ದ್ವಿತೀಯ ಪಿಯು ಫಲಿತಾಂಶ ಏ.೧೭ಕ್ಕೆ ಪ್ರಕಟವಾಗುವುದಿಲ್ಲ ಸಿ.ಶಿಖಾ ಸ್ಪಷ್ಟನೆ

0
17

ಬೆಂಗಳೂರು: ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಏಪ್ರಿಲ್ ೧೭ಕ್ಕೆ ಪ್ರಕಟವಾಗುವುದಿಲ್ಲ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕಿ ಸಿ.ಶಿಖಾ ಅವರು ಗುರುವಾರ ಸ್ಪಷ್ಟಪಡಿಸಿದ್ದಾರೆ.
ಇದಕ್ಕೂ ಮುನ್ನ ಕೆಲ ಮಾಧ್ಯಮಗಳು ಏಪ್ರಿಲ್ ೧೭ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ ಎಂದು ವರದಿ ಮಾಡಿದ್ದವು. ಆದರೆ ಮಾಧ್ಯಮಗಳ ವರದಿ ಸತ್ಯಕ್ಕೆ ದೂರವಾದದ್ದು ಎಂದು ಶಿಖಾ ಹೇಳಿದ್ದಾರೆ.
ಮೌಲ್ಯಮಾಪನದ ಬಳಿಕ ಅಂಕಗಳನ್ನು ಆನ್ ಲೈನ್ ಮೂಲಕ ಸರ್ವರ್ ಗೆ ಸೇರಿಸುವ ಕ್ರಮದಿಂದಾಗಿ ಈ ಬಾರಿ ಫಲಿತಾಂಶ ಬೇಗ ಪ್ರಕಟಿಸಲು ಸಾಧ್ಯವಾಗಲಿದೆ. ಆದರೆ ಫಲಿತಾಂಶ ಪ್ರಕಟಿಸುವ ದಿನಾಂಕ ಇನ್ನೂ ನಿಗದಿ ಮಾಡಿಲ್ಲ. ಒಂದೆರಡು ದಿನಗಳಲ್ಲಿ ದಿನಾಂಕ ಪ್ರಕಟಿಸಲಾಗುವುದು ಎಂದರು.೨೦೧೯ನೇ ಸಾಲಿನಲ್ಲಿ ೬.೭೩ ಲಕ್ಷ ವಿದ್ಯಾರ್ಥಿಗಳು ದ್ವಿತೀಯ ಪಿಯು ಪರೀಕ್ಷೆ ಬರೆದಿದ್ದಾರೆ. ಇದರಲ್ಲಿ ಒಟ್ಟು ೧.೯೪ ಲಕ್ಷ ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆಗೆ ಹಾಜರಾಗಲು ನೋಂದಾಯಿಸಿಕೊಂಡಿದ್ದಾರೆ.

loading...