಚ್ಚು ಕಾಂಗ್ರೆಸ್ ಸಂಪರ್ಕಕ್ಕೆ ಸಿಕ್ಕಿಲ್ಲ. ಅದರಲ್ಲೂ ಜಿಲ್ಲೆಯ ಕಾಂಗ್ರೆಸ್ ಆಡಳಿತನ್ನೇ  ತಮ್ಮ ಕಪಿಮುಷ್ಠಿಯಲ್ಲಿ ಇಟ್ಟುಕೊಂಡಿರುವ ಜಾರಕಿಹೊಳಿ ಬ್ರದರ್ಸ್ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಸತೀಶ ಹೊರತು ಪಡಿಸಿದರೆ ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರದಲ್ಲಿ, ನಾಮಪತ್ರ ಸಲ್ಲಿಕೆಯ ವೇಳೆ ಒಮ್ಮಿಯೂ ಸಹ ರಮೇಶ ಜಾರಕಿಹೊಳಿ ಕಾಣಿಸಿಕೊಂಡಿಲ್ಲ. ಇವೆಲ್ಲವುಗಳನ್ನು ಗಮನಿಸಿದರೆ ಈ ಬಾರಿ ಬಿಜೆಪಿಗೆ ವರವಾಗುವುದರಲ್ಲಿ ಎರಡು ಮಾತಿಲ್ಲ.

ಆರದ ಅಸಮಾಧಾನದ ಹೊಗೆ : ರಮೇಶ ಜಾರಕಿಹೊಳಿ ಪಿಎಲ್‌ಡಿ ಬ್ಯಾಂಕ್ ಚುನಾವಣೆ ಬಳಿಕ ಹೆಚ್ಚು ಕಾಂಗ್ರೆಸ್ ಸಂಪರ್ಕದಲ್ಲಿ ಇಲ್ಲವೆಂಬುವುದು ಕಾಂಗ್ರೆಸ್ ವಲಯದಲ್ಲಿನ ಮಾತುಗಳಾಗಿವೆ. ಅಲ್ಲದೆ ಲೋಕಸಭಾ ಚುನಾವಣೆ ದಿನಾಂಕ ನಿಗಧಿಯಾದಾಗಿನಿಂದಲೂ ಸಹ ರಮೇಶ ಜಾರಕಿಹೊಳಿ ಎಲ್ಲಿಯೂ ಕಾಣಿಸಿಕೊಂಡಿಲ್ಲ. ಅಲ್ಲದೆ ಕಾಂಗ್ರೆಸ್ ಅಭ್ಯರ್ಥಿ ಪರ ಭರ್ಜರಿ ಪ್ರಚಾರ ನಡೆಸಬೇಕಾದವರೆ ಸಭೆ, ಸಮಾರಂಭಕ್ಕೆ ಗೈರಾಗುವ ಮೂಲಕ ವೈಮನಸ್ಸು ಇದೆ ಎಂಬುವುದನ್ನು ಸಾಬೀತು ಪಡಿಸಿದ್ದಾರೆ. ಇನ್ನೊಂದೆಡೆ ಗ್ರಾಮೀಣ

 

ಶಾಸಕಿ ಲಕ್ಷ್ಮೀ ಹೆಬ್ಬಾಳಕರ ತಮ್ಮ ಸಹೋದರ ಚನ್ನರಾಜ ಹಟ್ಟಿಹೊಳಿ ಬೆಳಗಾವಿ ಲೋಕಸಭಾ ಕ್ಷೇತ್ರದ  ಟಿಕೆಟ್‌ಗೆ ಲಾಭಿ ನಡೆಸಿದ್ದರು. ಆದರೆ ಟಿಕೆಟ್ ಕೈ ತಪ್ಪಿದಾಗ ಕಾಂಗ್ರೆಸ್ ಸಭೆಗೆ ಹೆಚ್ಚು ಬಾರದ ಶಾಸಕಿ ತಮ್ಮ   ಕ್ಷೇತ್ರದಲ್ಲಿ ಪ್ರಚಾರ ನಡೆಸಿದ್ದಾರೆ. ಇದರಿಂದಾಗಿ ಕಾಂಗ್ರೆಸ್ ನಾಯಕರ ನಡೆಯಿಂದಾಗಿ ಕಾರ್ಯಕರ್ತರು ಗೊಂದಲಕ್ಕೆ ಇಡಾಗಿದ್ದಾರೆ.

ಕಾಣದ ಕೈಗಳು ಬಿಜೆಪಿ ಅಭ್ಯರ್ಥಿ ಪರ : ಇನ್ನೂ ರಾಜ್ಯದಲ್ಲಿ ಕಾಂಗ್ರೆಸ್ ರಾಜಕೀಯವೇ ಒಂದು ತರಹವಾದರೆ, ಬೆಳಗಾವಿ ಜಿಲ್ಲೆಯ ರಾಜಕೀಯವೇ ಇನ್ನೊಂದು ತರಹ. ತಮ್ಮ ಸ್ಥಾನವನ್ನು ಭದ್ರ ಪಡಿಸಿಕೊಳ್ಳಲು ಒಳ ಒಪ್ಪಂದದ ರಾಜಕೀಯ ನಡೆಯುತ್ತಿವೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿಯೂ ಸಹ ಕಾಂಗ್ರೆಸ್‌ನ ಕೆಲ ಕೈಗಳು ತಮ್ಮ ಅಭ್ಯರ್ಥಿ ಪರ ಪ್ರಚಾರ ನಡೆಸುತ್ತಿದ್ದರೂ ಸಹ ಯಾರಿಗೂ ಕಾಣದಂತೆ ಕೆಲ ಕೈಗಳು ಬಿಜೆಪಿ ಅಭ್ಯರ್ಥಿ ಪರವಾಗಿದ್ದಾರೆ ಎಂಬ ಮಾತುಗಳು ಬಲವಾಗಿ ಕೇಳಿ ಬರುತ್ತಿವೆ.

ಒಟ್ಟಿನಲ್ಲಿ ಲೋಕಸಭಾ ಚುನಾವಣಾ ರಣಕಣದ ಸಮಯದಲ್ಲಿ ಒಟ್ಟಾಗಿ ಕೆಲಸ ಮಾಡಬೇಕಿದ್ದ ಕಾಂಗ್ರೆಸ್ ನಾಯಕರು ಒಳಗೊಳಗೆ ಕತ್ತಿ ಮಸಿಯುತ್ತಿರುವುದು ಬಿಜೆಪಿ ಅಭ್ಯರ್ಥಿಯ ಗೆಲುವಿನ ನಾಗಾಲೋಟಕ್ಕೆ ವರವಾಗಬಹುದು.

^^^^^^^^^^^^^^^^^^^^^^^^^^^^^^
ಸಾಹುಕಾರ್‌ನ ಆಟದಿಂದ ಕಾಂಗ್ರೆಸ್‌ಗೆ ಪೆಟ್ಟು
ಸಮ್ಮಿಶ್ರ ಸರಕಾರದ ಸಚಿವ ಸಂಪುಟ ವಿಸ್ತರಣೆಯಲ್ಲಿ ಸಚಿವ ಸ್ಥಾನ ಕಳೆದುಕೊಂಡಿರುವ ಮಾಜಿ ಸಚಿವ, ಗೋಕಾಕ ಶಾಸಕ ರಮೇಶ ಜಾರಕಿಹೊಳಿ ನಡೆ ಮಾತ್ರ ನಿಗೂಢವಾಗಿದೆ. ಬೆಳಗಾವಿ ಲೋಕಸಭಾ ಕ್ಷೆÃತ್ರದ ವ್ಯಾಪ್ತಿಗೆ ಬರುವ ಗೋಕಾಕ ವಿಧಾನಸಭಾ ಕ್ಷೆÃತ್ರದಲ್ಲಿ ರಮೇಶ ಜಾರಕಿಹೊಳಿ ಪರೋಕ್ಷವಾಗಿ ಬಿಜೆಪಿಗೆ ಬೆಂಬಲಿಸುವಂತೆ ತಮ್ಮ ಅಭಿಮಾನಿಗಳಿಗೆ ಸೂಚನೆ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ ರಮೇಶ ಜಾರಕಿಹೊಳಿಗೆ ಸಚಿವ ಸ್ಥಾನ ಕೈ ತಪ್ಪಿದಾಗಿನಿಂದಲೂ ಇಲ್ಲಿಯವರೆಗೆ ಎಲ್ಲಿಯೂ ಬಹಿರಂಗವಾಗಿ ಕಾಣಿಸಿಕೊಂಡಿಲ್ಲ. ಕಾಂಗ್ರೆಸ್‌ನ ಚಟುವಟಿಕೆಯಿಂದಲೂ ದೂರ ಉಳಿದಿರುವ ರಮೇಶ ನಡೆ ಮಾತ್ರ ನಿಗೂಢವಾಗಿದೆ. ಈಗಾಗಲೇ ರಮೇಶ ಜಾರಕಿಹೊಳಿ ಬಿಜೆಪಿಗೆ ಸೇರ್ಪಡೆಗೊಳ್ಳಲಿದ್ದಾರೆ ಎನ್ನುವ ವಿಷಯ ದಟ್ಟವಾಗಿ ಹರಿದಾಡಿದ್ದು ಕಾಂಗ್ರೆಸ್ ಕಾರ್ಯಕರ್ತರಲ್ಲಿ ಇಕ್ಕಟ್ಟಿಗೆ ಸಿಲುಕಿಸಿದ್ದು ಮಾತ್ರ ಸತ್ಯ.
^^^^^^^^^^^^^^^^^^^^^^^^^^^

loading...